ಹುಡುಕಾಟದಲ್ಲೇ ಬಡವಾದ ಯೋಜನೆ! 2015ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ


Team Udayavani, Jan 8, 2021, 5:10 PM IST

ಹುಡುಕಾಟದಲ್ಲೇ ಬಡವಾದ ಯೋಜನೆ! 2015ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ

ಸಿಂಧನೂರು: ಬರೋಬ್ಬರಿ ಹದಿನಾರು ವರ್ಷದಿಂದ ಇಲ್ಲಿನ ನಗರಸಭೆ ಆಡಳಿತ ಮಂಡಳಿ ವಾಜಪೇಯಿ ನಗರ ವಸತಿ ಯೋಜನೆಯಡಿ ನಿವೇಶನ ಕಲ್ಪಿಸಲು ಅರ್ಹರನ್ನು ಹುಡುಕುತ್ತಲೇ ಇದೆ. ಆದರೆ, 2021ಕ್ಕೂ ಪಟ್ಟಿ ಅಂತಿಮವಾಗಿಲ್ಲ. 2015-16ನೇ ಸಾಲಿನಲ್ಲಿ ಅನುಷ್ಠಾನಗೊಳಿಸಬೇಕಿದ್ದ ಯೋಜನೆಯೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಮೂಲೆಗುಂಪಾಗಿದೆ.

ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ರಚನೆಯಾಗುವ ನಗರ ಆಶ್ರಯ ಸಮಿತಿಗೆ ಅರ್ಹರನ್ನು ಹುಡುಕುವುದೇ ದೊಡ್ಡ ಸವಾಲು ಎಂಬಂತಾಗಿದೆ. ನಗರ ಪ್ರದೇಶದಲ್ಲಿ ವಾಸವಿದ್ದರೂ ಸ್ವಂತಕ್ಕೊಂದು ಜಾಗ ಹೊಂದಿಲ್ಲದ ಬಡವರಿಂದ 6 ವರ್ಷದ ಹಿಂದೆಯೇ ಅರ್ಜಿ ಆಹ್ವಾನಿಸಲಾಗಿತ್ತು. ತಮ್ಮ ದಾಖಲೆಯೊಂದಿಗೆ ನಿಗದಿತ ಅರ್ಜಿಗಳನ್ನು ತುಂಬಿದ ನಿವೇಶನ ರಹಿತರು ಜಾಗದ ನಿರೀಕ್ಷೆಯಲ್ಲೇ ದಿನ ಕಳೆಯುತ್ತಿದ್ದಾರೆ.

ಶಾಸಕರು ಬದಲಾಗುತ್ತಿದ್ದಂತೆ ನಗರ ಆಶ್ರಯ ಸಮಿತಿಯ ಅಧ್ಯಕ್ಷರು ಬದಲಾಗುತ್ತಾರೆ. ಹಾಗೆ, ಪಟ್ಟಿ ಪರಿಷ್ಕರಣೆಯೂ ಮುಂದುವರಿಯುತ್ತದೆ. ಇದರ ಪರಿಣಾಮ ಅರ್ಹರನ್ನು ಪತ್ತೆ ಹಚ್ಚುವ ಪರೀಕ್ಷೆಯಲ್ಲಿ ಪಾಸಾಗಲು ನಗರಸಭೆ ಮತ್ತೂಮ್ಮೆ ಸಮೀಕ್ಷೆಯ ಮೊರೆ ಹೋಗಿದೆ.

ಇದನ್ನೂ ಓದಿ:ಮುಂಬೈ ಷೇರುಪೇಟೆ ಸೆನ್ಸೆಕ್ಸ್ ದಾಖಲೆ ಏರಿಕೆ, ನಿಫ್ಟಿ ಸಾರ್ವಕಾಲಿಕ ದಾಖಲೆ

ಏನಿದು ವ್ಯಸನ?: ಮಾರ್ಚ್‌ 3, 2018ರಂದು ನಡೆದ ನಗರ ಆಶ್ರಯ ಸಮಿತಿ ಸಭೆಯಲ್ಲಿ ವಾಜಪೇಯಿ ನಗರ ವಸತಿ ಯೋಜನೆಗೆ ಸಂಬಂಧಿ ಸಿ ಚರ್ಚಿಸಿ, ಕೆಲವು ಮಾರ್ಪಾಡಿಗೆ ಸೂಚಿಸಲಾಗಿತ್ತು. ಅಲ್ಲಿಗೆ 3,336 ಅರ್ಜಿ ಸಲ್ಲಿಕೆಯಾಗಿದ್ದರೆ, 1,813 ಫಲಾನುಭವಿಗಳು ಅರ್ಹವೆಂದು ಹೇಳಲಾಗಿತ್ತು. ಸೆಪ್ಟೆಂಬರ್‌ 29, 2018ರ ಸಭೆಯಲ್ಲಿ ಮತ್ತೆ ಅರ್ಜಿ ಆಹ್ವಾನಿಸಿ, ಮರುಸಮೀಕ್ಷೆ
ನಡೆಸಲು ಸೂಚಿಸಲಾಗಿತ್ತು ಎನ್ನುತ್ತಾರೆ ಅಧಿಕಾರಿಗಳು.

