ರಾಜ್ಯದಲ್ಲಿ 10 ಲಕ್ಷ ಮನೆ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದೇವೆ: ಸಚಿವ ಸೋಮಣ್ಣ


Team Udayavani, Jan 15, 2021, 6:00 PM IST

somanna

ಬಂಟ್ವಾಳ: ಪ್ರಧಾನ ಮಂತ್ರಿ ಆಶಯದಂತೆ 2023ಕ್ಕೆ ಸೂರು ಇಲ್ಲದವರಾರು ಇರಬಾರದು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ 10 ಲಕ್ಷ ಮನೆ ನಿರ್ಮಾಣ ಮಾಡಲು ಉದ್ದೇಶ ಹೊಂದಿದ್ದೇವೆ ಎಂದು ಸಚಿವ ಸೋಮಣ್ಣ ಹೇಳಿದರು.

ನರಿಕೊಂಬು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸೋಮಣ್ಣ. 10 ಲಕ್ಷ ಮನೆ ನಿರ್ಮಾಣದ ಕಾರ್ಯದ ಜೊತೆ ಪ್ರತಿ ಹಂತದ ಪರಿಶೀಲನೆ ನಡೆಸಲಾಗುವುದು ಮತ್ತು ಅರ್ಹರಿಗೆ ಸಿಗುವ ರೀತಿಯಲ್ಲಿ ಬೇಕಾದ ಎಲ್ಲಾ ವ್ಯವಸ್ಥೆ ಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.

ವಸತಿ ಸೌಕರ್ಯ ಒದಗಿಸುವ ಯೋಜನೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಬರಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. 3560 ಎಕರೆಯಲ್ಲಿ ಎಲ್ಲಾ ಬಡವರಿಗೂ ಸೈಟು ಕೊಡಲು ಸರಕಾರ ಜಾಗ ಖರೀದಿ ಮಾಡಿದೆ.  224 ಕ್ಷೇತ್ರದಲ್ಲಿಯೂ ಈ ಉದ್ದೇಶ ಹೊಂದಿದ್ದು 800 ಸಾವಿರ ಕೋಟಿ ರೂ. ಅವಶ್ಯಕತೆ ಇದ್ದು ಅದನ್ನು ಮುಂದಿನ ಬಜೆಟ್ ನಲ್ಲಿ ಸೇರಿಸಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ: ಸಚಿವ ಡಾ.ಕೆ.ಸುಧಾಕರ್

ಮನೆ ನಿರ್ಮಾಣದ ಕಾರ್ಯ ವಿವಿಧ ಹಂತದಲ್ಲಿದ್ದು ಮುಂದಿನ ಜೂನ್ ವೇಳೆಗೆ 97 ಸಾವಿರ ಸೈಟ್ ಗಳನ್ನು ನೀಡಲು ಯೋಜನೆ ತಯಾರು ಮಾಡಲಾಗಿದೆ. ಐತಿಹಾಸಿಕ ರೀತಿಯಲ್ಲಿ ತೀರ್ಮಾನ ಒಂದನ್ನು ಕೈಕೊಂಡಿದ್ದು  ರಾಜ್ಯದ 2400 ಕೊಳಚೆ ಪ್ರದೇಶಗಳಲ್ಲಿ 8500 ಎಕರೆಗೂ ಮೇಲ್ಪಟ್ಟು ಜಾಗದಲ್ಲಿ ಘೋಷಿತ ಸ್ಲಮ್ ಗಳಿದ್ದು, ಈವರೆಗೆ ಅವರನ್ನು ಓಟ್ ಬ್ಯಾಂಕ್ ಆಗಿ ಉಪಯೋಗಮಾಡುತ್ತಿದ್ದೇವು. ಮುಂದಿನ ದಿನಗಳಲ್ಲಿ ಅ ಓಟ್ ಬ್ಯಾಂಕ್ ನ್ನು  ಶಾಶ್ವತವಾಗಿ ಯೋಜನೆ ಮಾಡುವ ಉದ್ದೇಶದಿಂದ ಅವರಿಗೆ ಪ್ರಾಪರ್ಟಿ ರೈಟ್ಸ್ ನೀಡುವ ಯೋಚನೆ ವಸತಿ ಇಲಾಖೆ ಮೂಲಕ ತೀರ್ಮಾನ  ಮಾಡಿದ್ದೇವೆ.

ಇದನ್ನೂ ಓದಿ: ಕತ್ತಲೆ ಕವಿದ ಬದುಕಿನಲ್ಲಿ ಬೆಳಕು ಮೂಡಿಸಿದ ಸ್ವ ಉದ್ಯೋಗ | Udayavani

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಕ್ರಿಯಾಶೀಲತೆ ಹಾಗೂ ಬಡವರ ಬಗೆಗಿನ ಕಾಳಜಿಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾ.ಪಂ.ಗೂ 50ರಂತೆ ಮನೆ ನೀಡುವ ಭರವಸೆ ನೀಡಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕೇಂದ್ರ ಮಾಜಿ ಸಚಿವ ಜನಾರ್ಧನ ಪೂಜಾರಿ ಭೇಟಿಗೆ ಸಚಿವ ಸೋಮಣ್ಣ ಅವರು ಮುಂದಾಗಿದ್ದರು. ಆದರೆ ಪೂಜಾರಿ ಅವರು ಬಂಟ್ವಾಳದ ಮನೆಯಲ್ಲಿರದ ಕಾರಣ ಭೇಟಿ ಕಾರ್ಯ ಕೊನೆಗಳಿಗೆಯಲ್ಲಿ ರದ್ದಾಯಿತು. ಪೂಜಾರಿ ಅವರ ಜೊತೆಗಿನ ಹಳೆಯ ಒಡನಾಟವನ್ನು ನೆನಪು ಮಾಡಿದ ಅವರು ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಅವರು ನನಗೆ 40 ವರ್ಷಗಳಿಂದ ಗುರುಗಳು ಎಂಬ ಶಬ್ದವನ್ನು ಉಲ್ಲೇಖ ಮಾಡಿದರು.

ಇದನ್ನೂ ಓದಿ: ಸಲಾರ್‌ ಚಿತ್ರಕ್ಕೆ ಮುಹೂರ್ತ; ಹೈದರಾಬಾದ್‌ನಲ್ಲಿ ಕನ್ನಡ-ತೆಲುಗು ಚಿತ್ರರಂಗಗಳ ಮಹಾ ಸಮ್ಮಿಲನ

ಟಾಪ್ ನ್ಯೂಸ್

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.