ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಚಲನ ಸೃಷ್ಠಿಸಿದ ಜಿಲ್ಲಾಧಿಕಾರಿಗಳ ನೋಟಿಸ್

Team Udayavani, Jan 19, 2021, 11:59 PM IST

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಚಲನ ಸೃಷ್ಠಿಸಿದ ಜಿಲ್ಲಾಧಿಕಾರಿಗಳ ನೋಟಿಸ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಫ್ ಉಲಂಘಿಸಿ ಅಡ್ಡ ಮತದಾನ ಮಾಡಿದ ಸದಸ್ಯರಿಗೆ ಗಂಡಾಂತರ ಕಾದಿದೆಯೇ? ಎಂಬ ವಿಚಾರ ಸಾರ್ವಜನಿಕ ಮತ್ತು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಜಿಲ್ಲೆಯ ಚಿಂತಾಮಣಿ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲಂಘಿಸಿ ಅಡ್ಡಮತದಾನ ಮಾಡಿದ ಆರೋಪಕ್ಕೆ ಗುರಿಯಾಗಿರುವ ಜೆಡಿಎಸ್ ನಗರಸಭಾ ಸದಸ್ಯ ಮೊಹ್ಮದ್ ಶಫೀಖ್ ಅವರಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ನೋಟಿಸ್ ಜಾರಿಗೊಳಿಸಲಾಗಿದ್ದು ಜನವರಿ 27 ರಂದು ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಖುದ್ದಾಗಿ ಅಥವಾ ವಕೀಲರ ಮೂಲಕ ಅಗತ್ಯ ದಾಖಲಾತಿ ಹಾಗೂ ಸಾಕ್ಷ್ಯಾಧಾರಗಳೊಂದಿಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ ತಪ್ಪಿದಲ್ಲಿ ಸದಸ್ಯರ ಹೇಳಿಕೆ ಯಾವುದು ಇರುವುದಿಲ್ಲವೆಂದು ಪರಿಗಣಿಸಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಲಾಗಿದೆ.

ಚಿಂತಾಮಣಿಯ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ರಾಜ್ಯ ಜೆಡಿಎಸ್ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರು ನೀಡಿದ ವಿಪ್ ಉಲಂಘಿಸಿ ನಗರಸಭಾ ಸದಸ್ಯ ಮೊಹ್ಮದ್ ಶಫೀಖ್ ಅವರು ಪ್ರಜಾಪಕ್ಷದ ಅಭ್ಯರ್ಥಿಗೆ ಅಡ್ಡಮತದಾನ ಮಾಡಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಾರೆ ಕೂಡಲೇ ಇವರನ್ನು ನಗರಸಭಾ ಸದಸ್ಯತ್ವದಿಂದ ಅಮಾನತ್ತುಗೊಳಿಸಬೇಕೆಂದು ಜಿಲ್ಲಾ ಜೆಡಿಎಸ್ ಪಕ್ಷದ ಅಧ್ಯಕ್ಷ ಮುನೇಗೌಡ ಅವರು ಜಿಲ್ಲಾಧಿಕಾರಿಗಳಿಗೆ 03 ನವೆಂಬರ್ 2020 ರಂದು ದೂರು ಸಲ್ಲಿಸಿದ್ದು ಇಲ್ಲಿ ಸ್ಮರಿಸಬಹುದಾಗಿದೆ.

ಚಿಕ್ಕಬಳ್ಳಾಪುರ ಸದಸ್ಯರಿಗೆ ಆತಂಕ?: ಜಿಲ್ಲೆಯ ಚಿಂತಾಮಣಿ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವ ಜೆಡಿಎಸ್ ನಗರಸಭಾ ಸದಸ್ಯನಿಗೆ ಜಿಲ್ಲಾಧಿಕಾರಿಗಳಿಂದ ನೋಟಿಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ ಅಡ್ಡಮತದಾನ ಮಾಡಿರುವ ಚಿಕ್ಕಬಳ್ಳಾಪುರ ನಗರಸಭೆಯ ಕಾಂಗ್ರೆಸ್ ಸದಸ್ಯರಿಗೆ ನಡುಕ ಸೃಷ್ಠಿಯಾಗಿದೆ.

