ನಾನು ಒರಿಜಿನಲ್ ಜನಸಂಘದವನು, ಹಾಫ್ ಚಡ್ಡಿ ಹಾಕುತ್ತಿದ್ದೆ: ರಮೇಶ ಜಾರಕಿಹೊಳಿ
ಬೆಳಗಾವಿ ಬಿಜೆಪಿ ಟಿಕೆಟ್ ಪಡೆದವರು, ದ್ರೋಹ ಮಾಡುವುದಿಲ್ಲವೆಂದು ದೇವರ ಪಾದ ಮುಟ್ಟಿ ಆಣೆ ಮಾಡಬೇಕು!
Team Udayavani, Jan 10, 2021, 3:41 PM IST
ಬೆಳಗಾವಿ: ನಾನು ಓರಿಜನಲ್ ಜನಸಂಘದವನು. ನಮ್ಮತಂದೆ ಗೋವಾ ವಿಮೋಚನಾ ಚಳವಳಿ ವೇಳೆ ಮೂರು ತಿಂಗಳು ಜೈಲಿನಲ್ಲಿ ಇದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂದ ರಮೇಶ್ ಜಾರಕಿಹೊಳಿ ಹೇಳಿದರು.
ಇಲ್ಲಿನ ನಾವಗೆಯ ಗಣೇಶ ಬಾಗ್‌ನಲ್ಲಿ ಧನಂಜಯ ಮಿತ್ರ ಪರಿವಾರ ವತಿಯಿಂದ ರವಿವಾರ ನಡೆದ ಹಿಂದೂ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ನಾವು ಮೊದಲು ಜನಸಂಘದಲ್ಲಿ ದೀಪದ ಚಿತ್ರ ಇದ್ದ ಕರಿ ಟೋಪಿ ಹಾಕುತ್ತಿದ್ದೆವು. ಸಂಘಟನೆಗಾಗಿ ನಮ್ಮ ತಂದೆ ಮೂರು ತಿಂಗಳು ಜೈಲಿನಲ್ಲಿದ್ದರು. ನಾವು ಉದಯ ಆಗಿದ್ದು ಜನಸಂಘದಿಂದ, ಹಾಫ್ ಚಡ್ಡಿ ಹಾಕುತ್ತಿದ್ದೆವು. ಅನಿವಾರ್ಯವಾಗಿ ಕಾಂಗ್ರೆಸ್ ಗೆ ಹೋಗಬೇಕಾಯಿತು. ಜನಸಂಘದಿಂದ ಬಂದಂತಹ ಕುಟುಂಬ ಜಾರಕಿಹೊಳಿ ಕುಟುಂಬ ಎಂದರು.
ನಮ್ಮ ತಂದೆಯವರು ಜಗನ್ನಾಥ ಜೋಶಿಯವರ ಅನುಯಾಯಿ. ಗೋವಾ ವಿಮೋಚನೆಗಾಗಿ ಹೋರಾಟ ಮಾಡಿ ಜೈಲಿನಲ್ಲಿದ್ದರು. ಒಮ್ಮೆ ಸುರೇಶ್ ಅಂಗಡಿಯವರಿಗೆ ಜನಸಂಘದ ಚಿಹ್ನೆ ಬಗ್ಗೆ ಕೇಳಿದ್ದೆ. ಜನಸಂಘದ ಚಿತ್ರ ಸುರೇಶ ಅಂಗಡಿಯವರಿಗೆ ಗೊತ್ತಿರಲಿಲ್ಲ ಎಂದರು.
ಇದನ್ನೂ ಓದಿ:‘ದಾರಿ ತಪ್ಪಿದ್ದ’: ಭಾರತೀಯ ಸೇನೆಯಿಂದ ಬಂಧಿಸಲ್ಪಟ್ಟ ಸೈನಿಕನ ಬಿಡುಗಡೆಗೆ ಚೀನಾ ಮನವಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ಸಿಕ್ಕರೂ ಬಿಜೆಪಿ ಪರವಾಗಿಯೇ ಕೆಲಸ ಮಾಡಬೇಕು. ಅವರೆಲ್ಲರೂ ದ್ರೋಹ ಮಾಡುವುದಿಲ್ಲ ಎಂದು ಮಹಾರಾಷ್ಟ್ರದ ಜ್ಯೋತಿಬಾ ದೇವರ ಪಾದ ಮುಟ್ಟಿ ಆಣೆ ಮಾಡಬೇಕು ಎಂದರು.
ಜನವರಿ 17ರಂದು ಬೆಳಗಾವಿಯಲ್ಲಿ ಅಮಿತ್ ಶಾ ಕಾರ್ಯಕ್ರಮ ಇದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಒಂದು ಲಕ್ಷ ಜನ ಬರಬೇಕು. ನಿಮಗೇನು ಸಹಾಯ ಬೇಕು, ಎಲ್ಲಾ ವ್ಯವಸ್ಥೆ ಮಾಡುತ್ತೇನೆ. ಮೂರರಿಂದ ನಾಲ್ಕು ಲಕ್ಷ ಜನ ಸೇರಿಸುವ ಸಂಕಲ್ಪ ಮಾಡಿದ್ದೇವೆ. 2023ರಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಧ್ವಜ ಹಾರಿಸುತ್ತೇನೆ ಎಂಬ ಸಂಕಲ್ಪ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.