ಗಾಬ್ಬಾದಲ್ಲಿ ಅಬ್ಬರಿಸಿದ ಗಿಲ್, ಪಂತ್: ಭಾರತದ ಮುಡಿಗೆ ಬಾರ್ಡರ್- ಗವಾಸ್ಕರ್ ಟ್ರೋಫಿ
Team Udayavani, Jan 19, 2021, 1:05 PM IST
ಬ್ರಿಸ್ಬೇನ್: ಇಲ್ಲಿನ ಗಾಬ್ಬಾ ಅಂಗಳದಲ್ಲಿ ದಿಟ್ಟ ಪ್ರದರ್ಶನ ತೋರಿದ ಭಾರತ ತಂಡ ಮೂರು ವಿಕೆಟ್ ಅಂತರದಲ್ಲಿ ಪಂದ್ಯ ಗೆದ್ದು, 2-1 ಅಂತರದಲ್ಲಿ ಬಾರ್ಡರ್- ಗವಾಸ್ಕರ್ ಟ್ರೋಫಿ ಗೆದ್ದು ಬೀಗಿದೆ.
ಗೆಲುವಿಗೆ ನಾಲ್ಕನೇ ಇನ್ನಿಂಗ್ಸ್ ನಲ್ಲಿ 328 ರನ್ ಗುರಿ ಪಡೆದ ಭಾರತ ತಂಡಕ್ಕೆ ಆರಂಭಿಕ ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ ಮತ್ತು ರಿಷಭ್ ಪಂತ್ ನೆರವಾದರು. ಮೂವರು ಅರ್ಧಶತಕ ಸಿಡಿಸಿ, ಗಾಬ್ಬಾದಲ್ಲಿ ವಿಶ್ವದಾಖಲೆಯ ಜಯ ಸಾಧಿಸಲು ನೆರವಾದರು.
ವಿಕೆಟ್ ನಷ್ಟವಿಲ್ಲದೆ ನಾಲ್ಕು ರನ್ ಗಳಿಸಿದ್ದಲ್ಲಿಂದ ಐದನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ ರೋಹಿತ್ ಶರ್ಮಾ ರೂಪದಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಕೇವಲ ಏಳು ರನ್ ಗಳಿಸಿ ರೋಹಿತ್ ಔಟಾದರು. ನಂತರ ಜೊತೆಗೂಡಿದ ಪೂಜಾರ- ಗಿಲ್ ಎರಡನೇ ವಿಕೆಟ್ ಗೆ ಶತಕದ ಜೊತೆಯಾಟವಾಡಿದರು.
ತನ್ನ ಎರಡನೇ ಅರ್ಧಶತಕ ಬಾರಿಸಿದ ಶುಭ್ಮನ್ ಗಿಲ್ ಕೇವಲ ಒಂಬತ್ತು ರನ್ ಅಂತರದಲ್ಲಿ ಚೊಚ್ಚಲ ಶತಕ ತಪ್ಪಿಸಿಕೊಂಡರು. 91 ರನ್ ಗಳಿಸಿ ಲಯಾನ್ ಗೆ ವಿಕೆಟ್ ಒಪ್ಪಿಸಿದರು. ತಾಳ್ಮೆಯುತ ಬ್ಯಾಟಿಂಗ್ ನಡೆಸಿದ 56 ರನ್ ಗಳಿಸಿ ಕಮಿನ್ಸ್ ಗೆ ವಿಕೆಟ್ ಒಪ್ಪಿಸಿದರು.
ಇದನ್ನೂ ಓದಿ:ಬದಲಾದ ಭಾರತ ಕ್ರಿಕೆಟ್ ಮನೋಭಾವ
ವೇಗವಾಗಿ ಆಡುವ ಇರಾದೆ ತೋರಿದ ನಾಯಕ ರಹಾನೆ 22 ರನ್ ಗಳಿಸಿ ಔಟಾದರು. ಮಯಾಂಕ್ ಆಟವೂ 9 ರನ್ ಗೆ ಅಂತ್ಯವಾಯಿತು. ಆದರೆ ಉತ್ತಮವಾಗಿ ಬ್ಯಾಟಿಂಗ್ ಮಾಡಿದ ಕೀಪರ್ ರಿಷಭ್ ಪಂತ್ ಅಜೇಯ 89 ರನ್ ಗಳಿಸಿ ತಂಡವನ್ನು ಜಯ ಒದಗಿಸಿದರು.
ಆರಂಭದಲ್ಲಿ ನಿಧಾನಗತಿಯಿಂದ ಬ್ಯಾಟಿಂಗ್ ನಡೆಸಿದ ಪಂತ್, ಅಂತ್ಯದಲ್ಲಿ ಆಕರ್ಷಕ ಶಾಟ್ ಗಳಿಂದ ಗಮನ ಸೆಳೆದರು. 138 ಎಸೆತ ಎದುರಿಸಿದ ಪಂತ್ 9 ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ ಅಜೇಯ 89 ರನ್ ಬಾರಿಸಿದರು.
ಆಸೀಸ್ ಪರ ಪ್ಯಾಟ್ ಕಮಿನ್ಸ್ 5 ವಿಕೆಟ್ ಪಡೆದರೆ, ನಥನ್ ಲಯಾನ್ ಎರಡು ಮತ್ತು ಹ್ಯಾಜಲ್ ವುಡ್ ಒಂದು ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.