‘ರಾಬರ್ಟ್’ ಎಂಟ್ರಿಗೆ ಡೇಟ್ ಫಿಕ್ಸ್
Team Udayavani, Jan 10, 2021, 11:44 AM IST
ಬೆಂಗಳೂರು: ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ರಾಬರ್ಟ್’ ತೆರೆಮೇಲೆ ಬರಲು ಡೇಟ್ ಫಿಕ್ಸ್ ಆಗಿದೆ. ಮುಂಬರುವ ಮಾರ್ಚ್ 11 ರಂದು ತೆರೆಕಾಣಲಿರುವ ಈ ಸಿನಿಮಾ ಅಭಿಮಾನಿಗಳ ಮನತಣಿಸಲು ರೆಡಿಯಾಗಿದೆ.
ಈ ಕುರಿತು ತಮ್ಮ ಟ್ವೀಟರ್ ನಲ್ಲಿ ರಾಬರ್ಟ್ ಸಿನಿಮಾದ ಪೋಸ್ಟರ್ ಒಂದನ್ನು ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ನಟ ದರ್ಶನ್, ಮಹಾ ಶಿವರಾತ್ರಿಗೆ ಸಿನಿಮಾದ ಬಿಡುಗಡೆ ಮಾಡಲಿದ್ದೇವೆ ಎನ್ನುವುದರ ಮೂಲಕ ಸಿನಿಮಾ ಬಿಡುಗಡೆ ದಿನಾಂಕವನ್ನು ಖಚಿತಪಡಿಸಿದ್ದಾರೆ.
ಇದನ್ನೂ ಓದಿ:ಬಾಗಿಲು ತೆರೆದ ಕೇದಾರನಾಥ-ಬಾದಾಮಿ ಶುಗರ್ಸ್: ದಶಕದಿಂದ ಸ್ತಬ್ಧಗೊಂಡ ಕಾರ್ಖಾನೆಗಳಿಗೆ ಮರುಜೀವ
ಈ ಸಿನಿಮಾ ಯಾವುದೇ ಓಟಿಟಿ ಪ್ಲಾಟ್ ಪಾರ್ಮ್ ಗಳಲ್ಲಿ ಬಿಡುಗಡೆಗೊಳ್ಳುತ್ತಿಲ್ಲ, ಬದಲಾಗಿ ಚಿತ್ರಮಂದಿರದಲ್ಲಿಯೇ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ ಎಂದಿರುವ ನಟ ಎಲ್ಲಾ ಸಿನಿಪ್ರಿಯರು ಚಿತ್ರಮಂದಿರದಲ್ಲಿಯೇ ರಾಬರ್ಟ್ ಸಿನಿಮಾ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ.
#Roberrt Coming To Theaters On Maha Shivarathri March11 2021 #RoberrtStormMarch11 @TharunSudhir @umap30071 pic.twitter.com/OTecKUlN4v
— Darshan Thoogudeepa (@dasadarshan) January 10, 2021
ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾ ಒಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಆಗಿದೆ. ಈ ಸಿನಿಮಾದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿರಲಿದ್ದು ಉಮಾಪತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.