ಕೋವಿಡ್ ವಿರುದ್ಧ ನಿರ್ಣಾಯಕ ಹೋರಾಟ; ಮೊದಲ ಹಂತದಲ್ಲಿ ಲಸಿಕೆ ಉಚಿತ: ಪ್ರಧಾನಿ ಮೋದಿ
ಜನವರಿ 16ರಿಂದ ದೇಶಾದ್ಯಂತ ಕೋವಿಡ್ ಲಸಿಕೆ ವಿತರಣೆ ಆರಂಭವಾಗಲಿದೆ
Team Udayavani, Jan 11, 2021, 5:22 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಜನವರಿ 11, 2021) ಸಂಜೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜತೆ ಕೋವಿಡ್ ಲಸಿಕೆ ಹಂಚಿಕೆ ಕುರಿತು ಚರ್ಚೆ ನಡೆಸಿದ್ದು, ಜನವರಿ 16ರಿಂದ ದೇಶದಲ್ಲಿ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದೆ.ಲಸಿಕೆ ಅಭಿಯಾನ ಬೇರೆ ದೇಶಗಳಿಗೆ ಮಾದರಿಯಾಗಬೇಕು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಸುಧಾಕರ್ ಭಾಗಿಯಾಗಿದ್ದಾರೆ.
ಜನವರಿ 16ರಿಂದ ದೇಶಾದ್ಯಂತ ಕೋವಿಡ್ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ಶನಿವಾರ ಕೇಂದ್ರ ಸರ್ಕಾರ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ದೇಶೀಯವಾಗಿ ಅಭಿವೃದ್ದಿಪಡಿಸಿದ ಲಸಿಕೆ ಹಾಗೂ ಅದರ ಹಂಚಿಕೆ ಕುರಿತು ಮಾಹಿತಿ ನೀಡಿದರು.
ದೇಶೀಯವಾಗಿ ಉತ್ಪಾದಿಸಲಾದ ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಬಳಕೆಗೆ ಅನುಮತಿ ದೊರಕಿದೆ. ಮೂರು ಕೋಟಿ ಜನರಿಗೆ ಲಸಿಕೆ ನೀಡಿದ ನಂತರ ನಾವು ಮತ್ತೊಮ್ಮೆ ಮಾತುಕತೆಗೆ ಕುಳಿತುಕೊಳ್ಳೋಣ ಎಂದು ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದರು.
ಕೊವಿಶೀಲ್ಡ್ ಪ್ರತಿ ಡೋಸ್ ನ ಬೆಲೆ 220 ರೂಪಾಯಿ. ರಿಯಲ್ ಟೈಮ್ ಲಸಿಕೆ ಅಂಕಿಅಂಶದ ಬಗ್ಗೆ ಕೋವಿನ್ ಆ್ಯಪ್ ನಲ್ಲಿ ಮಾಹಿತಿ ಅಪ್ ಡೇಟ್ ಮಾಡಲಾಗುವುದು. ಫ್ರಂಟ್ ಲೈನ್ ವಾರಿಯರ್ಸ್ ಗೆ ಮೊದಲ ಹಂತದಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು, ಇದರಲ್ಲಿ ಸಫಾಯಿ ಕರ್ಮಚಾರಿಗಳು, ಆರೋಗ್ಯ ಸಿಬ್ಬಂದಿಗಳು ಸೇರಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ವದಂತಿ ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಈ ವೇಳೆ ಪ್ರಧಾನಿ ಮೋದಿ ಮನವಿ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.