ಜ.8-9ಕ್ಕೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Team Udayavani, Jan 7, 2021, 6:12 PM IST
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹಾಗೂ ಪೂರ್ವವಲಯದ ಮೋಡಗಳ ಚಲನೆ ಹೆಚ್ಚಾಗಿರುವುದರಿಂದ ಜ.8 ಮತ್ತು ಜ.9ಕ್ಕೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿ ಒಟ್ಟು ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜ.8 ಮತ್ತು ಜ.9ಕ್ಕೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 64.5 ಮಿ.ಮೀನಿಂದ 115.5 ಮಿ.ಮೀನವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಇರುವುದರಿಂದ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಗುರುವಾರ ಸಹ ಹಲವೆಡೆ ಭಾರೀ ಮಳೆಯಾಗಿರುವುದು ವರದಿಯಾಗಿದೆ.
ಇದನ್ನೂ ಓದಿ:ತೆಲಂಗಾಣ : ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಹಿಮಾ ಕೋಹ್ಲಿ ಪ್ರಮಾಣ ವಚನ ಸ್ವೀಕಾರ
ಮುಂದಿನ 48 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ವಿವಿಧೆಡೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಜ.12ರ ವರೆಗೆ ಮಳೆ: ರಾಜ್ಯದ ಏಳು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅರ್ಲಟ್ ಇರುವುದರೊಂದಿಗೆ ಜ.12ರ ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾದರೆ, ಇನ್ನು ಕೆಲವೆಡೆ ತುಂತುರು ಮಳೆಯಾಗಲಿದೆ. ಗರಿಷ್ಠ ತಾಪಮಾನ 25 ಡಿ. ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿ.ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.