ಮರಳು ಅಕ್ರಮ ಸಾಗಣೆ ತಡೆಗೆ ಸೂಚನೆ; ಜಿಲ್ಲಾಮಟ್ಟದ ಮರಳು ಸಮಿತಿ ಸಭೆ
ರಾತ್ರಿ 8 ಗಂಟೆಯಿಂದ ಬೆಳಗ್ಗೆ 6ರವರೆಗೆ ಮರಳು ಸಾಗಣೆ ನಿರ್ಬಂಧಿಸಲಾಗಿದೆ.
Team Udayavani, Jan 15, 2021, 6:26 PM IST
ರಾಯಚೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಅದರಲ್ಲಿ ರಾಯಚೂರು ಒಂದಾಗಿದೆ. ಅನ ಧಿಕೃತ ಮರಳು ಸಾಗಣೆಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಮರಳು ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅಕ್ರಮ ಮರಳು ಸಾಗಣೆ ನಿಯಂತ್ರಿಸಲು ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಮರಳುಗಾರಿಕೆಗೆ ನಿಗದಿ ಪಡಿಸಿದ ರಾಜಧನ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅನಧಿಕೃತ ಸಾಧಾರಣ ಮರಳು ಸಾಗಣೆ ತಡೆಗಟ್ಟುವ ನಿಟ್ಟಿನಲ್ಲಿ 13 ಖನಿಜ ತನಿಖಾ ಠಾಣೆಗಳಿಗೆ ತನಿಖಾ ಸಿಬ್ಬಂದಿಯನ್ನು ನೇಮಿಸಬೇಕು. ಈ ಠಾಣೆಗಳಲ್ಲಿ
ಪ್ರತಿನಿತ್ಯ ಪಾಳೆ ಪ್ರಕಾರ ಮೇರೆಗೆ ಪೊಲೀಸ್, ಹೋಂಗಾರ್ಡ್ ಹಾಗೂ ಇತರೆ ಇಲಾಖೆ ಸಿಬ್ಬಂದಿಯನ್ನು ನೇಮಿಸುವಂತೆಸೂಚಿಸಿದರು.
ತನಿಖಾ ಠಾಣೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪರವಾನಗಿ ಇಲ್ಲದೇ ಸಾಗಿಸಿದವರನ್ನು ಪತ್ತೆ ಮಾಡಬೇಕು. ಜಿಲ್ಲೆಯಲ್ಲಿ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6ರವರೆಗೆ ಮರಳು ಸಾಗಣೆ ನಿರ್ಬಂಧಿಸಲಾಗಿದೆ. ಕೊಪ್ಪಳ, ಗದಗ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಪಟ್ಟಾ ಜಮೀನಿನಲ್ಲಿ ಮಂಜೂರಾದ ಗುತ್ತಿಗೆ ಪ್ರದೇಶಗಳಿಂದ ಪರವಾನಗಿ ಪಡೆದು ದೇವದುರ್ಗ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಮರಳು ತುಂಬುತ್ತಿರುವ ಬಗ್ಗೆ ಹಾಗೂ ಒಂದೇ
ಪರವಾನಗಿಯಿಂದ ಹಲವು ಬಾರಿ ಮರಳು ಸಾಗಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಪರಿಶೀಲಿಸಿ ಕ್ರಮ ಜರುಗಿಸಿ ಎಂದರು.
ಮರಳು ಸಾಗಾಣಿಕೆ ವಾಹನಗಳ ಮೇಲ್ಭಾಗದಲ್ಲಿ ಹೆಚ್ಚುವರಿಯಾಗಿ ಕಬ್ಬಿಣ ಪಟ್ಟಿಯನ್ನು ಅಳವಡಿಸಿ ಅಥವಾ ವಾಹನದ ಸಾಮರ್ಥ್ಯ, ಗಾತ್ರ ಬದಲಾಯಿಸಿ ಹೆಚ್ಚು
ಪ್ರಮಾಣದ ಮರಳು ಸಾಗಾಣಿಕೆ ಮಾಡುತ್ತಿರುವ ವಾಹನಗಳ ಪರವಾನಗಿಗಳನ್ನು ರದ್ದುಪಡಿಸಬೇಕು ಹಾಗೂ ಅಂತಹ ವಾಹನಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಇಲಾಖೆಯ ಅ ಧಿಕಾರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಇಬ್ಬರು ಸಹಾಯಕ ಆಯುಕ್ತರ ನೇತೃತ್ವದ
ತಾಲೂಕು ಮಟ್ಟದ ಮರಳು ಜಾಗೃತ ದಳವು ಅನ ಧಿಕೃತ ಮರಳು ಗಣಿಗಾರಿಕೆ, ದಾಸ್ತಾನು, ಸಾಗಣೆ ಕುರಿತು ಬರುವ ದೂರುಗಳ ಬಗ್ಗೆ ಮಾಹಿತಿ ಪಡೆಯಬೇಕು. ದೂರುಗಳು ಬಂದಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗಬೇಕು, ಎಲ್ಲ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ಅಲ್ಲಿನ ವಸ್ತುಸ್ಥಿತಿ ಪರಿಶೀಲಿಸಬೇಕು ಎಂದರು.
ಕೈಗೊಂಡ ಕ್ರಮದ ಬಗ್ಗೆ ಪ್ರತಿ ತಿಂಗಳ 4ನೇ ತಾರೀಖೀನ ಒಳಗೆ ತಾಲೂಕು ಮಟ್ಟದ ಮರಳು ಸಮಿತಿ ಅಧ್ಯಕ್ಷರಿಗೆ ವರದಿ ಸಲ್ಲಿಸಿ, ಅದರ ಪ್ರತಿಯನ್ನು ಜಿಲ್ಲಾಮಟ್ಟದ ಮರಳು ಸಮಿತಿಗೆ ಸಲ್ಲಿಸುವಂತೆ ತಿಳಿಸಿದರು. ಎಸ್‌ಪಿ ಪ್ರಕಾಶ್ ನಿಕ್ಕಂ, ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಎಸಿ ಸಂತೋಷ್
ಕಾಮಗೌಡ, ರಾಜಶೇಖರ ಡಂಬಳ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಶ್ರೀಹರಿ ಬಾಬು, ಪಿಡಬ್ಲ್ಯುಡಿ ಇಲಾಖೆ ಇಇ ಚನ್ನಬಸಪ್ಪ ಮೆಕಾಲೆ, ಹಿರಿಯ ಭೂ ವಿಜ್ಞಾನಿ ವಿಶ್ವನಾಥ್, ತಹಶೀಲ್ದಾರ್ ಡಾ| ಹಂಪಣ್ಣ ಸಜ್ಜನ್ ಸೇರಿದಂತೆ ಮರಳು ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.