ದೇಶದ ಮೊದಲ ಆಟಿಕೆ ಕ್ಲಸ್ಟರ್‌ಗೆ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ


Team Udayavani, Jan 9, 2021, 4:54 PM IST

ದೇಶದ ಮೊದಲ ಆಟಿಕೆ ಕ್ಲಸ್ಟರ್‌ಗೆ ಮುಖ್ಯಮತ್ರಿಯಿಂದ ಭೂಮಿಪೂಜೆ

ಕೊಪ್ಪಳ: ಕುಕನೂರು ತಾಲೂಕಿನ ಭಾನಾಪೂರ ಬಳಿ 400 ಎಕರೆಯಲ್ಲಿ ಆರಂಭಗೊಳ್ಳಲಿರುವ ದೇಶದ ಮೊದಲ ಆಟಿಕೆ ಹಬ್‌ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಮಾರಂಭದಲ್ಲಿ ಆರು
ದೇಶ ವಿದೇಶಿ ಕಂಪನಿಗಳೊಂದಿಗೆ ಆಟಿಕೆ ಸಾಮಗ್ರಿಗಳ ಉತ್ಪಾದನೆಗೆ ಒಡಂಬಡಿಕೆ ಮಾಡಿಕೊಳ್ಳುವ ಪ್ರಕ್ರಿಯೆ ಜರುಗಿತು.

ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ದೇಶದ ಆಟಿಕೆ ಕ್ಲಸ್ಟರ್ ಶಂಕುಸ್ಥಾಪನೆ ಮಾಡಿ. ಕಿನ್ನಾಳದ ಪಾರಂಪರಿಕ ಆಟಿಕೆಗೆ ಹೆಸರಾದ ಕೊಪ್ಪಳ ಜಿಲ್ಲೆಯಲ್ಲಿ ಆಟಿಕೆಯ ಕ್ಲಸ್ಟರ್ ಶಂಕುಸ್ಥಾಪನೆ ನೆರವೇರುತ್ತಿರುವುದು ಸಂಭ್ರಮದ ಸಂಗತಿ. ಏಕಸ್ ಸಂಸ್ಥೆಯ ಅರವಿಂದ್ ಮೆಳ್ಳಿಗೇರಿ ಕ್ಲಸ್ಟರ್ ಅಭಿವೃದ್ಧಿಪಡಿ ಪಣ ತೊಟ್ಟಿದ್ದು, ಕರ್ನಾಟಕದವರಾಗಿದ್ದಾರೆ. ಇದೇ ವರ್ಷದಲ್ಲಿ ಕ್ಲಸ್ಟರ್ ಕಾರ್ಯಾರಂಭಗೊಳ್ಳುವ ಭರವಸೆಯಿದ್ದು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕ್ಲಸ್ಟರ್ ಗಮನ ಸೆಳೆಯಲಿದೆ. ಒಂದು ವರ್ಷದಲ್ಲಿ ಘಟಕ ಕಾರ್ಯಾರಂಭ ಮಾಡಿದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನೆ ಕೊಪ್ಪಳಕ್ಕೆ ಕರೆ ತಂದು ಉದ್ಘಾಟನೆಗೊಳಿಸಲಾಗುವುದು ಎಂದರು.

ಮುಂದಿನ ವರ್ಷಗಳಲ್ಲಿ ಕ್ಲಸ್ಟರ್ 5 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿದೆ. 25 ಸಾವಿರ ಜನತೆಗೆ ನೇರವಾಗಿ ಉದ್ಯೋಗ ಸಿಗಲಿದೆ. ಪರೋಕ್ಷವಾಗಿ 1 ಲಕ್ಷ ಜನತೆ ಉದ್ಯೋಗ ದೊರೆತಂತಾಗಲಿದೆ. ಅದರಲ್ಲೂ ಮಹಿಳೆಯರಿಗೆ ಇಲ್ಲಿ ಕೆಲಸ ದೊರೆಯಲಿದೆ. ಈ ಭಾಗದ ಮಹಿಳೆಯರಿಗೆ ಉದ್ಯೋಗ ಸಿಗುವ ಭರವಸೆ ನಾನು ಕೊಡುವೆ ಎಂದರು.

