ಪಂಚಮಸಾಲಿ ಕೊಡುಗೆ ಅನನ್ಯ
Team Udayavani, Jan 15, 2021, 3:00 PM IST
ದಾವಣಗೆರೆ: ಹನ್ನೆರಡನೇ ಶತಮಾನ ಜಗತ್ತಿನ ಇತಿಹಾಸದಲ್ಲಿ ಮಹತ್ವದ ಶತಮಾನವಾಗಿದೆ. ಅದು ವಿಶ್ವಗುರು ಬಸವಣ್ಣನವರು ಸಮಾನತೆಗಾಗಿ ಧ್ವನಿ ಎತ್ತಿದ ಹಾಗೂ “ಕಾಯಕವೇ ಕೈಲಾಸ’ ಎಂಬ ತತ್ವ ಸಾರುವ ಮೂಲಕ ದುಡಿಮೆಯ ಮಹತ್ವ ಸಾರಿದ ವಿಶಿಷ್ಟ ಶತಮಾನವೂ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಗುರುವಾರ ನಡೆದ ಹರ ಜಾತ್ರಾ ಮಹೋತ್ಸವದಲ್ಲಿ “ಸಂಕ್ರಾಂತಿ ಸಂಭ್ರಮ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯ ಈ ಸಮಾಜಕ್ಕೆ ಅನೇಕ ವೀರ ಮಹನೀಯರನ್ನು, ವೀರ ವನಿತೆಯರನ್ನು ನೀಡಿದ ಸಮಾಜವಾಗಿದೆ. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ತನ್ನದೇ ಆದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು.
ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಜಗತ್ತಿನಲ್ಲಿ 46ಪ್ರಾಚೀನ ಸಂಸ್ಕೃತಿಗಳು ನಶಿಸಿವೆ. ಪ್ರಾಚೀನ ಭಾರತದ ಸಂಸ್ಕೃತಿ ಮಾತ್ರ ಇಂದಿಗೂ ನಶಿಸದೆ ಉಳಿಯಲುಇಲ್ಲಿಯ ಗೋ ಸಂಪತ್ತು ಮತ್ತು ಗೋವು ಅವಲಂಬಿತ ಕೃಷಿಯೇ ಕಾರಣ. ಇಲ್ಲಿಯ ಕೃಷಿಗೂ, ಗೋವಿಗೂ ಅವಿನಾಭಾವ ಸಂಬಂಧವಿದೆ. ಪಂಚಮಸಾಲಿಗಳು ಗೋವಿನೊಂದಿಗೆ, ಭೂತಾಯಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ ಎಂದರು.
ಗೋ ಸಂತತಿ ರಕ್ಷಣೆಗಾಗಿ ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದು, ರಾಜ್ಯ ಸರ್ಕಾರವೂ ಕೈಜೋಡಿಸಿದೆ. ಅದೇ ರೀತಿ 2022ಕ್ಕೆ ದೇಶದ ಎಲ್ಲ ಕೃಷಿಕರ ಆದಾಯ ದುಪ್ಪಟ್ಟು ಮಾಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಕೃಷಿಕರಿಗಾಗಿ ಕೇಂದ್ರ ಸರ್ಕಾರ ರೈತರಿಗೆ ತಲಾ 6000 ರೂ. ಗಳಂತೆ ಪ್ರತಿ ವರ್ಷ 72,000 ಕೋಟಿ ರೂ.ಗಳನ್ನು ನೀಡುತ್ತಿದೆ. ಇದರಲ್ಲಿ ಒಂದು ಪೈಸೆಯೂ ಸೋರಿಕೆಯಾಗದಂತೆ ಹಣ ರೈತರ ಖಾತೆಗೆ ಜಮಾ ಆಗುತ್ತಿದೆ. ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇದಕ್ಕೆ 4000 ರೂ. ಸೇರಿಸಿ ರೈತರಿಗೆ ವರ್ಷಕ್ಕೆ 10 ಸಾವಿರ ರೂ. ಕೊಡುತ್ತಿದೆ. ಸ್ವಾಮಿನಾಥನ್ ವರದಿಯನ್ನು ನಿಜವಾದ ರೀತಿಯಲ್ಲಿ ಅನುಷ್ಠಾನಗೊಳಿಸುತ್ತಿರುವುದು ಪ್ರಧಾನಿ ಮೋದಿ ಎಂದು ಸ್ವತಃ ಸ್ವಾಮಿನಾಥನ್‌ಅವರೇ ತಮ್ಮ ಲೇಖನದಲ್ಲಿ ತಿಳಿಸಿದ್ದಾರೆ ಎಂದು ಬಣ್ಣಿಸಿದರು.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಮಹಾಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಿಸಿಎಂ ಡಾ| ಅಶ್ವತ್ಥನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಮುರುಗೇಶ ನಿರಾಣಿ, ಭೈರತಿ ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ, ಮಾಡಾಳ್ ವಿರೂಪಾಕ್ಷಪ್ಪ, ಪ್ರೊ| ಲಿಂಗಣ್ಣ, ಶಂಕರ ಪಾಟೀಲ ಮುನೇನಕೊಪ್ಪ, ಇನ್ನಿತರ ಗಣ್ಯರು ಪಾಲ್ಗೊಂಡಿದ್ದರುಹನ್ನೆರಡನೇ ಶತಮಾನ ಜಗತ್ತಿನ ಇತಿಹಾಸದಲ್ಲಿ ಮಹತ್ವದ ಶತಮಾನವಾಗಿದೆ. ಅದು ವಿಶ್ವಗುರು ಬಸವಣ್ಣನವರು ಸಮಾನತೆಗಾಗಿ ಧ್ವನಿ ಎತ್ತಿದ ಹಾಗೂ “ಕಾಯಕವೇ ಕೈಲಾಸ’ ಎಂಬ ತತ್ವ ಸಾರುವ ಮೂಲಕ ದುಡಿಮೆಯ ಮಹತ್ವ ಸಾರಿದ ವಿಶಿಷ್ಟ ಶತಮಾನವೂ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ:ಶ್ರೀಪಾದ್ ನಾಯಕ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಗೆ ಭೇಟಿ ನೀಡಿದ ಉಪರಾಷ್ಟ್ರಪತಿ
