ವಿಶ್ವದ ಅತಿದೊಡ್ಡ ಲಸಿಕೆ ಆಂದೋಲನಕ್ಕೆ ಮೋದಿ ಚಾಲನೆ:10:30ಕ್ಕೆ ದೇಶವನ್ನು ಉದ್ದೇಶಿಸಿ ಭಾಷಣ !


Team Udayavani, Jan 16, 2021, 8:29 AM IST

mdoi

ನವದೆಹಲಿ: ವಿಶ್ವದ ಅತೀ ದೊಡ್ಡ ಕೋವಿಡ್ ಲಸಿಕೆ ಮಹಾ ಅಭಿಯಾನ ಇಂದಿನಿಂದ (ಜ.16) ಆರಂಭವಾಗಲಿದ್ದು, ಪ್ರಧಾನಿ ಮೋದಿ ಬೆಳಗ್ಗೆ10:30 ಕ್ಕೆ ವರ್ಚ್ಯುವಲ್ ಮೂಲಕ ಲಸಿಕೆ ವಿತರಣೆಯನ್ನು ಉದ್ಘಾಟಿಸಿ, ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಲಸಿಕೆ ವಿತರಣಾ ಅಭಿಯಾನ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5ರವರೆಗೂ ನಡೆಯಲಿದ್ದು, ಮೊದಲ ದಿನವೇ ದೇಶಾದ್ಯಂತ 3,00,000 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನಿಡಲು ಉದ್ದೇಶಿಸಲಾಗಿದೆ. ಇದಕ್ಕಾಗಿ 3,006 ಲಸಿಕೆ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಕೇಂದ್ರದಲ್ಲೂ ಪ್ರತಿದಿನ 100 ಜನರಿಗೆ ಕೋವಿಶೀಲ್ಡ್​ ಮತ್ತು ಕೋವ್ಯಾಕ್ಸಿನ್ ಲಸಿಕೆ ವಿತರಣೆ ಮಾಡಲಾಗುವುದು. ಒಟ್ಟಾರೆ, 1.65 ಕೋಟಿ ಕೋವಿಡ್ ಡೋಸ್‌ಗಳನ್ನು ಕೇಂದ್ರ ಸರ್ಕಾರ ಖರೀದಿಸಿದೆ.

ಕೋವಿನ್ ಆ್ಯಪ್ಉದ್ಘಾಟನೆ ಮಾಡುವ ಮೂಲಕ ದೇಶದ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿಯ ಕಾರ್ಯಕರ್ತರಿಗೆ ಕೋವಿಡ್  ಲಸಿಕೆ ನೀಡುವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಆಯ್ದ ಲಸಿಕೆ ಫಲಾನುಭವಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ ನಡೆಸಲಿದ್ದಾರೆ. ಮುಂದಿನ 10 ದಿನದೊಳಗೆ ಮೊದಲ ಹಂತದ ಅಭಿಯಾನ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ಚಿನ್ನದ ಸರ ಕಳ್ಳತನವಾಗಿದೆ ಎಂದ ಅಜ್ಜಿ:ಪೊಲೀಸರ ತನಿಖೆಯ ವೇಳೆ ಬಯಲಾಯ್ತು ಬೆಚ್ಚಿ ಬೀಳುವ ರಹಸ್ಯ

ಕರ್ನಾಟಕದಲ್ಲೂ ಲಸಿಕಾ ಅಭಿಯಾನಕ್ಕೆ ಆರೋಗ್ಯ ಇಲಾಖೆ ರೆಡಿಯಾಗಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಸಿಕಾ ಕೇಂದ್ರಗಳಲ್ಲಿ ಇಂದಿನಿಂದ ವ್ಯಾಕ್ಸಿನ್ ನೀಡಲಾಗುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 5 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಸರ್ಕಾರಿ ಹಾಗೂ ಖಾಸಗಿ ಮೆಡಿಕಲ್ ಕಾಲೇಜಿನಲ್ಲೂ ಲಸಿಕೆ ನೀಡಲಾಗುತ್ತದೆ.

ಈಗಾಗಲೇ ಸೆರಂ ಇನ್ಸ್ಟಿಟ್ಯೂಟ್  ಆಫ್ ಇಂಡಿಯಾದ ಕೋವಿಶೀಲ್ಡ್ ಲಸಿಕೆ ಹಾಗೂ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಎಲ್ಲಾ ರಾಜ್ಯಗಳಿಗೂ ತಲುಪಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಈಗ ಚುನಾವಣೆ ನಡೆದರೂ ಮೋದಿಯದ್ದೇ ಗೆಲುವು!

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.