ಫೆ.25ಕ್ಕೆ ಕಾಮಧೇನು ಗೋವಿಜ್ಞಾನ ಪರೀಕ್ಷೆ
Team Udayavani, Jan 7, 2021, 1:34 AM IST
ಹೊಸದಿಲ್ಲಿ: ಗೋವುಗಳ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಂಬಂಧ ಕೇಂದ್ರ ಪಶುಸಂಗೋಪನ ಸಚಿವಾಲಯ ಗೋ ವಿಜ್ಞಾನ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಫೆ.25ರಂದು ಈ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಯಾರೂ ಬೇಕಾದರೂ ಬರೆಯಬಹುದು.
ಪಶುಸಂಗೋಪನ ಇಲಾಖೆ ಅಡಿ ಬರುವ ರಾಷ್ಟ್ರೀಯ ಕಾಮಧೇನು ಆಯೋಗ ಈ ಪರೀಕ್ಷೆ ನಡೆಸುತ್ತಿದೆ. ಯುವಕರಲ್ಲಿ ಮತ್ತು ಜನರಲ್ಲಿ ಗೋವುಗಳ ಬಗ್ಗೆ ಅರಿವು ಮೂಡಿಸುವುದೇ ಈ ಪರೀಕ್ಷೆಯ ಉದ್ದೇಶ ಎಂದು ಆಯೋಗದ ಅಧ್ಯಕ್ಷ ವಲ್ಲಭಬಾಯ್ ಕಥಿರಿಯಾ ತಿಳಿಸಿದ್ದಾರೆ. ಪ್ರಾಥಮಿಕ, ಪ್ರೌಢ, ಕಾಲೇಜು ಹಂತದ ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರು “ಕಾಮಧೇನು ಗೋ ವಿಜ್ಞಾನ ಪ್ರಚಾರ-ಪ್ರಸಾರ ಪರೀಕ್ಷೆ’ ತೆಗೆದುಕೊಳ್ಳಬಹುದು. ಇದಕ್ಕೆ ಬೇಕಾದ ವಿಷಯಗಳನ್ನೂ ತನ್ನ ವೆಬ್‌ಸೈಟ್‌ನಲ್ಲಿ ನೀಡುವುದಾಗಿ ಆಯೋಗ ತಿಳಿಸಿದೆ. ಪ್ರಶ್ನೆಗಳು ಸಂಪೂರ್ಣವಾಗಿ ಆಯ್ಕೆಯ ರೀತಿ ಇರಲಿವೆ, ತತ್‌ಕ್ಷಣವೇ ಫಲಿತಾಂಶ ಪ್ರಕಟವಾಗಲಿದ್ದು, ಪ್ರಮಾಣಪತ್ರವನ್ನೂ ನೀಡಲಾಗುತ್ತದೆ. ಅಷ್ಟೇ ಅಲ್ಲ, ಮೆರಿಟ್‌ನಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಬಹುಮಾನವನ್ನೂ ನೀಡಲಾಗುತ್ತದೆ. ಅಂದ ಹಾಗೆ ಈ ಪರೀಕ್ಷೆಗೆ ಯಾವುದೇ ಶುಲ್ಕವಿರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.