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಗುರುವಾರ ನಡೆದ ಹರ ಜಾತ್ರಾ ಮಹೋತ್ಸವದಲ್ಲಿ “ಸಂಕ್ರಾಂತಿ ಸಂಭ್ರಮ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯ ಈ ಸಮಾಜಕ್ಕೆ ಅನೇಕ ವೀರ ಮಹನೀಯರನ್ನು, ವೀರ ವನಿತೆಯರನ್ನು ನೀಡಿದ ಸಮಾಜವಾಗಿದೆ. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ತನ್ನದೇ ಆದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು.
ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಜಗತ್ತಿನಲ್ಲಿ 46ಪ್ರಾಚೀನ ಸಂಸ್ಕೃತಿಗಳು ನಶಿಸಿವೆ. ಪ್ರಾಚೀನ ಭಾರತದ ಸಂಸ್ಕೃತಿ ಮಾತ್ರ ಇಂದಿಗೂ ನಶಿಸದೆ ಉಳಿಯಲು ಇಲ್ಲಿಯ ಗೋ ಸಂಪತ್ತು ಮತ್ತು ಗೋವು ಅವಲಂಬಿತ ಕೃಷಿಯೇ ಕಾರಣ. ಇಲ್ಲಿಯ ಕೃಷಿಗೂ, ಗೋವಿಗೂ ಅವಿನಾಭಾವ ಸಂಬಂಧವಿದೆ. ಪಂಚಮಸಾಲಿಗಳು ಗೋವಿನೊಂದಿಗೆ, ಭೂತಾಯಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ ಎಂದರು.
ಗೋ ಸಂತತಿ ರಕ್ಷಣೆಗಾಗಿ ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದು, ರಾಜ್ಯ ಸರ್ಕಾರವೂ ಕೈಜೋಡಿಸಿದೆ. ಅದೇ ರೀತಿ 2022ಕ್ಕೆ ದೇಶದ ಎಲ್ಲ ಕೃಷಿಕರ ಆದಾಯ ದುಪ್ಪಟ್ಟು ಮಾಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಕೃಷಿಕರಿಗಾಗಿ ಕೇಂದ್ರ ಸರ್ಕಾರ ರೈತರಿಗೆ ತಲಾ 6000 ರೂ. ಗಳಂತೆ ಪ್ರತಿ ವರ್ಷ 72,000 ಕೋಟಿ ರೂ.ಗಳನ್ನು ನೀಡುತ್ತಿದೆ. ಇದರಲ್ಲಿ ಒಂದುಪೈಸೆಯೂ ಸೋರಿಕೆಯಾಗದಂತೆ ಹಣ ರೈತರ ಖಾತೆಗೆ ಜಮಾ ಆಗುತ್ತಿದೆ. ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇದಕ್ಕೆ 4000 ರೂ. ಸೇರಿಸಿ ರೈತರಿಗೆ ವರ್ಷಕ್ಕೆ 10 ಸಾವಿರ ರೂ. ಕೊಡುತ್ತಿದೆ. ಸ್ವಾಮಿನಾಥನ್ ವರದಿಯನ್ನು ನಿಜವಾದ ರೀತಿಯಲ್ಲಿ ಅನುಷ್ಠಾನಗೊಳಿಸುತ್ತಿರುವುದು ಪ್ರಧಾನಿ ಮೋದಿ ಎಂದು ಸ್ವತಃ ಸ್ವಾಮಿನಾಥನ್ ಅವರೇ ತಮ್ಮ ಲೇಖನದಲ್ಲಿ ತಿಳಿಸಿದ್ದಾರೆ ಎಂದು ಬಣ್ಣಿಸಿದರು.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಮಹಾಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಿಸಿಎಂ ಡಾ| ಅಶ್ವತ್ಥನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಮುರುಗೇಶನಿರಾಣಿ, ಭೈರತಿ ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ, ಮಾಡಾಳ್ ವಿರೂಪಾಕ್ಷಪ್ಪ, ಪ್ರೊ| ಲಿಂಗಣ್ಣ, ಶಂಕರ ಪಾಟೀಲ ಮುನೇನಕೊಪ್ಪ, ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.