ಭೂ ಸ್ವಾಧೀನಕ್ಕೆ ಇದ್ದ ತೊಡಕನ್ನು ನಿವಾರಿಸಿದ್ದೇವೆ. ಹೊಸದಾಗಿ ಕೃಷಿಯನ್ನು ಉದ್ಯೋಗವನ್ನಾಗಿ ಸ್ವೀಕರಿಸುವ ಆಸಕ್ತರಿಗೆ
ಕೃಷಿ ಭೂಮಿ ಖರೀದಿಸಬಹುದು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಉದ್ಯಮ ಪ್ರಸ್ತಾಪಿತಗಳಿಗೆ ತ್ವರಿತ ಅನುಮೋದನೆ ನೀಡುತ್ತಿರುವುದರಿಂದ ರಾಜ್ಯದಲ್ಲಿ ಉದ್ಯಮ ಸ್ನೇಹಿ ವಾತಾವರಣ ಸೃಷ್ಟಿಯಾಗಿವೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ಹೂಡಿಕೆಯ ವಾತಾವರಣವು ಸೃಷ್ಟಿಯಾಗುತ್ತಿದೆ.

2-3 ಹಂತದಲ್ಲಿ ನಗರದಲ್ಲಿ ಕೈಗಾರಿಕೆ :
ಹೊಸ ಕೈಗಾರಿಕೆ ನೀತಿಯಡಿ 2,3ನೇ ಹಂತದ ನಗರದಲ್ಲಿ ಕೈಗಾರಿಕೆ ಸ್ಥಾಪನೆಗೆ ಆದ್ಯತೆಯನ್ನು ನೀಡಿದ್ದೇವೆ. ಬೆಂಗಳೂರು ಕೇಂದ್ರಿತ ಕೈಗಾರಿಕೆಗಳ ಸ್ಥಾಪನೆ ತಪ್ಪಿಸಲು ರಾಜ್ಯದಲ್ಲಿ 2 ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಿ, ವಲಯ ನಿರ್ದಿಷ್ಟ ಕ್ಲಸ್ಟರ್ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್, ಹುಬಳ್ಳಿ-ಧಾರವಾಡದಲ್ಲಿ ಕೈಗಾರಿಕೆ, ಯಾದಗಿರಿ ಜಿಲ್ಲೆಯಲ್ಲಿ ಫಾರಂ ಕ್ಲಸ್ಟರ್ ಅಭಿವೃದ್ಧಿಪಡಿಸಲಾಗುತ್ತಿದೆ. ಕೈಗಾರಿಕೆ ಸ್ಥಾಪನೆಯಿಂದ ಸಾವಿರಾರು ಉದ್ಯೋಗ ಸೃಷ್ಟಿಯಾಗಲಿದ್ದು, ಈ ಭಾಗದ ಜನರು ಗುಳೆ ಹೋಗುವುದನ್ನು ತಗ್ಗಿಸಲು ಈ ಕಾರ್ಯಕ್ಕೆ ಮುಂದಾಗಿದೆ. ಔದ್ಯೋಗಿಕವಾಗಿ ಕರ್ನಾಟಕವನ್ನು ವಿಶ್ವದರ್ಜೆಯಡಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರವು ತುಮಕೂರಿನಲ್ಲಿ ಕೈಗಾರಿಕಾ ಕಾರಿಡಾರ್‌ನಡಿ 1700 ಕೋಟಿ ರೂ. ಮೀಸಲಿಟ್ಟಿದೆ. ಇದರಿಂದ 88500 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ.

