ರಾಜ್ಯದಲ್ಲೀಗ ಬಾಗಲಕೋಟೆ ಶಕ್ತಿ ಕೇಂದ್ರ: ಯಾವ ಜಿಲ್ಲೆಗೂ ಇಲ್ಲದ ಸೌಭಾಗ್ಯ ಕೋಟೆನಾಡಿಗೆ


Team Udayavani, Jan 14, 2021, 9:58 AM IST

ರಾಜ್ಯದಲ್ಲೀಗ ತುಮಕೂರು ಶಕ್ತಿ ಕೇಂದ್ರ: ಯಾವ ಜಿಲ್ಲೆಗೂ ಇಲ್ಲದ ಸೌಭಾಗ್ಯ ಕೋಟೆನಾಡಿಗೆ

ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ಕೋಟೆನಾಡು ಬಾಗಲಕೋಟೆ ಈಗ ಶಕ್ತಿ ಕೇಂದ್ರವಾಗಿ ಹೊರ ಹೊಮ್ಮಿದೆ. ರಾಜ್ಯದ ಯಾವುದೇ ಜಿಲ್ಲೆಗೆ ಇಲ್ಲದ ರಾಜಕೀಯ ಸ್ಥಾನಮಾನಗಳ ಶಕ್ತಿ ಕೇಂದ್ರದ ಸೌಭಾಗ್ಯ ಕೋಟೆ ನಾಡಿಗೆ ಲಭಿಸಿದೆ.

ಹೌದು, ರಾಜ್ಯ ಸರ್ಕಾರದಲ್ಲಿ ಪ್ರಭಲ ಎನಿಸಿರುವ ಪಿಡಬ್ಲುಡಿ ಖಾತೆಯೊಂದಿಗೆ ಉಪ ಮುಖ್ಯಮಂತ್ರಿ ಸ್ಥಾನ, ವಿಧಾನಸಭೆಯ ವಿರೋಧ ಪಕ್ಷದ ನಾಯಕರು, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರು ಇದೇ ಜಿಲ್ಲೆಯವರು. ಬುಧವಾರ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೀಳಗಿ ಕ್ಷೇತ್ರದ ಮುರುಗೇಶ ನಿರಾಣಿ, ಬೆಂಗಳೂರಿನ ಮಹದೇವಪುರ ವಿಧಾನಸಭೆ ಪ್ರತಿನಿಧಿಸುವ ಅರವಿಂದ ಲಿಂಬಾವಳಿ ಕೂಡ ಬಾಗಲಕೋಟೆ ಜಿಲ್ಲೆಯವರು ಎಂಬುದು ವಿಶೇಷ.

ಜಿಲ್ಲೆಗೆ ಬಂಪರ್ ಕೊಡುಗೆ: ರಾಜಕೀಯ ಚಟುವಟಿಕೆಗಳಲ್ಲಿ ಸದಾ ಕೇಂದ್ರಬಿಂದು ಎನಿಸಿಕೊಳ್ಳುವ ಬಾಗಲಕೋಟೆ, ಅಧಿಕಾರ ಹಿಡಿಯುವಲ್ಲೂ ಅಷ್ಟೇ ಮುಂಚೂಣಿಯಲ್ಲಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಾತ್ರ ಜಿಲ್ಲೆಗೆ ಸಚಿವ ಸ್ಥಾನ ದೊರೆತಿರಲಿಲ್ಲ. ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಸರ್ಕಾರವಿರಲಿ, ಜಿಲ್ಲೆಗೆ ಒಬ್ಬರಿಲ್ಲ, ಇಬ್ಬರು ಸಚಿವರಾಗುತ್ತಲೇ ಇರುತ್ತಾರೆ. ಅಂತಹ ರಾಜಕೀಯ ಶಕ್ತಿ ಜಿಲ್ಲೆಯ ನಾಯಕರಲ್ಲೂ ಇದೆ.

ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಆಗಿರುವ ಗೋವಿಂದ ಕಾರಜೋಳ, ಪಿಡಬ್ಲುಡಿಯಂತಹ ಪ್ರಮುಖ ಖಾತೆ ನಿರ್ವಹಿಸುತ್ತಿದ್ದಾರೆ. ಅವರೊಂದಿಗೆ ಇದೀಗ ಮುರುಗೇಶ ನಿರಾಣಿ ಕೂಡ, 2ನೇ ಬಾರಿ ಸಚಿವರಾಗಿದ್ದಾರೆ. ಈ ಹಿಂದೆ ಐದು ವರ್ಷ ಕೈಗಾರಿಕೆ ಸಚಿವರಾಗಿ ಸಮರ್ಥವಾಗಿ ಕೆಲಸ ಮಾಡಿದ್ದು, ಈ ಬಾರಿಯೂ ಕೈಗಾರಿಕೆ ಖಾತೆ ದೊರೆಯುವ ನಿರೀಕ್ಷೆಯಲ್ಲಿ ಅವರಿದ್ದಾರೆ.

ಇದನ್ನೂ ಓದಿ:ಬೇಗುದಿ ಸ್ಫೋಟಕ್ಕೆ ವಿಸ್ತರಣೆ ಟಿಕ್‌ ಟಿಕ್‌…. ಕುತ್ತಾಗಲಿದೆಯೇ ಆರೋಪ, ಆಕ್ರೋಶ?

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲೂ ಜಿಲ್ಲೆಗೆ ಎರಡು ಸಚಿವ ಸ್ಥಾನ ದೊರೆತಿದ್ದವು. ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಎಸ್.ಆರ್. ಪಾಟೀಲ, ಐಟಿ-ಬಿಟಿ ಸಚಿವರಾಗಿದ್ದರೆ, ತೇರದಾಳ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಉಮಾಶ್ರೀ ಕೂಡ ಎರೆಡೆರಡು ಖಾತೆ ನಿರ್ವಹಿಸಿದ್ದರು. ಪಾಟೀಲ ಬಳಿಕ ಎಚ್.ವೈ. ಮೇಟಿ, ಅವರ ಬಳಿಕ ಆರ್.ಬಿ. ತಿಮ್ಮಾಪುರ ಕೂಡ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ವಿರೋಧ ಪಕ್ಷದ ಸ್ಥಾನಗಳೂ ಜಿಲ್ಲೆಗೆ: ಸರ್ಕಾರದಷ್ಟೇ ಪ್ರಮುಖ ಸ್ಥಾನಮಾನ ಹೊಂದಿರುವ ವಿಧಾನಸಭೆ ಹಾಗೂ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಸ್ಥಾನಗಳೂ ಜಿಲ್ಲೆಗೆ ಒಲಿದಿವೆ. ಬಾದಾಮಿ ಕ್ಷೇತ್ರ ಪ್ರತಿನಿಧಿಸುವ ಸಿದ್ದರಾಮಯ್ಯ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇನ್ನು ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಎಸ್.ಆರ್. ಪಾಟೀಲರು, ಪರಿಷತ್‌ನ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹೀಗಾಗಿ ಜಿಲ್ಲೆಗೆ ಎರಡು ವಿರೋಧ ಪಕ್ಷದ ನಾಯಕ ಸ್ಥಾನಗಳು, ಓರ್ವ ಡಿಸಿಎಂ, ಲಿಂಬಾವಳಿ ಸಹಿತ ಇಬ್ಬರು ಸಚಿವರು ಲಭಿಸಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಕೋಟೆ ನಾಡು ಶಕ್ತಿ ಕೇಂದ್ರವಾಗಿ ಹೊರ ಹೊಮ್ಮಿದೆ.

