ರಂಗೇರಿದ ಕಸಾಪ ಚುನಾವಣೆ ಅಖಾಡ

Team Udayavani, Jan 15, 2021, 5:33 PM IST

election

ಬೀದರ: ಪ್ರವಾಸೋದ್ಯಮ ಜಿಲ್ಲೆ ಹೆಗ್ಗಳಿಕೆಯ ಬೀದರ ಜಿಲ್ಲೆಯಲ್ಲಿ ಗ್ರಾಪಂ ಚುನಾವಣೆ ಕಾವು ತಣ್ಣಗಾಗುತ್ತಿದ್ದಂತೆ ಈಗ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಗೆ ಅಖಾಡ ರಂಗೇರುತ್ತಿದೆ.

ಅಧ್ಯಕ್ಷ ಗದ್ದುಗೆಗಾಗಿ ತೆರೆ ಮೆರೆಯಲ್ಲಿ ಕಸರತ್ತುಗಳು ಶುರುವಾಗಿವೆ. ಹಾಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರ ಅವಧಿ ಬರುವ ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಅಷ್ಟರ ಒಳಗಾಗಿ ಚುನಾವಣೆ ಆಗಬೇಕಿದೆ. ಅದರಂತೆ ಚುನಾವಣೆ ಇನ್ನೂ ಮೂರು ತಿಂಗಳು ಬಾಕಿ ಉಳಿದಿದ್ದು, ಅದಾಗಲೇ ಆಕಾಂಕ್ಷಿಗಳು ಸ್ಪರ್ಧೆಗೆ ಸಜ್ಜಾಗಿ ನಿಂತಿದ್ದಾರೆ. ತಮ್ಮ-ತಮ್ಮ ಬೆಂಬಲಿಗರ ಜತೆ ಸರಣಿ ಸಭೆಗಳು ನಡೆಸುವ ಮೂಲಕ ತಮ್ಮ ಸ್ಪರ್ಧೆ ಬಗ್ಗೆ ಖಚಿತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲ ಸದಸ್ಯ ಮತದಾರರರಿಗೆ ನೇರ ಮತ್ತು ಮೊಬೈಲ್‌ ಮೂಲಕ ಸಂಪರ್ಕಿಸಿ ಪ್ರಚಾರಕ್ಕೂ ಸಹ ಚಾಲನೆ ಕೊಟ್ಟಿದ್ದಾರೆ. ಹಾಗಾಗಿ ಈ ಸಲ ಕಸಾಪ ಸಾರಥಿ ಯಾರು ಆಗಬಹುದು ಎಂಬ ಕುತೂಹಲ ಹೆಚ್ಚಿಸಿದೆ.

ಈ ಬಾರಿಯ ಚುನಾವಣೆಯ ಆಕಾಂಕ್ಷಿಗಳೆಲ್ಲರೂ ಯುವಕರೇ ಆಗಿರುವುದು ವಿಶೇಷ. ಪ್ರಸ್ತುತ ಅಧ್ಯಕ್ಷರಾಗಿರುವ ಸುರೇಶ ಚನಶೆಟ್ಟಿ ಮತ್ತೂಂದು ಅವಧಿಗೆ ಕಣಕ್ಕೆ ಇಳಿಯಲು ತಯ್ನಾರು  ಮಾಡಿಕೊಳ್ಳುತ್ತಿದ್ದಾರೆ. ಇವರಿಗೆ ಪ್ರತಿ ಸ್ಪರ್ದಿಯಾಗಿ ಕಸಾಪ ಜಿಲ್ಲಾ ಕಾರ್ಯದರ್ಶಿ ಡಾ| ರಾಜಕುಮಾರ ಹೆಬ್ಟಾಳೆ ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಇವರೊಟ್ಟಿಗೆ ಕರುನಾಡು ಸಾಂಸ್ಕೃತಿ ವೇದಿಕೆ ಅಧ್ಯಕ್ಷ ಡಾ| ಸಂಜುಕುಮಾರ ಅತಿವಾಳೆ ಅವರ ಹೆಸರು ಸಹ ಕೇಳಿ ಬರುತ್ತಿದೆ. ಮತದಾರರನ್ನು ಸೆಳೆಯಲು ಸಾಹಿತಿಗಳ ಗುಂಪುಗಳು ತಂತ್ರಗಾರಿಕೆ ಹೆಣೆಯಲು ಆರಂಭಿಸಿವೆ.

ಬೀದರ ಜಿಲ್ಲಾ ಕಸಾಪ ಅಂದಾಜು 15 ಸಾವಿರ ಸದಸ್ಯರನ್ನು ಹೊಂದಿದ್ದು, ಈ ಪೈಕಿ 6 ಸಾವಿರದಷ್ಟು ಸದಸ್ಯರು ಬೀದರ ತಾಲೂಕಿನಲ್ಲೇ ಇದ್ದಾರೆ. ಬುದ್ಧಿವಂತರ ಚುನಾವಣೆ ಎನಿಸಿಕೊಂಡಿರುವ ಪರಿಷತ್‌

ಚುನಾವಣೆಗೂ ಸಹ ರಾಜಕೀಯ ಲೇಪ ಪಡೆಯುತ್ತಿರುವುದರಿಂದ ಅಖಾಡ ಹೆಚ್ಚು ರಂಗೇರಲು ಕಾರಣವಾಗುತ್ತಿದೆ. ಮತದಾನದ ದಿನಗಳು ಸಮೀಪಿಸುತ್ತಿದ್ದಂತೆ “ವೋಟಿಗಾಗಿ ನೋಟು’ ವ್ಯವಸ್ಥೆ ಸಹ ಹೆಚ್ಚುತ್ತಿದೆ

ಇದನ್ನೂ ಓದಿ:ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ಸುಮಲತಾ ಅಂಬರೀಶ್

ಕನ್ನಡ ಸಾಹಿತ್ಯ ಪರಿಷತ್‌ ಯಾರೊಬ್ಬರ ಸ್ವತ್ತಾಗಬಾರದು. ಅಧ್ಯಕ್ಷ ಸ್ಥಾನಕ್ಕೆ ಹೊಸ ಮುಖಗಳಿಗೆ ಅವಕಾಶ ಸಿಗುವಂತಾಗಬೇಕು. ಇದು ಹೆಚ್ಚಿನ ಸದಸ್ಯರ ಅಪೇಕ್ಷೆ ಸಹ ಇದೆ. ಬೀದರ ಗಡಿ ಜಿಲ್ಲೆಯಾಗಿರುವ ಹಿನ್ನೆಲೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಹೆಚ್ಚು, ಪರಿಣಾಮಕಾರಿಯಾಗಿ ನಡೆಯಬೇಕಿದೆ. ಮತದಾರರು ಅವಕಾಶ ನೀಡಿದರೆ ಕನ್ನಡದ ತೇರನ್ನು ಎಳೆದುಕೊಂಡು ಹೋಗುತ್ತೇವೆ. ಸದಸ್ಯರ ಜತೆಗೆ ಶೀಘ್ರ ಸಭೆ ಸೇರಿ ನನ್ನ ಸ್ಪರ್ಧೆಯ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತೇನೆ.

ಡಾ| ಸಂಜೀವಕುಮಾರ ಅತಿವಾಳೆ,ಹಿರಿಯ ಸಾಹಿತಿ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.