ಗಣರಾಜ್ಯೋತ್ಸವಕ್ಕೆಸಕಲ ಸಿದ್ಧತೆ
Team Udayavani, Jan 20, 2021, 8:13 PM IST
ಬಳ್ಳಾರಿ: ಕೋವಿಡ್-19 ಮತ್ತು ರೂಪಾಂತರ ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಜ.26ರಂದು ನಡೆಯುವ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಮತ್ತು ಗೌರವ ಪೂರ್ವಕವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದರು.
ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಸರಳವಾಗಿ ಆಚರಿಸಲಾಗುವುದು ಮತ್ತು ಎಲ್ಲ ಸರ್ಕಾರಿ ಕಚೇರಿಗಳು, ಶಾಲೆ ಮತ್ತು ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸ್ಯಾನಿಟೈಸೇಷನ್, ಮಾಸ್ಕ್ ಕಡ್ಡಾಯವಾಗಿ ಧರಿಸಿಕೊಳ್ಳುವುದರ ಮೂಲಕ ಗಣರಾಜ್ಯೋತ್ಸವ ಆಚರಿಸಬೇಕು ಎಂದು ತಿಳಿಸಿದರು.
ಜ.26 ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ನಗರದ ಎಚ್.ಆರ್.ಗವಿಯಪ್ಪ ವೃತ್ತದಲ್ಲಿ (ಮೋತಿ ವೃತ್ತ) 150 ಅಡಿ ಎತ್ತರದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದಾರೆ. ನಂತರ ವೈದ್ಯಕೀಯ ಕಾಲೇಜಿನಲ್ಲಿರುವ ಮಹಾತ್ಮ ಗಾಂಧೀಜಿಯ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಿ, ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಪಥ ಸಂಚಲನ ಪಡೆಗಳಿಂದ ಗೌರವ ಸ್ವೀಕರಿಸಿ ಸಂದೇಶ ನೀಡಲಿದ್ದಾರೆ ಎಂದು ವಿವರಿಸಿದರು.
ಇದನ್ನೂ ಓದಿ:ಯುವಶಕ್ತಿಯಿಂದ ದೇಶದ ವಿಕಾಸ
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಿಗೆ ಭೂಮಿಯ ಹಕ್ಕು ಪತ್ರಗಳನ್ನು ವಿತರಿಸುವುದರ ಜೊತೆಗೆ ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಗೌರವಿಸಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕೋವಿಡ್ -19 ಮಾರ್ಗಸೂಚಿಗಳನ್ವಯ ಗಣರಾಜ್ಯೋತ್ಸವವನ್ನು ಆಚರಿಸುವಂತೆ ಸೂಚಿಸಿದರು, ಜಿಲ್ಲೆಯ ಎಲ್ಲಾ ಪ್ರಮುಖ ವೃತ್ತಗಳಲ್ಲಿ, ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರ ಮಾಡಬೇಕು ಮತ್ತು ಅಂದು ವಿವಿಧ ದೇವಸ್ಥಾನಗಳಿಗೆ ವಿಶೇಷ ವಿದ್ಯುತ್ ದೀಪಾಲಂಕಾರ, ವಿಶೇಷ ಪೂಜೆ, ಪಾರ್ಥನೆ ಮಾಡಲು ಸೂಚಿಸಿದರು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ರಮೇಶ್ ಕೊನರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ ರಂಗಣ್ಣನವರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಚ್.ಎಲ್. ಜನಾರ್ದನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.