ಅಭಿವೃದ್ಧಿಗೆ ಬಳಕೆಯಾಗಲಿ: ಸರ್ಕಾರ, ವಿರೋಧ ಪಕ್ಷ ಸಹಿತ ಎರಡಲ್ಲೂ ಪ್ರಮುಖ ಹುದ್ದೆಗಳು ಜಿಲ್ಲೆಗೆ ಲಭಿಸಿದ್ದು, ಅವುಗಳ ಸದ್ಭಳಕೆಯಾಗಬೇಕಿದೆ. ರಾಜಕೀಯ ಪ್ರತಿಷ್ಟೆಗಳೇನೇ ಇದ್ದರೂ, ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಎಲ್ಲರೂ ಒಂದಾಗಿ ಚಿಂತಿಸಿ, ಮುಂದಡಿ ಇಡಬೇಕು ಎಂಬುದು ಪ್ರಜ್ಞಾವಂತರ ಒತ್ತಾಸೆ.

ಆಲಮಟ್ಟಿ ಜಲಾಶಯವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಬೇಕು. ಜಿಲ್ಲೆಗೆ ಬಿ ಸ್ಕೀಂನಡಿ ಹಂಚಿಕೆಯಾದ ನೀರು ಬಳಸಿಕೊಳ್ಳಬೇಕು. ಜಿಲ್ಲೆಯ ಸಮಗ್ರ ನೀರಾವರಿ, ಕೆರೆಗಳಿಗೆ ನೀರು ತುಂಬಿಸಿ, ಅಂತರ್‌ಜಲ ಹೆಚ್ಚಿಸಬೇಕು. ಹೆಸರಿಗೆ ಮಾತ್ರ ಸಿಮೀತವಾದ ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ದೊಡ್ಡ ಮಟ್ಟದ ಅನುದಾನದೊಂದಿಗೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ವಿಸ್ತರಿಸಬೇಕು, ಪ್ರತಿ ಹಳ್ಳಿಯೂ ಮಾದರಿಯಾಗಬೇಕು. ಅಂತಹ ವಿಫುಲ ಅವಕಾಶ-ಸಾಮರ್ಥ್ಯ ಎಲ್ಲವೂ ಜಿಲ್ಲೆಯ ರಾಜಕೀಯ ನಾಯಕರ ಕೈಗೆ ಸಿಕ್ಕಿವೆ. ಅದನ್ನು ಸದ್ಭಳಕೆ ಮಾಡಿಕೊಳ್ಳುವ ಪ್ರಯತ್ನವಾಗಲಿ ಎಂಬುದು ಜಿಲ್ಲೆಯ ಜನರ ಅಭಿಲಾಸೆ.

ಸಮಗ್ರ ಅಭಿವೃದ್ಧಿಗೆ ಮುಂದಾಗಲಿ

ಬಾಗಲಕೋಟೆ ಜಿಲ್ಲೆ ಈಗ ರಾಜ್ಯ ರಾಜಕಾರಣದ ಶಕ್ತಿ ಕೇಂದ್ರವಾಗಿದೆ. ಡಿಎಂಸಿ, ಸಚಿವರು, ವಿರೋಧ ಪಕ್ಷದ ನಾಯಕರು ನಮ್ಮ ಜಿಲ್ಲೆಯವರೇ ಇದ್ದಾರೆ. ಆಲಮಟ್ಟಿ ಜಲಾಶಯ ಎತ್ತರಿಸಬೇಕು, ಮುಳುಗಡೆಯಾಗುವ 1.36 ಲಕ್ಷ ಎಕರೆ ಭೂಮಿಗೆ ಮಾರುಕಟ್ಟೆ ದರದ ಬೆಲೆ ನೀಡಬೇಕು. ಈ ಅವಧಿಯಲ್ಲಾದರೂ ಈ ಪ್ರಮುಖ ಕೆಲಸ ನಮ್ಮ ಜಿಲ್ಲೆಯ ನಾಯಕರಿಂದ ಆಗಲಿ.

-ಪ್ರಕಾಶ ಅಂತರಗೊಂಡ, ಮುಖಂಡ, ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ

 

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.