35 ಕೋ.ರೂ. ವೆಚ್ಚದಲ್ಲಿ ಸುಬ್ಬರಡಿ ವೆಂಟೆಡ್‌ ಡ್ಯಾಂ ಕಾಮಗಾರಿ


Team Udayavani, Jan 18, 2021, 2:40 AM IST

35 ಕೋ.ರೂ. ವೆಚ್ಚದಲ್ಲಿ  ಸುಬ್ಬರಡಿ ವೆಂಟೆಡ್‌ ಡ್ಯಾಂ ಕಾಮಗಾರಿ

ಉಪ್ಪುಂದ: ಆರು ಗ್ರಾಮಗಳ ಜನರ ಮಹತ್ವಾಕಾಂಕ್ಷೆಯ ಯೋಜನೆಯಾದ ಸುಬ್ಬರಡಿ ವೆಂಟೆಡ್‌ ಡ್ಯಾಂ ಕಾಮಗಾರಿ ಭರದಿಂದ ಸಾಗುತ್ತಿದೆ.

ನೂರಾರು ವರ್ಷಗಳಿಂದ ಉಪ್ಪು ನೀರಿನ ದಾಂಗುಡಿಯಿಂದ ಹೈ ರಾಣಾಗಿರುವ ಉಪ್ಪುಂದ, ಬಿಜೂರು, ಯಡ್ತರೆ, ತಗ್ಗರ್ಸೆ, ಗ್ರಾಮಗಳ ಜನರಿಗೆ ಅನುಕೂಲವಾಗುವಂತೆ ಸುಮನಾವತಿ ನದಿಗೆ ಅಡ್ಡಲಾಗಿ ಪಡುವರಿ ಗ್ರಾಮದ ಸುಬ್ಬರಡಿ ಬಳಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಮಹತ್ವಾಕಾಂಕ್ಷೆಯ ವೆಂಟೆಡ್‌ ಡ್ಯಾಂ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮುಂದಿನಮಳೆಗಾಲದೊಳಗೆ ಪೂರ್ಣಗೊಳ್ಳುವ ಭರವಸೆ ಇದೆ.ಈ ಭಾಗದ ಸಾವಿರಾರು ನಾಗರಿಕರ ಹಲವು ದಶಕಗಳ ಕನಸಾಗಿದ್ದ ಯೋಜನೆಗೆ ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ.  ಮಾಧುಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದ್ದರು. ಕಾಮಗಾರಿ ಆರಂಭಗೊಂಡಿದ್ದು ಈಗಾಗಲೇ ಸುಮಾರು 2 ಕಿ.ಮೀ. ದೂರದ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣ ಗೊಂಡಿದ್ದು, ಸುಮನಾವತಿ ನದಿಯ ನೀರಿನ ಹರಿವಿಗೆ ಅಡ್ಡಲಾಗಿ ಮಣ್ಣು ಹಾಕುವ ಕಾರ್ಯ ಭರದಿಂದ ಸಾಗುತ್ತಿದೆ. ಮಳೆಗಾಲದಲ್ಲಿ ಈ ನದಿಯಲ್ಲಿ ನೀರಿನ ಹರಿವು ಅ ಧಿಕವಾಗಿರುವುದರಿಂದ ಮಳೆಗಾಲದೊಳಗೆ ಕಿಂಡಿ ಅಣೆಕಟ್ಟಿನ ಕಾಮಗಾರಿ ಪೂರ್ಣಗೊಳ್ಳಬೇಕಾಗಿದೆ.

ಉಪ್ಪು ನೀರಿಗೆ ಮುಕ್ತಿ :

ವೆಂಟೆಡ್‌ ಡ್ಯಾಂ ನಿರ್ಮಾಣದಿಂದ ಸಿಹಿ ನೀರು ಸಂಗ್ರಹಗೊಳ್ಳುವುದರಿಂದ ಉಪ್ಪು ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಹೀಗಾಗಿ ಇಲ್ಲಿನ ನಿವಾಸಿಗಳು ಹಲವಾರು ವರ್ಷಗಳಿಂದ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲು ಮನವಿ

ಸಲ್ಲಿಸುತ್ತಾ ಬಂದಿದ್ದರು. ಇಲ್ಲಿನ ನಾಗರಿಕರ ಬಹುಕಾಲದ ಬೇಡಿಕೆಗೆ ಸ್ಪಂ ದಿಸಿದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರು ಸುಬ್ಬರಡಿ ಬಳಿ ವೆಂಟೆಡ್‌ ಡ್ಯಾಂ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿದ್ದರು.

ಈ ಯೋಜನೆಯ ಸಾಕಾರದಿಂದಾಗಿ ಉಪ್ಪು ನೀರು ತಡೆಗೆ ಸಹಾಯಕವಾಗಿದ್ದು, ನದಿ ಪಾತ್ರ ನಿವಾಸಿಗಳ ಉಪ್ಪು ನೀರಿನ ಸಮಸ್ಯೆಗೆ ಶಾಶ್ವತ ಮುಕ್ತಿ ಸಿಕ್ಕಂತಾಗುತ್ತದೆ.

