ಪ್ರತಿಷಿತ ಸಂಸ್ಥೆ ನೆರವಿನೊಂದಿಗೆ ಅಂಧತ್ವ ನಿವಾರಣೆ
10 ತಿಂಗಳಿಂದ ಕೋವಿಡ್ ಭೀತಿಯಿಂದ ಅಂಗಾಂಗ ದಾನ ಕುಗ್ಗಿದೆ: ಸಚಿವ ಡಾ.ಕೆ.ಸುಧಾಕರ್ ಬೇಸರ
Team Udayavani, Jan 10, 2021, 4:54 PM IST
ಬೆಂಗಳೂರು: ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಗಳ ನೆರವಿನೊಂದಿಗೆ ರಾಜ್ಯಾದ್ಯಂತ ಅಂಧತ್ವ ನಿವಾರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಶನಿವಾರ “ನೇತ್ರದಾನ’ದ ಮಹತ್ವ, ಕುರುಡುತನ, ಕಾರ್ನಿಯಲ್ ಕಸಿ ಚಿಕಿತ್ಸೆ ಕುರಿತು “ನಾರಾಯಣ ನೇತ್ರಾಲಯ ಐ ಫೌಂಡೇಶನ್’ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಕಣ್ಣಿಲ್ಲದವರು 80 ಲಕ್ಷ ಮತ್ತು ದೃಷ್ಟಿ ದೋಷವುಳ್ಳವರು ಆರು ಕೋಟಿ ಜನರಿದ್ದಾರೆ. ಕಳೆದ 10 ತಿಂಗಳಿಂದ ಕೋವಿಡ್ ಭೀತಿಯಿಂದ ಅಂಗಾಂಗ ದಾನ ಕುಗ್ಗಿದ್ದು, ನೇತ್ರದಾನಿಗಳ ಕೊರತೆಯಿಂದ ಅಂಧತ್ವ ನಿವಾರಣೆಗೂ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರವಾಗಿ ನಾರಾಯಣ ನೇತ್ರಾಲಯದಂತಹ ಖಾಸಗಿ, ಪ್ರತಿಷ್ಠಿತ ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಗಳ ನೆರವಿನೊಂದಿಗೆ ವಿಶೇಷ ಶಿಬಿರ, ಜಾಗೃತಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ:ರೈತರ ಮೇಲೆ ಅಶ್ರುವಾಯು ಪ್ರಯೋಗ: ರೈತರೊಂದಿಗೆ ಹರ್ಯಾಣ ಸಿಎಂ ಖಟ್ಟರ್ ಮಾತುಕತೆ ರದ್ದು
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಎಲ್ಲ ವರ್ಗದವರಿಗೂ ಅಂಗಾಂಗ ಕಸಿ, ಮುಂತಾದ ಚಿಕಿತ್ಸೆಗಳು ದೊರೆಯಬೇಕು. ಇದಕ್ಕಾಗಿ ಈ ವಲಯಕ್ಕೆ ಸಹಕಾರ ನೀಡಲು ಸಿದ್ಧ ಎಂದು ಭರವಸೆ ನೀಡಿದರು. ತಮಿಳುನಾಡು ಜನರಲ್ಲಿ ಅಂಗಾಂಗ ದಾನದ ಬಗ್ಗೆ ಹೆಚ್ಚು ಒಲವಿದೆ. ರಾಜ್ಯದಲ್ಲಿ ಕೂಡ ಅಂಗಾಂಗ ದಾನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಕುರುಡುತನ ತಡೆಗಟ್ಟಲು ಶ್ರಮಿಸಬೇಕು. ಚಿಕಿತ್ಸೆಗಿರುವ ಅತ್ಯಾಧುನಿಕ ತಂತ್ರಜ್ಞಾನ ಸಮರ್ಥವಾಗಿ ಬಳಸಿಕೊಳ್ಳಬೇಕು. ಸರ್ಕಾರವು ವಿಷನ್ ಗ್ರೂಪ್ ಮಾಡಿದ್ದು, ನೇತ್ರ ವಿಭಾಗಕ್ಕೆ ನಾರಾಯಣ ನೇತ್ರಾಲಯ ಅಧ್ಯಕ್ಷ ಡಾ.ಕೆ.ಭುಜಂಗ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಅವರು ಚಿಕಿತ್ಸೆ ಸರಳೀಕರಣ, ವೆಚ್ಚಕಡಿತದಂತಹ ಅಂಶಗಳನ್ನು ಅಂಧತ್ವ ನಿವಾರಣೆಗೆ ನೀಡುವ ಸೂಕ್ತ ಸಲಹೆಗಳು ಆಧರಿಸಿ ಹೊಸ ನೀತಿ ರೂಪಿಸಲಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.