ಕರ್ನಾಟಕವು ಉದ್ಯಮಿ ಸ್ನೇಹಿ ಸ್ಥಾನದಲ್ಲಿ ಅತ್ಯಂತ ಪ್ರಾಮುಖ್ಯತೆ ಪಡೆದಿದೆ. ಬೃಹತ್, ಮಧ್ಯಮ, ಸಣ್ಣ ಕೈಗಾರಿಕೆಗಳು ಪ್ರಗತಿಯಲ್ಲಿವೆ. ಸುಲಭ ವಹಿವಾಟು ನಡೆಸಲು ಕೈಗಾರಿಕೆ ಸ್ಥಾಪನೆಗೆ ಸರಳೀಕೃತಗೊಳಿಸಲಾಗಿದೆ. ಕಳೆದ ಸಾಲಿನಲ್ಲಿ ರಾಜ್ಯದಲ್ಲಿ
1188 ಕೈಗಾರಿಕೆ ಸ್ಥಾಪನೆಯ ಪ್ರಸ್ತಾಪ ಸ್ವೀಕೃತವಾಗಿದ್ದು, ಈ ಪೈಕಿ 1.45 ಲಕ್ಷ ಕೋಟಿ ಮೌಲ್ಯದ 95 ಹೂಡಿಕೆ ಪ್ರಸ್ತಾಪಗಳು ರಾಜ್ಯದ ಪಾಲಾಗಿವೆ. ದೇಶದ ಒಟ್ಟು ಹೂಡಿಕೆಯ ಪೈಕಿ ಕರ್ನಾಟಕದಲ್ಲಿ ಶೇ.41 ರಷ್ಟು ಹೂಡಿಕೆಯಾಗಿವೆ.

ಭರವಸೆ ಕೊಟ್ಟಂತೆ ನಡೆಯಬೇಕು :
ರಾಜಕೀಯದಲ್ಲಿ ಸಾಧನೆ ಮಾತನಾಡಬೇಕು. ಮಾತನಾಡುವುದೇ ಸಾಧನೆಯಾಗಬಾರದು ಎಂಬ ಮಾತಿನಂತೆ, ಭರವಸೆಯನ್ನ ಯಾರೂ ಬೇಕಾದ್ರೂ ಕೊಡಬಹುದು. ಆದರೆ ಅದನ್ನು ಕಾರ್ಯರೂಪಕ್ಕೆ ತರುವುದು ದೊಡ್ಡ ಜವಬ್ದಾರಿ. ಆ ಕೆಲಸವನ್ನು ನಾನು ಕೋವಿಡ್, ಬರಗಾಲ, ಅತಿವೃಷ್ಟಿ ನಡುವೆಯೂ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದೇನೆ. ಕೃಷಿ ಇಲಾಖೆಯಿಂದಲೂ ರೈತ ನೆಮ್ಮದಿ ಗೌರವ ಹಾಗೂ ಸ್ವಾಭಿಮಾನದಿಂದ ಬದುಕಲು ನಾವು ನೆರವಾಗಿದ್ದೇವೆ. ರೈತ ದೇಶದ ಬೆನ್ನೆಲುಬು, ಆತನಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರವು ಬದ್ಧವಾಗಿದೆ ಎಂದರು.

ಸಮಾರಂಭದಲ್ಲಿ ಏಕಸ್ ಸಂಸ್ಥೆಯ ಮುಖ್ಯಸ್ಥ ಅರವಿಂದ ಮೆಳ್ಳಿಗೇರಿ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಕೊಪ್ಪಳ, ರಾಜ್ಯದ ಮೆರುಗಿನ ಕುರಿತು ಪ್ರಸ್ತಾಪಿಸಿದರು.

ಸಮಾರಂಭದಲ್ಲಿ ಸಚಿವ ಜಗದೀಶ್ ಶೆಟ್ಟರ್, ಸಿ.ಸಿ.ಪಾಟೀಲ್, ಬಿ.ಸಿ.ಪಾಟೀಲ್, ಆನಂದ ಸಿಂಗ್, ಮಾಜಿ ಸಚಿವ ಹಾಗೂ ಶಾಸಕ ಆರ್.ವಿ. ದೇಶಪಾಂಡೆ, ಸಂಸದ ಸಂಗಣ್ಣ ಕರಡಿ, ಶಾಸಕ ಅಮರೆಗೌಡ ಬಯ್ಯಾಪೂರ, ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ರಾಘವೇಂದ್ರ ಹಿಟ್ನಾಳ, ಬಸವರಾಜ ದಡೆಸೂಗೂರು, ಗೌರವ್ ಗುಪ್ತಾ, ಮಾಜಿ ಸಚಿವ ಬಸವರಾಜ ರಾಯರಡ್ಡಿ, ಶಂಕರ್ ಪಾಟೀಲ್, ತಿಪ್ಪೆರುದ್ರ ಸ್ವಾಮಿ ಸೇರಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.