ರೈತರಲ್ಲಿ ಮೂಡಿದ ಹರ್ಷ :

ಈ ಯೋಜನೆಯ ಕಾಮಗಾರಿಯಿಂದಾಗಿ ನದಿ ತೀರದ ಜನರಲ್ಲಿ ಸಂತಸ ಮನಮಾಡಿದೆ. ಸುಮಾರು 300 ಎಕರೆಗೂ ಅಧಿ ಕ ಕೃಷಿ ಭೂಮಿಯು ಉಪ್ಪು ನೀರಿನ ಹಾವಳಿಯಿಂದಾಗಿ ಹಡಿಲು ಬೀಳಿಸಲಾಗಿದೆ. ನೂರಾರು ವರ್ಷಗಳಿಂದ ಸುಮನಾವತಿ ನದಿಯ ಉಪ್ಪು ನೀರಿನಿಂದಾಗಿ ನದಿ ಭಾಗದ ಪಡುವರಿ, ತಗ್ಗರ್ಸೆ, ಬಿಜೂರು, ಯಡ್ತರೆ, ಉಪ್ಪುಂದ, ಬೈಂದೂರು ಗ್ರಾಮದ ನಿವಾಸಿಗಳು ಕಂಗೆಟ್ಟಿದ್ದರು. ಪ್ರತಿ ವರ್ಷ ಉಪ್ಪು ನೀರು ಕೃಷಿ ಭೂಮಿಗೆ ನುಗ್ಗಿ ಕಷ್ಟಪಟ್ಟು ಬೆಳೆದ ಬೆಳೆ ಸಂಪೂರ್ಣ ಹಾನಿಗೀಡಾಗಿ ನಷ್ಟ ಉಂಟಾಗುತ್ತಿತ್ತು. ಇನ್ನು ಮುಂದಿನ ದಿನಗಳಲ್ಲಿ ಸಿಹಿ ನೀರಿನ ಸಂಗ್ರಹದಿಂದ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗಲಿದೆ.

ಎರಡು ಕಿಂಡಿ ಅಣೆಕಟ್ಟು  :

ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟು 200ಮೀ. ಉದ್ದ ಹೊಂದಿದ್ದು ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತದೆ. ಇದೇ ಅನುದಾನದಲ್ಲಿ ಉಪ್ಪು ನೀರು ತಡೆಯುವ ಮತ್ತೂಂದು ಕಿಂಡಿ ಅಣೆಕಟ್ಟು ಪಡುವರಿ ಗ್ರಾಮದ ಬೆಸ್ಕೂರಿನಲ್ಲಿ ಮಾಡಲಾಗುತ್ತದೆ. ಇದರ ನಿರ್ಮಾಣದ ಬಳಿಕ ನದಿಯಲ್ಲಿ ಹಿನ್ನೀರಿನ ಶೇಖರಣೆ ಅ ಧಿಕವಾಗಿ ನದಿ ದಂಡೆ ಕುಸಿಯವ ಸಾಧ್ಯತೆಯಿರುವುದರಿಂದ ನದಿಯ ಇಕ್ಕೆಲಗಳಲ್ಲಿ ಸುಮಾರು 2-3 ಕಿ.ಮೀ ದೂರದವರೆಗೆ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲಾಗುತ್ತದೆ.

 

ಸುಬ್ಬರಡಿ ಬಳಿ ವೆಂಟೆಡ್‌ ಡ್ಯಾಂ ನಿರ್ಮಿಸಬೇಕು ಎಂಬುದು ಸಾವಿರಾರು ನಾಗರಿಕರ ಕನಸಾಗಿತ್ತು. ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಇವರ ವಿಶೇಷ ಪ್ರಯತ್ನ ದಿಂದಾಗಿ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆಯಾಗಿ ಕೆಲಸ ನಡೆಯುತ್ತಿರುವುದು ಸಂತಸ ತಂದಿದೆ.- ಉದಯ ದೇವಾಡಿಗ ಯಡ್ತರೆ,  ಸ್ಥಳೀಯರು 

 

ಈ ಭಾಗದ ಜನತೆಯ ಪರವಾಗಿ ನನ್ನ ವಿಶೇಷ ಪ್ರಯತ್ನದಿಂದಾಗಿ   ಮುಖ್ಯಮಂತ್ರಿ ಹಾಗೂ ಸಂಸದರು ಅನುದಾನ ಬಿಡುಗಡೆ ಮಾಡಿದ್ದಾರೆ. ಡ್ಯಾಂನಿಂದಾಗಿ ಈ ಭಾಗದಲ್ಲಿ ಸಿಹಿ ನೀರಿನ ಅಂತರ್ಜಲ ಹೆಚ್ಚಾಗಿ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ಸಿಗಲಿದೆ.  -ಬಿ.ಎಂ.ಸುಕುಮಾರ್‌  ಶೆಟ್ಟಿ ಬೈಂದೂರು ಶಾಸಕರು

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.