ಮತದಾರ ಪಟ್ಟಿ ಪರಿಷ್ಕರಣೆ; 28,593 ಅರ್ಜಿ ಸ್ವೀಕಾರ
Team Udayavani, Jan 9, 2021, 2:54 PM IST
ಯಾದಗಿರಿ: ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ತಿದ್ದುಪಡಿ ಸೇರಿದಂತೆ ವಿವಿಧ ನಮೂನೆಗಳಲ್ಲಿ 28,593 ಅರ್ಜಿ ಸ್ವೀಕರಿಸಲಾಗಿದೆ ಎಂದು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರು ಹಾಗೂ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಮತ್ತು ಐ.ಟಿ ಆಯುಕ್ತ ಪಿ. ರಾಜೇಂದ್ರ ಚೋಳನ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಭಾವಚಿತ್ರ ಇರುವ ಮತದಾರರ ಪಟ್ಟಿ ಪರಿಶೀಲನೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯ 4 ವಿಧಾನಸಭಾ ಮತಕ್ಷೇತ್ರಗಳಲ್ಲಿ ಫೆ.7, 2020ರಿಂದ ಡಿ.31, 2020ರವರೆಗೆ 6, 6ಎ, 7, 8 ಹಾಗೂ 8ಎ ನಮೂನೆಗಳಲ್ಲಿ ಒಟ್ಟಾರೆ 45,247 ಅರ್ಜಿ ಸ್ವೀಕರಿಸಲಾಗಿದೆ. ಅರ್ಜಿ ಪರಿಷ್ಕರಣೆಗೆ ಸ್ವೀಕರಿಸಿ ಅವುಗಳ ಪೈಕಿ 35,733 ಅರ್ಜಿ ಅಪ್ಡೆಟ್ ಮಾಡಲಾಗಿದ್ದು, ಜಿಲ್ಲೆಯಲ್ಲಿರುವ 9,652 ಸಾವಿರ ವಿಕಲಚೇತನ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಗುರುತಿಸಲಾಗಿದೆ ಎಂದರು.
ಇದನ್ನೂ ಓದಿ:ಚಿಕ್ಕಬಳ್ಳಾಪುರ: ರಾಶಿ ರಾಶಿಯಾಗಿ ಬಿದ್ದಿರುವ ಫಾರಂ ಕೋಳಿಮರಿಗಳಿಗಾಗಿ ಮುಗಿಬಿದ್ದ ಜನತೆ
ಮತದಾರರ ಪಟ್ಟಿಯಿಂದ ಹೆಸರು ಕಡಿಮೆ ಮಾಡುವುದು, ತಿದ್ದುಪಡಿ, ಸ್ಥಳಾಂತರ, ಬದಲಾವಣೆಗೆ ಸಂಬಂಧಿಸಿದ ಅರ್ಜಿ ಇತ್ಯರ್ಥಪಡಿಸುವಾಗ ಜಾಗರೂಕತೆ ವಹಿಸಬೇಕು. ಯುವ ಹಾಗೂ ಇತರ ಮತದಾರರ ನೋಂದಣಿ ಪ್ರಮಾಣ ಹೆಚ್ಚಿಸಲು ಆದ್ಯತೆ
ನೀಡಬೇಕು. ಸಾರ್ವಜನಿಕ ದೂರುಗಳ ನಿವಾರಣೆಗೆ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು. ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಬಹುತೇಕ ಅರ್ಜಿ ಇತ್ಯರ್ಥಪಡಿಸಲಾಗಿದೆ. ಅರ್ಜಿಗಳ ಇತ್ಯರ್ಥಕ್ಕೆ
ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ತಿಳಿಸಿದರು.
ಐ.ಎ.ಎಸ್ ಪ್ರೊಪೆಷನರಿ ಅಶ್ವಿಜಾ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ,
ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಸುಬ್ಬಣ್ಣ ಜಮಖಂಡಿ, ಸುರೇಶ ಅಂಕಲಗಿ, ಸಂಗಮೇಶ ಜಿಡಣಿ, ಮಹಿಬೂಬಿ, ವಿನಾಯಕ, ಎಸ್‌ಟಿಟಿ ಸಹಾಯಕ ನಿರ್ದೇಶಕ ಸತೀಶ್, ಜಿಪಂ ಎನ್‌ಆರ್‌ಡಿ ಎಂ.ಎಸ್. ಸಿದ್ದಾರೆಡ್ಡಿ, ಪರಶುರಾಮ, ಖಲೀಲ
ಸಾಹೇಬ, ಭೀಮೇಶಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.