ಥಂಡಾಯಕ್ಕೆ ಸಿಎಂ ಪ್ರವೇಶ

ಮಾತುಕತೆಗೆ ಬರುವಂತೆ ಅತೃಪ್ತ ಶಾಸಕರಿಗೆ ಆಹ್ವಾನ

Team Udayavani, Jan 20, 2021, 5:20 AM IST

ಥಂಡಾಯಕ್ಕೆ ಸಿಎಂ ಪ್ರವೇಶ

ಬೆಂಗಳೂರು: “ಸಮಸ್ಯೆ ಹೊತ್ತು ದಿಲ್ಲಿಗೆ ಬರಬೇಡಿ, ಪಕ್ಷದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಬೇಡಿ, ಬಿಎಸ್‌ವೈ ನಾಯಕತ್ವ ಅಬಾಧಿತ’ ಎಂಬ ವರಿಷ್ಠರ ಸ್ಪಷ್ಟ ಸಂದೇಶದ ಅನಂತರವೂ ಬಿಜೆಪಿಯಲ್ಲಿ ಅಸಮಾಧಾನ, ಬಹಿರಂಗ ಹೇಳಿಕೆ, ಪ್ರತ್ಯೇಕ ಸಭೆಯಂಥ ಘಟನೆಗಳು ಮುಂದುವರಿದಿವೆ. ಭಿನ್ನಮತವನ್ನು ಶಮನಗೊಳಿಸಲು ಈಗ ಸಿಎಂ ಯಡಿಯೂರಪ್ಪ ಅವರೇ ರಂಗ ಪ್ರವೇಶಿಸಿದ್ದಾರೆ. ಅತೃಪ್ತ ಶಾಸಕರನ್ನು ಕರೆದು ಮಾತನಾಡಿಸಲು ಯತ್ನಿಸಿದ್ದಾರೆ.

ಬಸನಗೌಡ ಪಾಟೀಲ್‌ ಮತ್ತು ಎಂ.ಪಿ. ರೇಣುಕಾಚಾರ್ಯ ಅವರ ಬಹಿರಂಗ ಹೇಳಿಕೆ ನಡುವೆಯೇ ಇನ್ನೊಂದು “ಪಕ್ಷ ನಿಷ್ಠ’ ಅತೃಪ್ತ ಶಾಸಕರ ತಂಡ ಪ್ರತ್ಯೇಕ ಸಭೆ ನಡೆಸಲು ಮುಂದಾಗಿದೆ. ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಸಮಾರು 20 ಶಾಸಕರು ಬುಧವಾರ ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿ, ವರಿಷ್ಠರನ್ನು ಭೇಟಿಯಾಗಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕರಾದ ಜಿ.ಎಚ್‌. ತಿಪ್ಪಾರೆಡ್ಡಿ ಮತ್ತು ಶಿವನಗೌಡ ನಾಯಕ್‌ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಹಾಲಿ ಸಚಿವರನ್ನು ಕೈ ಬಿಟ್ಟು ಸಂಪುಟ ಪುನಾರಚನೆ ಮಾಡುವಂತೆ ಆಗ್ರಹಿಸಿದ್ದಾರೆ. ಜಿಲ್ಲಾ ಪ್ರಾತಿನಿಧ್ಯ ಮತ್ತು ಹಿರಿತನವನ್ನು ಪರಿಗಣಿಸಿ ಸಂಪುಟ ಪುನಾರಚನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ದಿಲ್ಲಿಯಲ್ಲಿ  ರೇಣುಕಾಚಾರ್ಯ :

ಇನ್ನೊಂದೆಡೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ದಿಲ್ಲಿಗೆ ತೆರಳಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಮತ್ತು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭ ಸಿ.ಪಿ. ಯೋಗೇಶ್ವರ್‌ಅವರಿಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಬಹಿರಂಗವಾಗಿ  ಅನಗತ್ಯ ಹೇಳಿಕೆ ನೀಡುವುದರಿಂದ ಪಕ್ಷ ಮತ್ತು ಸರಕಾರದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತದೆ ಎಂದು ವರಿಷ್ಠರು ಹೇಳಿದ್ದು, ಬಹಿರಂಗ ಹೇಳಿಕೆ ನೀಡದಂತೆ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಕಸರತ್ತು :

ಅಸಮಾಧಾನಿತ ಶಾಸಕರ ಮನವೊಲಿಸಲು ಸಿಎಂ ಬಿಎಸ್‌ವೈ ಮುಂದಾಗಿದ್ದು, ಎಂ.ಪಿ. ರೇಣುಕಾಚಾರ್ಯ ಅವರಿಗೆ ದೂರವಾಣಿ ಕರೆ ಮಾಡಿ, ಗೊಂದಲ ಸೃಷ್ಟಿಸುವ ಯತ್ನ ಮಾಡದೆ, ತಮ್ಮನ್ನು ಬಂದು ಭೇಟಿ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಕುಂದಾಪುರದ ಆನೆಗುಡ್ಡೆ ದೇವಸ್ಥಾನದಲ್ಲಿ ಮಾತನಾಡಿದ ಸಿಎಂ, ರೇಣುಕಾಚಾರ್ಯ ತಮ್ಮನ್ನು ಭೇಟಿ ಮಾಡಲಿದ್ದಾರೆ. ಯಾವುದೇ ರೀತಿಯ ಗೊಂದಲ ಇಲ್ಲ ಎಂದಿದ್ದಾರೆ.

