ರಾಯಚೂರು: 30ರಂದು ಸ್ಲಂ ಜನರ ಹಬ್ಬ-21
20ಕ್ಕೂ ಹೆಚ್ಚು ಜಿಲ್ಲೆಗಳ ಸ್ಲಂ ತಂಡಗಳು ಭಾಗವಹಿಸಿ ಕಲಾ ಪ್ರದರ್ಶನ ನೀಡಲಿವೆ.
Team Udayavani, Jan 21, 2021, 6:03 PM IST
Representative Image
ರಾಯಚೂರು: ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ದಶಮಾನೋತ್ಸವ ನಿಮಿತ್ತ ಜ.30ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮೂರನೇ ರಾಜ್ಯಮಟ್ಟದ ಸ್ಲಂ ಜನರ ಹಬ್ಬ ರಾಯಚೂರು-2021 ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ, ಸ್ಲಂ ಜನಾಂದೋಲನಾ ಕರ್ನಾಟಕ ಸದಸ್ಯ ಸಂಘಟನೆಯಾಗಿರುವ ರಾಯಚೂರು ಸ್ಲಂ ಕ್ರಿಯಾ ವೇದಿಕೆಯ ಸಹಯೋಗದಲ್ಲಿ ಈ ಹಬ್ಬ ಹಮ್ಮಿಕೊಳ್ಳಲಾಗಿದೆ. 20ಕ್ಕೂ ಹೆಚ್ಚು ಜಿಲ್ಲೆಗಳ ಸ್ಲಂ ತಂಡಗಳು ಭಾಗವಹಿಸಿ ಕಲಾ ಪ್ರದರ್ಶನ ನೀಡಲಿವೆ. ಸ್ಲಂ ಜನರಲ್ಲಿ ಅಡಗಿದ ವಿವಿಧ ಪ್ರತಿಭೆಗಳನ್ನು ಅನೇಕ ಕಲೆಗಳನ್ನು ಪ್ರದರ್ಶಿಸಲು ಇದೊಂದು ಉತ್ತಮ ವೇದಿಕೆಯಾಗಿದೆ.
ವಸತಿ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದಾರೆ. ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕೆ., ನಗರದ ಶಾಸಕ ಡಾ| ಶಿವರಾಜ ಪಾಟೀಲ್
ಆಗಮಿಸುವರು ಎಂದು ವಿವರಿಸಿದರು. ಈ ನಿಮಿತ್ತ ರ್ಯಾಲಿ ಹಮ್ಮಿಕೊಂಡಿದ್ದು, ಜನವಾದಿ ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಕೆ.ನೀಲಾ ಚಾಲನೆ ನೀಡುವರು.
ವಿಜಯಪುರ ಮಹಿಳಾ ವಿವಿಯ ಸರಸ್ವತಿ, ವಕೀಲ ಕ್ಲಿಪ್ಟನ್ ರೋಜಾರಿಯೋ, ಸ್ವಾಗತಿ ಸಮಿತಿ ಅಧ್ಯಕ್ಷ ಕೆ.ಕರಿಯಪ್ಪ ಮಾಸ್ತರ್, ದಾನಪ್ಪ ನಿಲೋಗಲ್, ಎಂ.ಆರ್ ಬೇರಿ, ಅಂಬಣ್ಣ ಆರೋಲಿಕರ್, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ರಾಜ್ಯ ಸಂಚಾಕರಾದ ಚಂದ್ರಮ್ಮ ಸೇರಿದಂತೆ ಅನೇಕ ಭಾಗವಹಿಸುವರು ಎಂದು ತಿಳಿಸಿದರು. ವೇದಿಕೆ ಜಿಲ್ಲಾಧ್ಯಕ್ಷ ಜನಾರ್ದನ ಹಳ್ಳಿಬೆಂಚಿ, ಸದಸ್ಯರಾದ ನೂರ್ ಜಾನ್, ವೆಂಕಟೇಶ ಭಂಡಾರಿ, ಶೈನಾಜ ಬೇಗಂ ಸೇರಿ ಇತರರು
ಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.