ದೇವದಾಸಿ ಪದ್ಧತಿ ನಿರ್ಮೂಲನೆಗೆ ಯೋಜನೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಮಾತನಾಡಿದರು.
Team Udayavani, Jan 21, 2021, 5:52 PM IST
ದಾವಣಗೆರೆ: ದೇವದಾಸಿ ಪದ್ಧತಿ ನಿರ್ಮೂಲನೆಗಾಗಿ ಹಾಗೂ ಮಾಜಿ ದೇವದಾಸಿಯರ ಮಕ್ಕಳ ಸ್ವಾವಲಂಬನೆಗಾಗಿ ಹೊಸ ಯೋಜನೆ ರೂಪಿಸಲಾಗಿದೆ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ 2-3 ಜಿಲ್ಲೆಗಳಲ್ಲಿ ಯೋಜನೆ ಜಾರಿಗೆ ಬಂದಿದೆ. ದೇವಸ್ಥಾನಗಳ ಆವರಣದಲ್ಲಿ ತರಬೇತಿ ಕೇಂದ್ರ ತೆರೆಯುವುದು. ಮಾಜಿ ದೇವದಾಸಿಯರ ಮಕ್ಕಳಿಗೆ ಹೊಲಿಗೆ ಮತ್ತು·ಕಂಪ್ಯೂಟರ್ ತರಬೇತಿ ನೀಡಲಾಗುವುದು.ದಾವಣಗೆರೆ ಜಿಲ್ಲೆಯಲ್ಲೂ ಮಾಜಿದೇವದಾಸಿಯರು ಆಸಕ್ತಿ ತೋರಿದಲ್ಲಿ ತರಬೇತಿ ಕೇಂದ್ರವನ್ನು ನಿಗಮದ ವತಿಯಿಂದ ಆರಂಭಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ : ಅಭಿವೃದ್ಧಿಗಾಗಿ ಜೀವ ವೈವಿಧ್ಯಕ್ಕೆ ಧಕ್ಕೆ ಬೇಡ
ದೇವದಾಸಿ ಪದ್ಧ ತಿ ನಿರ್ಮೂಲನೆಗಾಗಿ ಈಗಾಗಲೇ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಸ್ವ ಉದ್ಯೋಗ ಕೈಗೊಳ್ಳಲು 50 ಸಾವಿರ ಸಾಲ, 50 ಸಾವಿರ ಸಬ್ಸಿಡಿ ಸೌಲಭ್ಯ ನೀಡಲಾಗುತ್ತಿದೆ. 1985ರ ಕಾಯ್ದೆ ಪ್ರಕಾರ ಮುತ್ತು ಕಟ್ಟುವುದು, ದೇವರಿಗೆ ಬಿಡುವುದು ಕಾನೂನಿನ ಉಲ್ಲಂಘನೆ ಮಾಡುವರ ವಿರುದ್ದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ ಏ. 1 ರಿಂದ ಮಹಿಳಾ ಒಕ್ಕೂಟದಿಂದ ಶೇಂಗಾ ಚಿಕ್ಕಿ ಘಟಕ ಆರಂಭಿಸಲು ಯೋಜಿಸಲಾಗಿದೆ ಎಂದರು. ಲಿಂಗತ್ವ ಅಲ್ಪಸಂಖ್ಯಾತರ ಸಂಘದ ವ್ಯವಸ್ಥಾಪಕ ಕಾರ್ಯದರ್ಶಿ ಮಾತನಾಡಿದರು. ಮಹಾನಗರ ಪಾಲಿಕೆ ಸದಸ್ಯೆಯರಾದ ಉಮಾ ಪ್ರಕಾಶ್, ಎಚ್.ಸಿ. ಜಯಮ್ಮ, ದಿಶಾ ವಿಚಕ್ಷಣಾ ಸಮಿತಿ ಸದಸ್ಯೆ ಚೇತನಾ ಶಿವಕುಮಾರ್, ಜಿ.ಪಂ ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮೀ ಇತರರು ಇದ್ದರು.
ಪುನರ್ ಸಮೀಕ್ಷೆ ಇಲ್ಲ..
2007-08 ರಿಂದ ಮಾಜಿ ದೇವದಾಸಿ ಸರ್ವೇ ನಿಲ್ಲಿಸಲಾಗಿದೆ. ದೇವದಾಸಿ ಪದ್ಧತಿ ನಿರ್ಮೂಲನೆ ಆಗಬೇಕೆಂಬ ಉದ್ದೇಶದಿಂದ ಪುನರ್ ಸರ್ವೇ ನಿಲ್ಲಿಸಲಾಗಿದೆ. ರಾಜ್ಯದಲ್ಲಿ 14 ಜಿಲ್ಲೆಗಳಲ್ಲಿ 44,660 ಮಾಜಿ ದೇವದಾಸಿಯರಿದ್ದು, 24,184 ಜನರಿಗೆ ವಸತಿ ಒದಗಿಸಲಾಗಿದೆ. ಈ ಅನಿಷ್ಟ ಪದ್ಧತಿ ಮುಂದಿನ ಪೀಳಿಗೆಗೆ ಮುಂದುವರೆಯಬಾರದು ಎಂದು ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಮನವಿ ಮಾಡಿದರು.
ರಾಜ್ಯದಲ್ಲೇ ಮೊದಲು..
ಉದ್ಯೋಗಿನಿ ಯೋಜನೆಯಡಿ ರಾಜ್ಯದಲ್ಲೇ ಮೊದಲ ಬಾರಿಗೆ ಜಿಲ್ಲೆಯ ಕೆನರಾ ಬ್ಯಾಂಕಿನಿಂದ 5 ಲಕ್ಷ ರೂಪಾಯಿ ಸಾಲಸೌಲಭ್ಯವನ್ನು ಪಡೆದ ನಿಟುವಳ್ಳಿಯಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿರುವ ಫಲಾನುಭವಿ ಕವಿತಾ ಆವರಿಗೆ ಸಾಂಕೇತಿಕವಾಗಿ ಚೆಕ್ ವಿತರಣೆ ಮಾಡಲಾಯಿತು.
ಇದನ್ನೂ ಓದಿ : ಫ್ಯಾಂಟಮ್ ಈಗ “ವಿಕ್ರಾಂತ್ ರೋಣ”: ಬುರ್ಜ್ ಖಲೀಫಾದಲ್ಲಿ ರಾರಾಜಿಸಲಿದೆ ಕಿಚ್ಚನ ಕಟೌಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.