ಮನಪಾ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್
Team Udayavani, Jan 12, 2021, 8:00 PM IST
ಮುಂಬಯಿ, ಜ. 11:ಕೋವಿಡ್ ಸೋಂಕಿನ ವಿರುದ್ಧ ಮುನ್ನೆಚ್ಚರಿಕೆ ಕ್ರಮವಾಗಿ ಬಿಎಂಸಿಯು ಮನಪಾ ಸಂಚಾಲಿತ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ಗಳನ್ನು ವಿತರಿಸಲು ಚಿಂತನೆ ನಡೆಸಿದೆ. ಮುಂಬಯಿಯ ಮನಪಾ ಶಾಲೆಗಳಲ್ಲಿ ಸುಮಾರು 3.5 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಬಿಎಂಸಿ ಮೂಲಗಳ ಪ್ರಕಾರ ಪ್ರತೀ ವಿದ್ಯಾರ್ಥಿಗೆ 25 ಮಾಸ್ಕ್ ಗಳು ಸಿಗಲಿದ್ದು, ಅವುಗಳನ್ನು ಒಂದು ತಿಂಗಳ ಕಾಲ ತೊಳೆದು ಮರುಬಳಕೆ ಮಾಡಬಹುದಾಗಿದೆ.
ಸುಮಾರು 80 ಲಕ್ಷ ಮಾಸ್ಕ್ ಗಳನ್ನು ಖರೀದಿ ಸಲು ಮಾರಾಟಗಾರರಿಂದ ಬಿಡ್‌ಗಳನ್ನು ಆಹ್ವಾನಿಸಿ ಬಿಎಂಸಿ ಈಗಾಗಲೇ ಟೆಂಡರ್ ಜಾರಿ ಗೊಳಿಸಿದೆ. ಯೋಜನೆಗೆ ಅಂದಾಜು 20 ಕೋಟಿ ರೂ. ವೆಚ್ಚವಾಗಲಿದೆ. ಈ ಮಾಸ್ಕ್ಗಳನ್ನು ವಿದ್ಯಾರ್ಥಿ ಗಳು ಕನಿಷ್ಠ ಎರಡು ವರ್ಷಗಳ ಕಾಲ ಬಳಸಬಹುದಾಗಿದೆ ಎಂದು ಮನಪಾ ಅಧಿಕಾರಿಗಳು ತಿಳಿಸಿದ್ದಾರೆ. ಮಾಸ್ಕ್ ಗಳನ್ನು ಸಂಗ್ರಹಿಸಲು ಟೆಂಡರ್ ಆಹ್ವಾನಿಸಲಾಗಿದೆ ಹಾಗೂ ಅವು ಸಣ್ಣ ಮತ್ತು ದೊಡ್ಡ ಗಾತ್ರದಲ್ಲಿ ಲಭ್ಯವಾಗಲಿವೆ ಎಂದು ಬಿಎಂಸಿಯ ಕೇಂದ್ರ ಖರೀದಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರತೀ ಮಾಸ್ಕ್ ಕನಿಷ್ಟ ಮೂರು ಪದರಗಳು, ಮುರಿಯದ ನೋಸ್ ಪೀಸ್ ಮತ್ತು ಹೊಂದಾಣಿಕೆ ಮಾಡಬಹುದಾದ ಹೆಡ್ ಬ್ಯಾಂಡ್ ಅನ್ನು ಹೊಂದಿರಬೇಕು ಮತ್ತು ಅದು ಕನಿಷ್ಠ 30 ಬಾರಿ ತೊಳೆಯಬಹುದಾದ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ಟೆಂಡರ್‌ನಲ್ಲಿ ಉಲ್ಲೇಖೀಸಲಾಗಿದೆ. ಇದಕ್ಕೂ ಮುನ್ನ ನವೆಂಬರ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆಯು 9 ರಿಂದ 12ನೇ ರವರೆಗಿನ ಶಾಲೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿತ್ತು. ಆದರೆ, ಮನಪಾ ಅದರ ಗಡುವನ್ನು ವಿಸ್ತರಿಸಿದ್ದು, ಮುಂಬಯಿಯಲ್ಲಿ ಜ. 15ರ ಅನಂತರವೇ ಶಾಲೆಗಳನ್ನು ತೆರೆಯಲು ಅವಕಾಶ ನೀಡುವುದಾಗಿ ತಿಳಿಸಿದೆ..
ಇದನ್ನೂ ಓದಿ:ಸಾಹಸ ಬಂಟರ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ: ಸಂಸದ ಗೋಪಾಲ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.