ಅರ್ಜಿದಾರರ ಸಂಖ್ಯೆ 5,826ಕ್ಕೆ ಏರಿಕೆಯಾದ ಮೇಲೆ ಅದರಲ್ಲಿ ಅರ್ಹರನ್ನು ಶೋಧಿಸಲು ಮತ್ತೆ ದುರ್ಬೀನು ಹಿಡಿದು ಹೊರಡಲಾಗುತ್ತಿದೆ. ವಾಜಪೇಯಿ ನಗರ ವಸತಿ ಯೋಜನೆಯಡಿ 600 ಬಡ ಕುಟುಂಬಗಳಿಗೆ ವಸತಿ ಕಲ್ಪಿಸಲು ಮುಂದಾದ ಸರಕಾರದ ಯೋಜನೆ, ಮತ್ತೆ ಪರೀಕ್ಷೆಗೆ ಒಳಪಟ್ಟಿದೆ. ಇದೀಗ ನಗರಸಭೆ ಸಿಬ್ಬಂದಿ ಅರ್ಜಿದಾರರ ವಿಳಾಸಕ್ಕೆ ತೆರಳಿ ಅವರನ್ನು ಅರ್ಹ-ಅನರ್ಹರೆಂದು ಪತ್ತೆ ಹಚ್ಚಲು ಆರಂಭಿಸಿದ್ದಾರೆ.

ಸರಕಾರದ ಬೊಕ್ಕಸಕ್ಕೆ ಹೊರೆ: ಆಯಾ ವರ್ಷ ಇಲ್ಲವೇ ತಾಂತ್ರಿಕ, ಆಡಳಿತಾತ್ಮಕ ತೊಡಕುಗಳಿದ್ದರೆ ಮುಂದಿನ ವರ್ಷಕ್ಕಾದರೂ ಪರಿಹರಿಸಿಕೊಳ್ಳಬೇಕು. ಆದರೆ, ನಗರದಲ್ಲಿ ವಸತಿ ಕಲ್ಪಿಸುವ ಯೋಜನೆಗೆ ಅಂತಹ ಯೋಗ ಕೂಡಿಬಂದಿಲ್ಲ. ಬಪ್ಪೂರು ರಸ್ತೆಯಲ್ಲಿ ವಸತಿ ಯೋಜನೆಗಾಗಿ ಸರಕಾರದಿಂದ 18.12 ಎಕರೆ ಜಮೀನು ಖರೀದಿಸಲಾಗಿದೆ. ಕನಕದಾಸ ಕಾಲೇಜ್‌ ಸಮೀಪದಲ್ಲಿ 11 ಎಕರೆ ಜಮೀನು ಖರೀದಿಸಲಾಗಿದೆ. ನಗರದ ಬಡವರಿಗೆ ನಿವೇಶನ ಕಲ್ಪಿಸುವ ಉದ್ದೇಶದಿಂದಲೇ ಈ ಎಲ್ಲ ಜಮೀನುಗಳಿಗೆ ಮಾರುಕಟ್ಟೆ ದರ ಆಧರಿಸಿ ಸರಕಾರದಿಂದ ಖರೀದಿಸಲಾಗಿದೆ. ಸರಕಾರದ ಬೊಕ್ಕಸಕ್ಕೆ ಭಾರಿ ಪ್ರಮಾಣದ ಖರ್ಚು ಬಿದ್ದಿದೆ. ಅದರ ಪ್ರಯೋಜನ ಜನರಿಗೆ ತಲುಪಿಲ್ಲ.

ಬೇಕಾದಷ್ಟು ಸರಕಾರಿ ಸುಪರ್ದಿಯಲ್ಲಿರುವ ಜಮೀನು ಲಭ್ಯವಿದೆ. ಅರ್ಹರನ್ನು ಗುರುತಿಸಿ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆ ಮಾತ್ರ ಕಬ್ಬಿಣದ ಕಡಲೆಯಾಗಿದೆ. ಆಂತರಿಕವಾಗಿ ಏರ್ಪಟ್ಟಿರುವ ರಾಜಕೀಯ ಸಂಘರ್ಷವೇ ಈ ವಿಳಂಬ ನೀತಿಗೆ
ಕಾರಣವೆಂಬ ಮಾತು ಕೇಳಿಬಂದರೂ ನಗರಸಭೆ ಅಧಿಕಾರಿಗಳ ಬಳಿ ಸ್ಪಷ್ಟ ಉತ್ತರವಿಲ್ಲ. ಹೊಸದಾಗಿ ಅರ್ಜಿ ಹಾಕುವುದಕ್ಕೆ ಅವಕಾಶವಿಲ್ಲ; ಹಾಕಿರುವ ಹಳೇ ಅರ್ಜಿಗಳನ್ನು ಇತ್ಯರ್ಥಪಡಿಸುವುದಕ್ಕೆ ಇನ್ನೆಷ್ಟು ವರ್ಷ ಕಾಯಬೇಕು ಎನ್ನುವುದೇ ನಿರಾಶ್ರಿತರ ಪ್ರಶ್ನೆ.

ಟಾಪ್ ನ್ಯೂಸ್

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.