ಲಸಿಕೆ ಸಂಗ್ರಹಕ್ಕೆ ಸಂಪೂರ್ಣ ಸಿದ್ದತೆ : ಮೊದಲ ಹಂತದಲ್ಲಿ 13.90 ಲಕ್ಷ ಡೋಸ್ ಲಸಿಕೆ
Team Udayavani, Jan 10, 2021, 5:33 PM IST
ಬೆಂಗಳೂರು : ಕೋವಿಡ್ ಲಸಿಕೆ ಸಂಗ್ರಹಕ್ಕೆ ರಾಜ್ಯದಲ್ಲಿ ಸಂಪೂರ್ಣ ಸಿದ್ಧತೆ ನಡೆಸಲಾಗಿದ್ದು, ಮೊದಲ ಹಂತದಲ್ಲಿ ರಾಜ್ಯಕ್ಕೆ 13.90 ಲಕ್ಷ ಡೋಸ್ ಲಸಿಕೆ ಸಿಗಲಿದೆ ಎಂದು ಅರೋಗ್ಯ ಸಚಿವ ಹಾಗೂ ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಲಸಿಕೆ ಸಂಗ್ರಹ ವ್ಯವಸ್ಥೆಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಸಂಜೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಈಗಾಗಲೇ ಪ್ರಧಾನಿಗಳು ಜನವರಿ 16 ರಿಂದ ಕೊರೊನಾ ಲಸಿಕೆ ನೀಡುವ ಬಗ್ಗೆ ತಿಳಿಸಿದ್ದಾರೆ. ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ 3 ಕೋಟಿ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಸಂಗ್ರಹ ವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ ಎಂದರು.
ರಾಜ್ಯದಲ್ಲಿ ಪ್ರಮುಖವಾಗಿ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 2 ಲಸಿಕೆ ಸಂಗ್ರಹ ವ್ಯವಸ್ಥೆಗಳಿವೆ. ಇದಲ್ಲದೆ, ಚಿತ್ರದುರ್ಗ, ಕಲಬುರಗಿ, ದಕ್ಷಿಣ ಕನ್ನಡ, ಮೈಸೂರು ಮತ್ತು ಬಾಗಲಕೋಟೆಯಲ್ಲಿ 5 ಪ್ರಾದೇಶಿಕ ಸಂಗ್ರಹ ವ್ಯವಸ್ಥೆ ಇದೆ. ಪ್ರತಿ ಜಿಲ್ಲೆಯಲ್ಲೂ ಒಂದು ಕಾರ್ಪೊರೇಷನ್ ಲಸಿಕೆ ಸಂಗ್ರಹ ವ್ಯವಸ್ಥೆ ಇದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 50 ಬ್ಲಾಕ್ ಇದೆ. ಒಟ್ಟು 2,767 ಕೋಲ್ಡ್ ಚೇನ್ ಪಾಯಿಂಟ್ ಗಳು ಇವೆ. ಇವೆಲ್ಲ ಮೂಲಸೌಕರ್ಯದೊಂದಿಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದರು.
ಇದನ್ನೂ ಓದಿ:ದೆಹಲಿ ಭೇಟಿ ತೃಪ್ತಿ ನೀಡಿದೆ : ಆದಷ್ಟು ಬೇಗ ಶುಭ ಸುದ್ದಿ ಸಿಗಲಿದೆ : ಬಿಎಸ್ ವೈ
ರಾಜ್ಯದಲ್ಲಿ 900 ಲಸಿಕೆ ಕ್ಯಾರಿಯರ್ ಗಳಿವೆ. ಲಸಿಕೆಯನ್ನು ಮೊದಲಿಗೆ ಪ್ರಾದೇಶಿಕ ಸಂಗ್ರಹ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ನಂತರ ಅಲ್ಲಿಂದ ಜಿಲ್ಲಾ ಮಟ್ಟಕ್ಕೆ ಕಳುಹಿಸಲಾಗುತ್ತದೆ. ಬೆಂಗಳೂರಿನಲ್ಲಿ ಎರಡು ವಾಕ್ – ಇನ್ ಕೂಲರ್ ಇದೆ. ಒಂದರಲ್ಲಿ 45 ಲಕ್ಷ ಡೋಸ್ ಸಂಗ್ರಹಿಸಲು ಅವಕಾಶವಿದೆ. ಇದೇ ರೀತಿ ಒಂದು ವಾಕ್- ಇನ್ ಫ್ರೀಜರ್ ಇದೆ. ಅದರಲ್ಲಿ 40 ಲಕ್ಷ ಡೋಸ್ ಸಂಗ್ರಹ ಸಾಮರ್ಥ್ಯವಿದೆ. ಕೇಂದ್ರ ಸರ್ಕಾರ ಇನ್ನೂ ಒಂದು ವಾಕ್- ಇನ್ ಫ್ರೀಜರ್ ನೀಡಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.