ಪ್ರತ್ಯೇಕ ಸಭೆ ನಡೆಸಲು ಮುಂದಾಗಿದ್ದ ಅರವಿಂದ್‌ ಬೆಲ್ಲದ ಮತ್ತು ಬಿ.ಸಿ. ನಾಗೇಶ್‌ ಅವರನ್ನು ಮಂಗಳ ವಾರ ಸಂಜೆ ಗೃಹ ಕಚೇರಿ “ಕೃಷ್ಣಾ’ಗೆ ಕರೆಯಿಸಿದ್ದಾರೆ. ಅನಂತರ ಅವರೊಂದಿಗೆ ಚರ್ಚಿಸಿ ಅತೃಪ್ತರ ಸಭೆ ನಡೆಸಿ ಸರಕಾರಕ್ಕೆ ಮುಜುಗರ ಉಂಟು ಮಾಡದಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಒಂದು ಹಂತದಲ್ಲಿ ರೇಣುಕಾಚಾರ್ಯ ಅವರ ದಿಲ್ಲಿ ಭೇಟಿಯ ಬಗ್ಗೆ ಮಾಹಿತಿ ಪಡೆಯಲು ಸಂಸದ, ಪುತ್ರ ಬಿ.ವೈ. ರಾಘವೇಂದ್ರ ಅವರನ್ನು ದಿಲ್ಲಿಗೆ ಕಳುಹಿಸುವುದಕ್ಕೂ ಯಡಿಯೂರಪ್ಪ ಮುಂದಾಗಿದ್ದರು ಎನ್ನಲಾಗಿದೆ.

ಮತ್ತೂ ಖಾತೆ ಹಂಚಿಕೆ ಗೊಂದಲ :

ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆಯುತ್ತಿದ್ದರೂ ಖಾತೆ ಹಂಚಿಕೆಯ ಗೊಂದಲ ಮುಂದುವರಿದಿದೆ. ಹಿರಿಯ ಸಚಿವರಿಂದ ಪ್ರಬಲ ಖಾತೆಗಳಿಗೆ ಬೇಡಿಕೆ ಮತ್ತು ಕೆಲವು ಸಚಿವರ ಖಾತೆ ಬದಲಾವಣೆ ಕುರಿತು ಚರ್ಚೆಯಿಂದಾಗಿ ಖಾತೆ ಹಂಚಿಕೆ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಾತೆ ಬದಲಾವಣೆಗೆ ಮನವಿ ಮಾಡಿದ್ದಾರೆ. ಅವರ ಖಾತೆ ಬದಲಾಯಿಸಿ ಕಂದಾಯ ಖಾತೆ ನೀಡುತ್ತಾರೆ ಎನ್ನಲಾಗುತ್ತಿದೆ. ಕಂದಾಯ ಖಾತೆ ಹೊಂದಿರುವ ಆರ್‌. ಅಶೋಕ್‌ ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಬೇಡಿಕೆ ಮಂಡಿಸಿದ್ದಾರೆ. ಅರವಿಂದ ಲಿಂಬಾವಳಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಬಾರದು ಎಂದು ಸಿಎಂ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ಹಿರಿಯ ಸಚಿವರ ಜತೆ ಚರ್ಚಿಸಿ ಖಾತೆ ಹಂಚಿಕೆ ಮಾಡಲು ಮುಖ್ಯಮಂತ್ರಿ ನಿರ್ಧರಿಸಿದ್ದರು. ಅಸಮಾಧಾನಿತ ಶಾಸಕರ ಮನವೊಲಿಕೆ ಕಸರತ್ತು ನಡೆಸಿದ್ದರಿಂದ ಬುಧವಾರ ಹಿರಿಯ ಸಚಿವರ ಜತೆ ಚರ್ಚಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ.

ಖಾತೆ ಹಂಚಿಕೆ ಕುರಿತು ಸಚಿವರ ಜತೆ ಸಮಾಲೋಚನೆ ನಡೆಸಿ, ಗುರುವಾರ ಖಾತೆ ಹಂಚಿಕೆ ಮಾಡುತ್ತೇನೆ.ಬಿ.ಎಸ್‌. ಯಡಿಯೂರಪ್ಪ, ಮುಖ್ಯಮಂತ್ರಿ

ಟಾಪ್ ನ್ಯೂಸ್

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.