ಸಂಕ್ರಾಂತಿ ಬಳಿಕ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಆಫ್‌ಲೈನ್ ತರಗತಿ ಆರಂಭ : ಡಿಸಿಎಂ
Team Udayavani, Jan 8, 2021, 6:07 PM IST
ಬೆಂಗಳೂರು: ಸಂಕ್ರಾತಿ ಹಬ್ಬದ ನಂತರ ಪದವಿ, ಸ್ನಾತಕೋತ್ತರ, ಡಿಪ್ಲೊಮೋ ಮತ್ತು ಇಂಜಿನಿಯರಿಂಗ್ ತರಗತಿಯ ಪ್ರಥಮ ಮತ್ತು ದ್ವಿತೀಯ ವರ್ಷದ ಆಫ್ ಲೈನ್ ತರಗತಿಗಳನ್ನು ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಶುಕ್ರವಾರ ಸರಕಾರಿ ಮತ್ತು ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಅವರು, ಈ ಸಂಬಂಧ ಶೀಘ್ರದಲ್ಲೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್ ತರಗತಿಗಳ ಅಂತಿಮ ವರ್ಷದ ಸೆಮಿಸ್ಟರ್‌ನ ಆಫ್ಲೈನ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಪದವಿ ಹಂತದ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿ ಆರಂಭಿಸುವ ಕುರಿತಂತೆ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ:ನೂತನ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿ ಮಾರುಕಟ್ಟೆಗೆ ಬಿಡುಗಡೆ, ಬೆಲೆ ಎಷ್ಟು?
ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದ ಎಲ್ಲ ಕುಲಪತಿಗಳು ನೇರ ತರಗತಿಗಳನ್ನು ಆರಂಭಿಸುವಂತೆ ಸರಕಾರಕ್ಕೆ ಸಲಹೆ ನೀಡಿದರು. ಹೀಗಾಗಿ ಅದಕ್ಕೆ ಸಂಬಂಧಿಸಿದ ವರದಿಯನ್ನು ಕೂಡಲೇ ಕಳಿಸುವಂತೆ ಕೋರಲಾಗಿದೆ. ನಂತರ ಮೊದಲ ಮತ್ತು ದ್ವಿತೀಯ ವರ್ಷದ ನೇರ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಯಾವ ದಿನದಿಂದ ಆರಂಭಿಸಬೇಕು ಎಂಬ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈಗಾಗಲೇ ಅಂತಿಮ ವರ್ಷದ ವಿದ್ಯಾರ್ಥಿಗಳ ನೇರ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಆ ಯಶಸ್ಸಿನ ಹಿನ್ನೆಲೆಯಲ್ಲಿ ಉಳಿದ ತರಗತಿಗಳನ್ನು ಆರಂಭಿಸಲಾಗುವುದು. ಯುಜಿಸಿ ಮತ್ತು ಕೋವಿಡ್ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶೈಕ್ಷಣಿಕ ವೇಳಾ ಪಟ್ಟಿ ಕುರಿತಂತೆ ಚರ್ಚೆ:
ಸಭೆಯಲ್ಲಿ ಹಲವು ವಿಚಾರಗಳು ಕುರಿತಂತೆ ಚರ್ಚೆ ನಡೆಯಿತು. ಮುಖ್ಯವಾಗಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದರು.
ಆನ್‌ಲೈನ್ ಪರೀಕ್ಷೆಗಳಿಗಿಂತ ಪೆನ್ ಮತ್ತು ಪೇಪರ್ ಆಧಾರಿತ ಆಫ್‌ಲೈನ್ ಪರೀಕ್ಷೆಯೇ ಉತ್ತಮ ಎಂದು ವಿಟಿಸಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸೇರಿದಂತೆ ಎಲ್ಲ ಕುಲಪತಿ, ಕುಲ ಸಚಿವರು ಸಲಹೆ ಮಾಡಿದರು. ಇದನ್ನು ಸರಕಾರ ಗಂಭೀರವಾಗಿ ಪರಿಶೀಲಿಸಲಿದೆ. ಯುಜಿಸಿ ನಿಯಮದಂತೆ ಮಾರ್ಚ್‌ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ, ಇನ್ನು ಹಲವಾರು ವಿವಿಗಳ ವ್ಯಾಪ್ತಿಯಲ್ಲಿ ಪಾಠಗಳು ಮುಗಿಯದ ಕಾರಣ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ. ಶೀಘ್ರವೇ ಈ ಬಗ್ಗೆ ಅಂತಿಮ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ಬಸ್ ಪಾಸ್ ಮತ್ತು ಹಾಸ್ಟೆಲ್ ಸೌಲಭ್ಯ
ಕೆಲವು ಕಡೆಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಬಗ್ಗೆ ಗೊಂದಲಗಳು ಕೇಳಿಬಂದಿವೆ. ಈ ಬಗ್ಗೆ ಶೀಘ್ರದಲ್ಲೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಪಾಸ್ ಇಟ್ಟುಕೊಂಡೇ ಓಡಾಡಬಹುದಾ? ಇಲ್ಲವಾ? ಎಂಬ ಬಗ್ಗೆ ಮಾಹಿತಿ ನೀಡಲಾಗುವುದು ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ತರಗತಿಗಳು ಆರಂಭವಾದ ಮೇಲೆ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಹೇಳಿದರು.
ಆನ್‌ಲೈನ್ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಸೇರಿದಂತೆ ರಾಜ್ಯದ ಎಲ್ಲ ವಿವಿಗಳ ಕುಲಪತಿ, ಕುಲ ಸಚಿವರು ಪಾಲ್ಗೊಂಡಿದ್ದರು.ರಾಮನಗರ ಪ್ರವಾಸದಲ್ಲಿರುವ ಅಶ್ವತ್ಥನಾರಾಯಣ ಅವರು ಅಲ್ಲಿಯಿಂದಲೇ ವಿಡಿಯೊ ಸಂವಾದ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.