ಕಾರಿನಿಂದ ಢಿಕ್ಕಿ ಹೊಡೆಸಿ 1.75 ಲಕ್ಷ ದೋಚಿ ಪರಾರಿ
Team Udayavani, Jan 11, 2021, 11:37 AM IST
ಹನೂರು: ವ್ಯಾಪಾರದ ಹಣವನ್ನು ತರುತ್ತಿದ್ದ ವ್ಯಕ್ತಿಗೆ ಕಾರಿನಿಂದ ಢಿಕ್ಕಿ ಹೊಡೆಸಿ, ಹಣ ದೋಚಿರುವ ಘಟನೆ ಪಟ್ಟಣದ ಹೊರ ವಲಯದ ಅರಣ್ಯ ಇಲಾಖೆ ನರ್ಸರಿ ಸಮೀಪ ನಡೆದಿದೆ.
ಹನೂರು ಪಟ್ಟಣದ ನಿತಿನ್ ಎಂಬುವವರೇ ಹಣ ಕಳೆದುಕೊಂಡಿರುವ ವ್ಯಕ್ತಿ. ಇವರು ವೃತ್ತಿಯಲ್ಲಿ ವ್ಯಾಪಾರಸ್ಥರಾಗಿದ್ದಾರೆ. ಇವರು ಸನ್‌ಫ್ಯೂರ್ ಎಣ್ಣೆಯ ಏಜೆನ್ಸಿ ಪಡೆದಿದ್ದು, ತಾಲೂಕಿನ ವಿವಿಧ ಗ್ರಾಮಗಳ ಅಂಗಡಿಗಳಿಗೆ ಸರಬರಾಜು ಮಾಡುತ್ತಿದ್ದರು. ಇವರು ಎಂದಿನಂತೆ ವ್ಯಾಪಾರ ಮುಗಿಸಿ ಎಲ್ಲೇಮಾಳ, ಕೌದಳ್ಳಿ, ರಾಮಾಪುರ ಅಂಗಡಿಗಳಿಂದ ಹಣ ಸಂಗ್ರಹಣೆ ಮಾಡಿ, ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದರು.
ಈ ವೇಳೆ ಪಟ್ಟಣ- ಅಜ್ಜೀಪುರ ಮಾರ್ಗದ ಅರಣ್ಯ ಇಲಾಖೆ ನರ್ಸರಿ ಸಮೀಪ ಆಗಮಿಸುತ್ತಿದ್ದಂತೆ ಅಪರಿಚಿತ ಇಂಡಿಕಾ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ 5 ಜನ ಅಪರಿಚಿತರು ವಾಹನದಿಂದ ಕೆಳಗಿಳಿದು ಅವರ ಬಳಿಯಿದ್ದ 1.75 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಬಳಿಕ ನಿತಿನ್ ಅವರು ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ಕೊಳ್ಳೇಗಾಲ ಉಪವಿಭಾಗ ಡಿವೈಎಸ್‌ಪಿ ನಾಗರಾಜು ಮತ್ತು ರಾಮಾಪುರ ಪಿಎಸ್‌ಐ ನಂಜುನಾಥ್ ಪ್ರಸಾದ್ ಹಾಗೂ ಹನೂರು ಪೊಲೀಸರು ಸ್ಥಳಕ್ಕೆ ಆಗಮಿಸಿ, ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.