ಸ್ಯಾಂಡಲ್‌ವುಡ್‌ಗೆ ಮತ್ತೂರ್ವ ನಿರ್ದೇಶಕಿ 

Team Udayavani, Jan 9, 2021, 11:33 AM IST

ಸ್ಯಾಂಡಲ್‌ವುಡ್‌ಗೆ ಮತ್ತೂರ್ವ ನಿರ್ದೇಶಕಿ 

ಸ್ಯಾಂಡಲ್‌ವುಡ್‌ಗೆ ಮತ್ತೂರ್ವ ನಿರ್ದೇಶಕಿ  ಸ್ಯಾಂಡಲ್‌ವುಡ್‌ನ‌ಲ್ಲಿ ಮಹಿಳಾ ನಿರ್ದೇಶಕರ ಸಂಖ್ಯೆ ಕಡಿಮೆಯಿದ್ದರೂ, ಅದರಲ್ಲಿ
ಅನೇಕ ನಿರ್ದೇಶಕಿಯರು ತಮ್ಮ ವಿಭಿನ್ನ ಚಿತ್ರಗಳ ಮೂಲಕವೇ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಮಹಿಳಾ ನಿರ್ದೇಶಕರ ಸಾಲಿಗೆ ಈ ಬಾರಿ ಮತ್ತೂಂದು ಹೆಸರು ಸೇರ್ಪಡೆಯಾಗುತ್ತಿದೆ. ಆ ಹೆಸರು ವಿಸ್ಮಯಾ ಗೌಡ ಅವರದ್ದು. ಕೆಲ ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ, ಜೊತೆಗೆ ಮೋಟಿವೇಷನಲ್‌ ಸ್ಪೀಕರ್‌ ಆಗಿ ಗುರುತಿಸಿಕೊಂಡಿರುವ ವಿಸ್ಮಯಾ ಗೌಡ, ಈಗ ತಮ್ಮದೇ ಕಥೆಯೊಂದನ್ನು ನಿರ್ದೇಶಿಸಿ ತೆರೆಮೇಲೆ ತರುವ ತಯಾರಿಯಲ್ಲಿದ್ದಾರೆ.

ಈ ಬಗ್ಗೆ ಮಾತನಾಡುವ ವಿಸ್ಮಯಾ ಗೌಡ, “ಇದೊಂದು ಕ್ಯೂಟ್‌ ರೊಮ್ಯಾಂಟಿಕ್‌ ಲವ್‌ಸ್ಟೋರಿ ಸಿನಿಮಾ. ಕಳೆದ ಎರಡು-ಮೂರು ವರ್ಷದಿಂದ ಈ ಕಥೆಗೆಯ ಮೇಲೆ ವರ್ಕ್‌ ಮಾಡಿ ಸ್ಕ್ರಿಪ್ಟ್ ಮಾಡಿದ್ದೇನೆ. ಇಲ್ಲಿಯವರೆಗೆ ಕನ್ನಡ ಸಿನಿಮಾಗಳಲ್ಲಿ ಅನೇಕ ಕ್ಯೂಟ್‌ ಜೋಡಿಗಳನ್ನು ಸ್ಕ್ರೀನ್‌ ಮೇಲೆ ನೋಡಿದ್ದೀರಿ. ನಮ್ಮ ಸಿನಿಮಾದಲ್ಲೂ ಅಂಥದ್ದೇ ಕ್ಯೂಟ್‌ ಜೋಡಿಗಳನ್ನು ನೋಡಬಹುದು. ಸದ್ಯ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ಟೈಟಲ್‌ ಕೂಡ ಫಿಕ್ಸ್‌ ಆಗಿದೆ. ರೊಮ್ಯಾಂಟಿಕ್‌ ಲವ್‌ ಸ್ಟೋರಿ ಸಿನಿಮಾ ಆಗಿರುವುದರಿಂದ, ಇದೇ ಜ. 14ಕ್ಕೆ ವ್ಯಾಲೆಂಟೈನ್ಸ್‌ ಡೇ ಯಂದು ಸಿನಿಮಾ ಟೈಟಲ್‌ ಅನೌನ್ಸ್‌ ಮಾಡಲಿದ್ದೇವೆ. ಇದೇ ತಿಂಗಳ ಕೊನೆಯೊಳಗೆ ಸಿನಿಮಾ ಸೆಟ್ಟೇರಿಸುವ ಪ್ಲಾನ್‌ನಲ್ಲಿದ್ದೇವೆ’ ಎನ್ನುತ್ತಾರೆ.

