ಕಂದಾಯ ಅಧಿಕಾರಿಗಳ ವಿಳಂಬ ನೀತಿಗೆ ಸದಸ್ಯರ ಅಸಮಾಧಾನ
Team Udayavani, Jan 17, 2021, 3:00 AM IST
ಸುಳ್ಯ: ಕಂದಾಯ ಇಲಾಖೆ ಅಧಿಕಾರಿಗಳ ವಿಳಂಬ ನೀತಿಗೆ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ತಾ.ಪಂ.ನ ಸಾಮಾನ್ಯ ಸಭೆಯು ಅಧ್ಯಕ್ಷ ಚನಿಯ ಕಲ್ತಡ್ಕ ಅವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ನಡೆಯಿತು.
ಐವತ್ತೂಕ್ಲು ಗ್ರಾಮದ ಸರ್ವೇ ನಂಬರ್ 6 ಮತ್ತು 7 ರಲ್ಲಿ ಸುಮಾರು 12 ಕುಟುಂಬಗಳು ವಾಸಿಸುತ್ತಿದ್ದು ಸ್ಥಳ ಸರ್ವೇಗೆ ತಹಶೀಲ್ದಾರರು 3 ತಿಂಗಳ ಹಿಂದೆಯೇ ದಿನ ನಿಗದಿ ಪಡಿಸಿದ್ದರು. ಆದರೆ ಈ ಕುರಿತು ಕಂದಾಯ ಆಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸರಿಯಲ್ಲ ಎಂದು ತಾ.ಪ.ಂ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ ತಮ್ಮ ಅಸಮಾಧಾನ ಹೊರಹಾಕಿದರು.
ಚನಿಯ ಕಲ್ತಡ್ಕ ಮಾತನಾಡಿ, 15 ದಿನಗಳೊಳಗೆ ಈ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಇಲಾಖೆಗೆ ಸೂಚಿಸಿದರು. ಇದಕ್ಕೆ ಉತ್ತರಿಸಿದ ತಹಶೀಲ್ದಾರ್ ಅನಿತಾಲಕ್ಷ್ಮೀ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಬೆಳ್ಳಾರೆಯ ಅಂಬೇಡ್ಕರ್ ಭವನದ ಅಡಿ ಸ್ಥಳದ ಜಾಗವನ್ನು ಮಂಜೂರು ಮಾಡಲು ಬೆಳ್ಳಾರೆ ಪಂಚಾಯತ್ ಅಭಿವೃದ್ಧಿ ಅಧಿ ಕಾರಿಗಳು ಸುಳ್ಯ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದು ಶೀಘ್ರ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕೆಂದು ಕಲ್ತಡ್ಕ ತಿಳಿಸಿದರು.
ನಿವೇಶನ ಇಲ್ಲ :
ನೆರೆಯಿಂದಾಗಿ ಮನೆ ಕಳೆದುಕೊಂಡು ವರ್ಷ ಕಳೆದರೂ ನಿವೇಶನ ಮಂಜೂರಾಗದ ಬಗ್ಗೆ ಆಬ್ದುಲ್ ಗಫೂರ್ ಆಕ್ರೋಶ ವ್ಯಕ್ತ ಪಡಿಸಿದರು. ದೊಡ್ಡತೋಟ ಬಳಿ ಇರುವ ಹಳೆಯ ಗ್ರಾಮ ಸೇವಕರ ವಸತಿ ಕೇಂದ್ರದ ಜಾಗದಲ್ಲಿ ಆವಶ್ಯಕತೆಯಿರುವ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ರಾಧಾಕೃಷ್ಣ ಬೊಳ್ಳೂರು ಆಗ್ರಹಿಸಿದರು. ನದಿ-ಹೊಳೆಗಳಲ್ಲಿ ಹೂಳು ತುಂಬಿರುವುದರಿಂದ ನೀರು ಮೇಲಕ್ಕೆ ಬಂದಿದ್ದು ಮರಳು ತೆಗೆಯುವ ಕುರಿತ ಅನುಮತಿ ಬಗ್ಗೆ ರಾಧಕೃಷ್ಣ ಬೊಳ್ಳೂರು ಪ್ರಶ್ನಿಸಿದರು. ಜಿಲ್ಲಾಡಳಿತದಿಂದ ಕೂತ್ಪುಂಜ, ಕೊಲ್ಲಮೊಗ್ರ ಮತ್ತು ಉಬರಡ್ಕ ಮಿತ್ತೂರಿನಲ್ಲಿ ಮರಳು ತೆಗೆಯಲು ಅನುಮತಿ ಸಿಕ್ಕಿದೆ. ಆದರೆ ಮೀಸಲು ಜಾಗ, ಕಿಂಡಿ ಅಣೆಕಟ್ಟು, ಸೇತುವೆಗಳಿರುವ ವ್ಯಾಪ್ತಿಗಳ ಅನುಮತಿಯನ್ನು ತಿರಸ್ಕರಿಸಲಾಗಿದೆ ಎಂದು ತಾಲೂಕು ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ತಿಳಿಸಿದರು.
ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸ್ಥಾಯೀ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Sulya: ನಿಲ್ಲಿಸಿದ್ದ ಕಾರಿಗೆ ಬಸ್ ಢಿಕ್ಕಿ; ಜಖಂ
Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Sulya: ಆರಂತೋಡು: ಚಿಕನ್ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.