ಸರ್ಕಾರಕ್ಕೆ 48 ಗಂಟೆ  ಗಡುವು ನೀಡಿದ  ಪಂಚಮಸಾಲಿ ಸಮಾಜ

ಬಸವಜಯ ಮೃತ್ಯುಂಜಯ ಸ್ವಾಮೀಜಿ, ಕಾಶಪ್ಪನವರ ಎಚ್ಚರಿಕೆ

Team Udayavani, Jan 12, 2021, 12:31 PM IST

ಸರ್ಕಾರಕ್ಕೆ 48 ಗಂಟೆ ಗಡುವು ನೀಡಿದ ಪಂಚಮಸಾಲಿ ಸಮಾಜ

ಬಾಗಲಕೋಟೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಷಯದಲ್ಲಿ ರಾಜ್ಯ ಸರ್ಕಾರ 48 ಗಂಟೆಯಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ  ಜ. 14ರಿಂದ ಕೂಡಲ ಸಂಗಮದಿಂದ  ಬೆಂಗಳೂರಿನ ವಿಧಾನಸೌಧ ದವರೆಗೆ ಪಾದಯಾತ್ರೆ ನಡೆಸಿ, ಮಾಡು ಇಲ್ಲವೇ ಮಡಿ ಹೋರಾಟ ನಡೆಸಲಿದ್ದೇವೆ ಎಂದು ಅಖಿಲ  ಭಾರತ ಪಂಚಮ ಸಾಲಿ ಸಮಾಜ ಸಂಘ ಎಚ್ಚರಿಕೆ ನೀಡಿದೆ.

ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಅಖಿಲ ಭಾರತ ಪಂಚಮಸಾಲಿ ಸಂಘದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸರ್ಕಾರಕ್ಕೆ ಈ ಗಡುವು ನೀಡಿದರು.

ಹಿಂದೆ 2009ರಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ, ಸಮಾಜಕ್ಕೆ 3ಬಿ ಮೀಸಲಾಗಿ ನೀಡಿದ್ದರು. ಅಲ್ಲದೇ ಪ್ರಸ್ತುತ ಮರಾಠಾ ಸಮಾಜಕ್ಕೆ ಅಭಿವೃದ್ಧಿ ನಿಗಮ ಮಾಡಲು 24 ಗಂಟೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ನಾವು ಕಳೆದ 24 ವರ್ಷಗಳಿಂದ ಸಮಾಜಕ್ಕೆ 2ಎ ಮೀಸಲಾತಿ, ಲಿಂಗಾಯತ ಒಳ ಪಂಗಡಗಳಿಗೆ ಒಬಿಸಿ ಮೀಸಲಾತಿ ನೀಡುವಂತೆ ಹೋರಾಟ ನಡೆಸಿದ್ದೇವೆ. ಕಳೆದ ಅಕ್ಟೋಬರ್‌ನಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವೇಳೆ ಸ್ವತಃ ಮುಖ್ಯಮಂತ್ರಿಗಳೇ ದೂರವಾಣಿಯಲ್ಲಿ ಮಾತನಾಡಿ, ತಿಂಗಳ ಕಾಲಾವಕಾಶ ಕೇಳಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊಟ್ಟ ಮಾತು ತಪ್ಪುವುದಿಲ್ಲ ಎಂಬ ಅಚಲ ವಿಶ್ವಾಸವಿದೆ. ನಾವು ಜ. 14ರಂದು ಪಾದಯಾತ್ರೆ ಮಾಡಲು ಎಲ್ಲ ಸಿದ್ಧತೆ ಮಾಡಿದ್ದು, ಮೊದಲ ದಿನ 2 ಲಕ್ಷ ಜನರೊಂದಿಗೆ ಪಾದಯಾತ್ರೆ ನಡೆಯಲಿದೆ. ಒಂದು ತಿಂಗಳ ಕಾಲ ಬೆಂಗಳೂರಿನ ವರೆಗೆ ಪಾದಯಾತ್ರೆ ನಡೆಯಲಿದ್ದು, ಅಂತಿಮ ದಿನವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ವಿವರಿಸಿದರು.

ನಾವು ಪಾದಯಾತ್ರೆ ಹೋರಾಟವನ್ನು ಡಿ.23ರಿಂದಲೇ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವು. ಸರ್ಕಾರ ಮತ್ತೆ ಕಾಲಾವಕಾಶ ಕೇಳಿದಾಗ, ಅದನ್ನು ಜ.14ಕ್ಕೆ ಮುಂದೂಡಿದ್ದೇವು. ಜ. 9ರಂದು ರಾಜ್ಯ ಸರ್ಕಾರದ ಪ್ರತಿನಿಧಿಗಳಾಗಿ ಸಚಿವ ಸಿ.ಸಿ. ಪಾಟೀಲ, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಕೂಡಲಸಂಗಮಕ್ಕೆ ಆಗಮಿಸಿ, ಪಾದಯಾತ್ರೆ ಮುಂದೂಡಲು ಮನವಿ ಮಾಡಿದ್ದರು. ಆದರೆ, ಅದಕ್ಕೆ ನಾವು ಒಪ್ಪಿಲ್ಲ. ಮುಖ್ಯಮಂತ್ರಿಗಳು ಜ. 14ರೊಳಗಾಗಿ ಅಂತಿಮ ನಿರ್ಧಾರ ಕೈಗೊಳ್ಳಬೇಕು. ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಂಡರೆ, ಜ.14ರ ದಿನ 2 ಲಕ್ಷ ಜನರೊಂದಿಗೆ ವಿಜಯೋತ್ಸವ ಆಚರಿಸಿ, ಸರ್ಕಾರವನ್ನು, ಮುಖ್ಯಮಂತ್ರಿಗಳನ್ನು ಅಭಿನಂದಿಸುತ್ತೇವೆ. ಇಲ್ಲದಿದ್ದರೆ ಅದೇ ದಿನ ಪಾದಯಾತ್ರೆ ಆರಂಭಗೊಳ್ಳಲಿದೆ ಎಂದರು.

ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವ ಹೋರಾಟಕ್ಕೂ,  ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ  ಪ್ರಕ್ರಿಯೆಗೂ ಸಂಬಂಧವಿಲ್ಲ. ರಾಜ್ಯದಲ್ಲಿ ಪಂಚಮಸಾಲಿ ಸಮಾಜಕ್ಕೆ ಸೇರಿದ 17 ಜನ ಶಾಸಕರು, 2ಸಚಿವರಿದ್ದಾರೆ. ಬಿಜೆಪಿಯಲ್ಲೇ 13 ಜನ ಶಾಸಕರಿದ್ದರು. ಶಾಸಕರ ಜನಸಂಖ್ಯೆ  ಅನುಗುಣವಾಗಿ ಇನ್ನು ಇಬ್ಬರಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಯಾರಿಗೇ, ಯಾವಾಗ  ಬೇಕಾದರೂ  ಸಚಿವ  ಸ್ಥಾನ ಕೊಡಲಿ. ಈಗ ನಮ್ಮ  ಹೋರಾಟ  ಸಮಾಜಕ್ಕೆ  2ಎ ಮೀಸಲಾತಿ ಕಲ್ಪಿಸಬೇಕೆಂಬುದು ಅಚಲವಾಗಿದೆ. ಇದರಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ  ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.