ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ
Team Udayavani, Jan 15, 2021, 3:25 PM IST
ಪಣಜಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬಾಂಬೋಲಿಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ರವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಗ್ಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶ್ರೀಪಾದ ನಾಯಕ್ ಅವರ ಭೇಟಿಗೆ ಆಗಮಿಸುವ ಕೆಲವೇ ನಿಮಿಷಗಳ ಮೊದಲು ಪ್ರಧಾನಿ ನರೇಂದ್ರ ಮೋದಿಯವರು ಶ್ರೀಪಾದ ನಾಯ್ಕ ರವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸೂಚಿಸಿದರು.
ಇದನ್ನೂ ಓದಿ:ಶ್ರೀಪಾದ್ ನಾಯಕ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಗೆ ಭೇಟಿ ನೀಡಿದ ಉಪರಾಷ್ಟ್ರಪತಿ
ಸಚಿವ ಶ್ರೀಪಾದ ನಾಯಕ್ ಅವರು ಕಳೆದ ಸೋಮವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿದಿನ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಅಗತ್ಯ ಎಲ್ಲ ವೈದ್ಯಕೀಯ ವ್ಯವಸ್ಥೆ ಕಲ್ಪಿಸುವಂತೆಯೂ ಪ್ರಧಾನಿಗಳು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.