ಈ ಕುರಿತು ಉದಯವಾಣಿಯೊಂದಿಗೆ ನಗರಸಭಾ ಸದಸ್ಯ ಮೊಹ್ಮದ್ ಶಫೀಖ್ ಮಾತನಾಡಿ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಜೆಕೆ ಕೃಷ್ಣರೆಡ್ಡಿ ಅವರ ಗೆಲುವಿಗೆ ಶ್ರಮಿಸಿದ್ದೇನೆ ಅವರ ವಿರುಧ್ಧ ಅಪಪ್ರಚಾರ ಮಾಡದವರು ಅವರೊಂದಿಗೆ ಗುರುತಿಸಿಕೊಂಡಿದ್ದಾರೆ ಕ್ಷೇತ್ರದ ಶಾಸಕರು ನನ್ನ ಮೇಲೆ ಕ್ರಮ ಜರುಗಿಸಲು ಮುಂದಾಗುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾನೊಬ್ಬನೇ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದನಾ? ಬೇರೆ ಯಾರು ಯಾವ ಪಕ್ಷದವರು ಅಡ್ಡಮತದಾನ ಮಾಡಿ ವಿಪ್ ಉಲಂಘನೆ ಮಾಡಿಲ್ಲವೇ? ಅವರು ಯಾರು ಪಕ್ಷ ವಿರೋಧಿ ಚಟುವಟಿಕೆಗಳು ಮಾಡಿಲ್ಲವೇ? ನೋಟಿಸ್ ನನಗೆ ಮಾತ್ರ ಸೀಮಿತವೇ? ಎಂದು ಪ್ರಶ್ನಿಸಿದರಲ್ಲದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಚೌಕಟ್ಟಿನಲ್ಲಿ ಮತ್ತು ಕಾನೂನಿನ ವ್ಯಾಪ್ತಿಯಲ್ಲಿ ನಾನು ಏನು ಮಾಡಬೇಕೆಂದು ನಾನು ಮಾಡುತ್ತೇನೆ ಎಂದರು.

ರಾಜ್ಯ ಮತ್ತು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದಲ್ಲಿರುವ ಅಲ್ಪಸಂಖ್ಯಾತರು ಯಾರು ಬೆಳೆಯಬಾರದೆಂದು ಹುನ್ನಾರ ನಡೆಸಲಾಗಿದೆ ಚಿಂತಾಮಣಿಯಲ್ಲಿ ನಾನು ಮಾಡಿರುವ ಜನಸೇವೆಯನ್ನು ಗುರುತಿಸಿ ಮಹಾಜನತೆ ಬೆಂಬಲಿಸಿ ನಗರಸಭಾ ಸದಸ್ಯರನ್ನಾಗಿ ಮಾಡಿದ್ದಾರೆ ಆದರೇ ಪಕ್ಷದ ಮುಖಂಡರು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ನನನ್ನು ರಾಜಕೀಯವಾಗಿ ಬೆಳೆಯಬಾರದೆಂಬ ಉದ್ದೇಶದಿಂದ ಪಿತೂರಿ ನಡೆಸಿದ್ದಾರೆ ಕಾನೂನಿಗೆ ಗೌರವಿಸಬೇಕು ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ನೋಟಿಸ್ ಬಂದರೆ ಮುಂದಿನ ಆಲೋಚನೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಒಟ್ಟಾರೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ನಗರಸಭಾ ಸದಸ್ಯರಿಗೆ ನೋಟಿಸ್ ನೀಡುವ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ನಗರಸಭಾ ಸದಸ್ಯರಿಗೆ ನೋಟಿಸ್ ಜಾರಿಗೊಳಿಸುವ ಸಾಧ್ಯತೆಯಿದೆ ಎಂದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದ್ದು ಎಲ್ಲಾದಕ್ಕೂ ಜಿಲ್ಲಾಧಿಕಾರಿಗಳು ಏನು ಕ್ರಮ ಕೈಗೊಳ್ಳುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.