ಮಾರ್ಚ್- ಏಪ್ರಿಲ್‌ನಲ್ಲಿ ದೊಡ್ಡ ಮಟ್ಟದ ಸಂಪುಟ ಪುನಾರಚನೆ: ಸಚಿವ ಜಾರಕಿಹೊಳಿ ಹೊಸಬಾಂಬ್
Team Udayavani, Jan 13, 2021, 12:43 PM IST
ಬೆಳಗಾವಿ: ಮಾರ್ಚ್- ಏಪ್ರಿಲ್‌ನಲ್ಲಿ ದೊಡ್ಡ ಮಟ್ಟದಲ್ಲಿ ಸಂಪುಟ ಪುನಾರಚನೆ ಆಗುತ್ತದೆ. ಸಚಿವ ಸ್ಥಾನ ತಪ್ಪಿದವರಿಗೆ ಆಗ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೊಸಬಾಂಬ್ ಸಿಡಿಸಿದರು.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಮುನಿರತ್ನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಎಚ್. ವಿಶ್ವನಾಥ, ಮಹೇಶ ಕುಮಟಳ್ಳಿ, ಮುನಿರತ್ನ ಆಕಾಂಕ್ಷಿಗಳಿದ್ದಾರೆ ಎಂದರು.
ಕಲ್ಬುರ್ಗಿಯಲ್ಲಿ ಪಕ್ಷ ಕಟ್ಟಿ ದೊಡ್ಡ ವ್ಯಕ್ತಿ ಸೋಲಿಸಿದವರು ಮಾಲೀಕಯ್ಯ ಗುತ್ತೇದಾರಗೂ ಸಚಿವ ಸ್ಥಾನ ಸಿಗಬೇಕಿದೆ. ಮಾಲೀಕಯ್ಯ ಗುತ್ತೆದಾರ ನನಗಿಂತ ಸ್ಟ್ರಾಂಗ್ ಇದ್ದಾರೆ. ಅವರಿಗೆ ಸ್ಥಾನಮಾನ ಸಿಗಬೇಕು. ನಮ್ಮ ಟೀಂ ನಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಾಗಿದೆ. ಎಚ್.ವಿಶ್ವನಾಥ ಸಚಿವರಾಗಲು ಕಾನೂನು ತೊಡಕಿದೆ. ನಾಗೇಶರನ್ನು ಸಚಿವ ಸ್ಥಾನದಿಂದ ಕೈ ಬಿಡುತ್ತಿಲ್ಲ. ಸರ್ಕಾರ ಬರಲು ಯೋಗೀಶ್ವರ್ ಪ್ರಮುಖ ಮಾತ್ರ ವಹಿಸಿದ್ದಾರೆ. ಯೋಗೀಶ್ವರ್ ಗೆ ಸ್ಥಾನ ಕೊಟ್ಟಿದ್ದಕ್ಕೆ ಬಹಳ ಸಂತೋಷವಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಇತ್ತ ಸಂಪುಟ ಪಟ್ಟಿ ಸಿದ್ದ: ಅತ್ತ ಪಕ್ಷದೊಳಗೆ ಅಸಮಾಧಾನ ಸ್ಪೋಟ! ಬಿಎಸ್ ವೈಗೆ ಮತ್ತೊಂದು ಸಂಕಟ
ಬಿಎಸ್‌ವೈ ವಿರುದ್ಧ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ರಮೇಶ ಜಾರಕಿಹೊಳಿ, ಎಚ್.ವಿಶ್ವನಾಥ ಹಿರಿಯರು. ಅವರು ಮಾತನಾಡುವುದು ಆಶೀರ್ವಾದ ಅಂದುಕೊಳ್ಳೋಣ. ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಉಪಚುನಾವಣೆ ಆಗಲಿ. ಇದಾದ ಮೇಲೆ ತಾ.ಪಂ., ಜಿ.ಪಂ. ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಸಂಪುಟ ಪುನಾರಚನೆ ಆಗಲಿದೆ ಎಂದರು.
ಸರ್ಕಾರ ಕೇವಲ ಬೆಂಗಳೂರು, ಬೆಳಗಾವಿಗೆ ಸೀಮಿತವಾಗಿದೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸ್ಥಾನ ಕೊಟ್ಟಿರುವುದು ಸಂದರ್ಭ ಅನುಗುಣವಾಗಿ ಆಗಿದೆ. ಮುಖ್ಯಮಂತ್ರಿ ಸರಿಪಡಿಸುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.