ದ.ಕ. ಜಿಲ್ಲೆಯಲ್ಲಿ ಅವಧಿಗೂ ಮುನ್ನ ಹೂ ಬಿಟ್ಟ “ಕಕ್ಕೆ’ ಮರ


Team Udayavani, Jan 9, 2021, 2:10 AM IST

ದ.ಕ. ಜಿಲ್ಲೆಯಲ್ಲಿ ಅವಧಿಗೂ ಮುನ್ನ ಹೂ ಬಿಟ್ಟ “ಕಕ್ಕೆ’ ಮರ

ಮಹಾನಗರ, ಜ. 8: ಸಾಮಾನ್ಯವಾಗಿ ಮಾರ್ಚ್‌, ಎಪ್ರಿಲ್‌ ತಿಂಗಳಿನಲ್ಲಿ ಹೂ ಬಿಡುವ “ಕಕ್ಕೆ’ ಮರವು ಹವಾಮಾನ ವೈಪರೀತ್ಯದ ಪರಿಣಾಮದಿಂದಾಗಿ ಅವಧಿಗೂ ಮುನ್ನ ಹೂ ಬಿಟ್ಟಿದೆ.

ದ.ಕ. ಜಿಲ್ಲೆಯಲ್ಲಿ ಕಕ್ಕೆ ಮರವನ್ನು “ಕೊಂದೆ’ ಮರವೆಂದು ಕರೆಯಲಾಗುತ್ತದೆ. ಕೇರಳದಲ್ಲಿ ವಿಷು ಆಚ ರಣೆ ವೇಳೆ ಇಡೀ ಮರದಲ್ಲಿ ಸೊಗಸಾಗಿ ಕಾಣುವ ಹಳದಿ ವರ್ಣದ ಗೊಂಚಲನ್ನು ಬಿಡುವ ಕಕ್ಕೆ ಮರದ ಹೂಗಳನ್ನು ಮತ್ತು ಅದರ ಎಲೆಗಳನ್ನು ದೇವರ ಕೋಣೆಯಲ್ಲಿ ಚಿನ್ನ, ನಾಣ್ಯಗಳೊಟ್ಟಿಗೆ ಇಟ್ಟು ಪೂಜಿಸಲಾಗುತ್ತದೆ.

ಸಾಮಾನ್ಯವಾಗಿ ಮಾರ್ಚ್‌ ಮಾಸಾಂತ್ಯ ದಿಂದ ಎಪ್ರಿಲ್‌ ತಿಂಗಳ ಆರಂಭದಲ್ಲಿ ಕಕ್ಕೆ ಮರದಲ್ಲಿ ಹೂವುಗಳು ಬಿಡುತ್ತವೆ. ಈ ಮರವು ಹೂವು ಬಿಟ್ಟ ಸುಮಾರು ವಾರದಿಂದ ಹತ್ತು ದಿನಗಳೊಳಗಾಗಿ ಆ ಭಾಗದಲ್ಲಿ ಮಳೆ ಬರುವುದು ವಿಶೇಷ. ಆದರೆ ಮಾರ್ಚ್‌-ಎಪ್ರಿಲ್‌ ತಿಂಗಳಲ್ಲಿ ಹೂ ಬಿಡುವ ಕಕ್ಕೆ ಮರವು ವಾತಾವರಣದ ಏರುಪೇರಿನ ಪರಿಣಾಮದಿಂದಾಗಿ ಡಿಸೆಂಬರ್‌ ತಿಂಗಳಲ್ಲಿಯೇ ಹೂ ಬಿಡಲು ಆರಂಭಿಸಿದೆ. ಇದಕ್ಕೆ ತಕ್ಕಂತೆ ದ.ಕ. ಜಿಲ್ಲೆಯ ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಅನೇಕ ಕಡೆಗಳಲ್ಲಿ ಈಗಾಗಲೇ ಮಳೆಯೂ ಆರಂಭವಾಗಿದೆ.

ಪರಿಸರ ನಾಶದಿಂದ ಹವಾಮಾನ ವೈಪರಿತ್ಯ :

ಕಾಡು, ಮರಗಳ ನಾಶ, ಹಲವೆಡೆ ಬಹು ಮಹಡಿ ಕಟ್ಟಡ, ಫ್ಲಾಟ್‌ಗಳು, ಕಾಂಕ್ರೀಟ್‌, ಇಂಟರ್‌ಲಾಕ್‌ ಅಳವಡಿಸಿದ ಪರಿಣಾಮ ಹಗಲು ಹೊತ್ತಿನಲ್ಲಿ ಗರಿಷ್ಠ ಉಷ್ಣಾಂಶ ಏರಿಕೆಯಾಗುತ್ತಿದೆ. ಇದರಿಂದಾಗಿ ಹೊರಗಿನ ವಾತಾವರಣ ಬದಲಾಗಿ ಸೆಕೆಯ ಬಿಸಿ ರಾತ್ರಿ ಹೊತ್ತು ಕೂಡ ಇರುತ್ತದೆ. ಇನ್ನು, ಮಂಗಳೂರಿನ ಮಾರುಕಟ್ಟೆಗೆ ಡಿಸೆಂಬರ್‌ ತಿಂಗಳಲ್ಲೇ ಹಲಸು ಮಾರಾಟಕ್ಕೆ ಬಂದಿದೆ.

ಕಕ್ಕೆ ಮರಕ್ಕೆ ಆರೋಗ್ಯ ಗುಣ :

ಸಸ್ಯಶಾಸ್ತ್ರಜ್ಞ ಎಂ. ದಿನೇಶ್‌ ನಾಯಕ್‌ ಅವರು ಪ್ರತಿಕ್ರಿಯಿಸಿ, “ಕಕ್ಕೆ ಮರವನ್ನು ಇಂಗ್ಲಿಷ್‌ನಲ್ಲಿ “ಕಾಸಿಯ ಪಿಸ್ತೂಲ’ ಎಂದು, ಸಸ್ಯಶಾಸ್ತ್ರದಲ್ಲಿ “ಇಂಡಿಯನ್‌ ಲಬರ್ನಮ್‌ ಟ್ರೀ’, ಸಂಸ್ಕೃತದಲ್ಲಿ ಈ ಮರವನ್ನು “ಅರಗ್ವಧ’ ಎಂದು ಕರೆಯಲಾಗುತ್ತದೆ. ಆಯುರ್ವೇದದಲ್ಲಿ ಇದರ ಮರದ ಕೆತ್ತೆಯಿಂದ “ಧಾರಿಷ್ಟ’ ಎಂಬ ಮದ್ದನ್ನು ತಯಾರಿಸಲಾಗುತ್ತಿದ್ದು, ಇಡೀ ಮರದ ತೊಗಟೆ, ಎಲೆಗಳು, ಕೋಡು, ಬೀಜಗಳು, ಹೂವುಗಳನ್ನು ನಿತ್ರಾಣ, ಕೆಮ್ಮು, ವಾತ, ಕುಷ್ಟರೋಗ, ಶೀತ ಹೀಗೆ ಹಲವಾರು ರೋಗ ನಿವಾರಕವಾಗಿ ಉಪಯೋಗವಾಗುತ್ತದೆ’ ಎನ್ನುತ್ತಾರೆ.

 

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.