ಇದನ್ನೂ ಓದಿ:ಈ ವರ್ಷವೂ ಬಜೆಟ್ ನಲ್ಲಿ 40- 50 ಸಾವಿರ ಕೋಟಿ ಖೋತಾ : ಸಿಎಂ ಯಡಿಯೂರಪ್ಪ

ಇನ್ನು ವಿಸ್ಮಯಾ ಗೌಡ ಅವರ ಕಥೆಯಲ್ಲಿ “ಬಿಗ್‌ಬಾಸ್‌’ ಸ್ಪರ್ಧಿ ಕಂ ಡ್ಯಾನ್ಸರ್‌ ಕಿಶನ್‌ ಬಿಳಗಲಿ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿ ದ್ದಾರೆ. ಇಬ್ಬರು ನಾಯಕರಿರುವ ಈ ಚಿತ್ರದಲ್ಲಿ ಪ್ರವೀಣ್‌ ಎಂಬ ಮತ್ತೋರ್ವ ನಟ ಕೂಡ ತೆರೆಮೇಲೆ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇಬ್ಬರೂ ನಾಯಕ ನಟರಿಗೂ ಬಿಗ್‌ ಸ್ಕ್ರೀನ್‌ ಮೇಲೆ ಇದು ಮೊದಲ ಪ್ರಯತ್ನ. ತಮ್ಮ
ಹೆಸರನ್ನು ಸಾತ್ವಿಕಾ ಎಂದು ಬದಲಾಯಿಸಿ ಕೊಂಡಿರುವ, ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಪುತ್ರಿ ಶ್ರಾವ್ಯಾ ರಾವ್‌ ಈ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 2 ವರ್ಷದಿಂದ ಸಿನಿಮಾಗಳಿಂದ ಕೊಂಚ ಗ್ಯಾಪ್‌ ತೆಗೆದು ಕೊಂಡಿದ್ದ ಸಾತ್ವಿಕಾ ಉರೂಫ್ ಶ್ರಾವ್ಯಾ ರಾವ್‌ ಈ ಚಿತ್ರದ ಮೂಲಕ ಕಂ ಬ್ಯಾಕ್‌ ಮಾಡುತ್ತಿದ್ದಾರೆ.

“ಸದ್ಯ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಫೈನಲ್‌ ಹಂತದಲ್ಲಿದ್ದು, ಕಲಾವಿದರಿಗೆ ವರ್ಕ್‌ಶಾಪ್‌ ಮಾಡುತ್ತಿದ್ದೇವೆ. ಮುಹೂರ್ತವಾಗುತ್ತಿದ್ದಂತೆ, ಈ ಸಿನಿಮಾದ ಶೂಟಿಂಗ್‌ ಆರಂಭಿಸಲು ಪ್ಲಾನ್‌ ಮಾಡಿಕೊಂಡಿದ್ದೇವೆ. ಕೂಡಗು, ಮೈಸೂರು,
ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ. ನಿರ್ದೇಶನದ ಜೊತೆಗೆ ನಿರ್ಮಾಣದ ಹೊಣೆ ಕೂಡ ನಾನೇ ವಹಿಸಿಕೊಂಡಿದ್ದೇನೆ. ಚಿತ್ರಕ್ಕೆ ಮಧುಸೂದನ್‌ ಛಾಯಾಗ್ರಹಣವಿದೆ. ಉಳಿದಂತೆ ಸಿನಿಮಾದ ಇತರ ಕಲಾವಿದರು, ತಂತ್ರಜ್ಞರ ಹೆಸರನ್ನು ಹಂತಹಂತವಾಗಿ ತಿಳಿಸುತ್ತೇವೆ’ ಎಂದು ತಮ್ಮ ಹೊಸಚಿತ್ರದ ಬಗ್ಗೆ ಮಾಹಿತಿ ನೀಡುತ್ತಾರೆ ನಿರ್ದೇಶಕಿ ವಿಸ್ಮಯಾ.

ಟಾಪ್ ನ್ಯೂಸ್

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

7

Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.