ಬುಡಾ ನಿವೇಶನಗಳ ಹರಾಜು: 9.67ಕೋಟಿ ರೂ. ಆದಾಯ
ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂಕೀರ್ಣದಲ್ಲಿನ 3 ಖಾಲಿ ಜಾಗದ ಬಹಿರಂಗ ಹರಾಜು
Team Udayavani, Jan 12, 2021, 4:44 PM IST
ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾ ಧಿಕಾರದಿಂದ ನಗರದ ರಾಘವ ಕಲಾಮಂದಿರದಲ್ಲಿ ಪ್ರಾಧಿಕಾರದಲ್ಲಿ ಲಭ್ಯವಿರುವ 49 ವಾಸಯೋಗ್ಯ ಮತ್ತು ವಾಣಿಜ್ಯ ನಿವೇಶನಗಳ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂಕೀರ್ಣದಲ್ಲಿನ 3 ಖಾಲಿ ಜಾಗದ ಬಹಿರಂಗ ಹರಾಜು ಪ್ರಕ್ರಿಯೆಗೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಸೋಮವಾರ ಚಾಲನೆ ನೀಡಿದರು.
ನಗರಾಭಿವೃದ್ಧಿ ಪ್ರಾ ಧಿಕಾರದ ವತಿಯಿಂದ ರಾಘವ ಕಲಾಮಂದಿರದಲ್ಲಿ ನಡೆದ ವಾಸಯೋಗ್ಯ ನಿವೇಶನ, ವಾಣಿಜ್ಯ ನಿವೇಶನ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ವಾಣಿಜ್ಯ ಸಂಕೀರ್ಣದಲ್ಲಿನ ಖಾಲಿ ಜಾಗಗಳ ಬಹಿರಂಗ ಹರಾಜಿನಲ್ಲಿ ಪ್ರಾಧಿಕಾರಕ್ಕೆ ಒಟ್ಟು 9.67 ಕೋಟಿ ರೂಪಾಯಿ ಆದಾಯ ಬಂದಿರುತ್ತದೆ.
ಇದನ್ನೂ ಓದಿ:ಗದಗ : ಹತ್ತಾರು ಹಕ್ಕಿಗಳ ಸಾವು, ಜಿಲ್ಲೆಯ ಜನರಲ್ಲಿ ಹೆಚ್ಚಿದ ಆತಂಕ
ಈ ಸಂದರ್ಭದಲ್ಲಿ ಪ್ರಾ ಧಿಕಾರದ ಆಯುಕ್ತ ವೀರೇಂದ್ರ ಕುಂದಗೋಳ, ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಶಂಕರ್ ಹಾಗೂ ನಗರಾಭಿವೃದ್ಧಿ ಪ್ರಾ ಧಿಕಾರದ ಸಿಬ್ಬಂದಿ ಇದ್ದರು. ನಗರದ ಹಲವಡೆಯಿಂದ ಬಂದಿದ್ದ ನೂರಕ್ಕೂ ಹೆಚ್ಚು ಜನರು ತಲಾ 25 ಸಾವಿರ ಮುಂಗಡ ಹಣ ಪಾವತಿಸಿ ಹರಾಜಿನಲ್ಲಿ ಭಾಗವಹಿಸಿದ್ದರು. ಕೋವಿಡ್ ನಿಯಮಗಳನ್ನು ಪಾಲಿಸಿ ಹರಾಜು ಪ್ರಕ್ರಿಯೆ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.