ಕಾಪು ತಾಲೂಕಿನ 16 ಗ್ರಾ.ಪಂಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ
Team Udayavani, Jan 21, 2021, 2:27 PM IST
ಕಾಪು: ಕಾಪು ತಾಲೂಕು ಗ್ರಾ.ಪಂ ಅಧ್ಯಕ್ಷ -ಉಪಾಧ್ಯಕ್ಷ ಮೀಸಲಾತಿಗಳ ಆಯ್ಕೆ ಪ್ರಕ್ರಿಯೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ನೇತ್ರತ್ವದಲ್ಲಿ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಉಚ್ಚಿಲ ಮಹಾಲಕ್ಷ್ಮಿ ಸಭಾ ಭವನದಲ್ಲಿ ಗುರುವಾರ ನಡೆಯಿತು.
ಕಾಪು ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 16 ಗ್ರಾಮ ಪಂಚಾಯತಿಗಳ ಮೀಸಲಾತಿ ವಿವರ ಈ ಕೆಳಗಿನಂತಿದೆ.
ಬೆಳ್ಳೆ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ.
ಕುರ್ಕಾಲು: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ.
ಶಿರ್ವ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ.
ಇನ್ನಂಜೆ: ಅಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ.
ಕಟಪಾಡಿ: ಅಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ.
ಕೋಟೆ: ಅಧ್ಯಕ್ಷ -ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ.
ಇದನ್ನೂ ಓದಿ:ತಪ್ಪು ಗ್ರಹಿಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧ : ವಾಟ್ಸಾಪ್
ಮಜೂರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ.
ಕುತ್ಯಾರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ.
ಮುದರಂಗಡಿ: ಅಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ – ಸಾಮಾನ್ಯ.
ಬೆಳಪು: ಅಧ್ಯಕ್ಷ – ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ.
ಬಡಾ: ಅಧ್ಯಕ್ಷ -ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ.
ಎಲ್ಲೂರು: ಅಧ್ಯಕ್ಷ – ಸಾಮಾನ್ಯ, ಉಪಾಧ್ಯಕ್ಷ- ಅನುಸೂಚಿತ ಜಾತಿ ಮಹಿಳೆ.
ಪಲಿಮಾರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ.
ತೆಂಕ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ.
ಪಡುಬಿದ್ರಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ.
ಹೆಜಮಾಡಿ: ಅಧ್ಯಕ್ಷ – ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ.
ಇದನ್ನೂ ಓದಿ: “ಪ್ರೋಟೀನ್ ಯುಕ್ತ ಆಹಾರ ಸೇವನೆ : ಪಥ್ಯೆಯಿಲ್ಲದೆ ಬೊಜ್ಜು ಕರಗಲು ಸಾಧ್ಯ”
ಪ್ರಥಮವಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ಐದು ಪರಿಶಿಷ್ಟ ಜಾತಿ ಮಹಿಳೆ ಮೀಸಲು ಬಂದ ಪರಿಣಾಮ ಅದೃಷ್ಟ ಚೀಟಿ ಎತ್ತುವ ಮೂಲಕ ಪ್ರಥಮವಾಗಿ ಬಡಾ ಗ್ರಾಮ ಪಂಚಾಯತಿ ಅಧ್ಯಕ್ಷ ಮೀಸಲು ಪ್ರಕಟವಾಯಿತು.
ಬಹುಮತ ಇದ್ದರೂ ಬಿಜೆಪಿ ಬೆಂಬಲಿತರು ಅಧಿಕ ಸ್ಥಾನ ಪಡೆದಿದ್ದರೂ ಪರಿಶಿಷ್ಟ ಜಾತಿ ಮೀಸಲಾತಿಗೆ ಅಭ್ಯರ್ಥಿ ಇಲ್ಲದ ಕಾರಣ ಕಾಂಗ್ರೆಸ್‌ಗೆ ಅನಾಯಾಸವಾಗಿ ಅಧ್ಯಕ್ಷ ಸ್ಥಾನ ಲಭಿಸಿದೆ.
ಚುನಾವಣಾ ಆಯೋಗ ಗೊತ್ತುಪಡಿಸಿದ ಮೀಸಲಿನಂತೆ ಆನ್ಲೈನ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆದಿದೆ. ಮುಂದೆ ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಅಧಿಕಾರಿಗಳನ್ನು ನೇಮಿಸಿ ಏಳು ದಿನ ಮುಂಚಿತವಾಗಿ ಗ್ರಾಮ ಪಂಚಾಯತಿಗಳಿಗೆ ನೋಟಿಸ್ ನೀಡಲಾಗುವುದು. 15 ದಿನಗಳ ಒಳಗೆ ಜಿಲ್ಲೆಯ ಎಲ್ಲಾ ಗ್ರಾ.ಪಂಚಾಯತಿಗಳ ಅಧ್ಯಕ್ಷ-ಉಪಾಧಕ್ಷಗಳ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.