ಟ್ರ್ಯಾಕ್ಟರ್‌ ಪರೇಡ್‌ಗೆ ಹೊರಟ ರೈತರು


Team Udayavani, Jan 21, 2021, 8:09 PM IST

Farmers out for the Tractor Parade

ಮೈಸೂರು: ದೆಹಲಿಯಲ್ಲಿ ಜ.26ರಂದು ನಡೆಯುವ ಪ್ರತಿಭಟನಾಕಾರರ ಟ್ರ್ಯಾಕ್ಟರ್‌ ಪರೇಡ್‌ನ‌ಲ್ಲಿ ಭಾಗವಹಿಸಲು ಮೈಸೂರಿನಿಂದ ಹೊರಟ ರೈತರಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಐಕ್ಯ ಹೋರಾಟ ಸಮಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ನಗರದ ಗನ್‌ಹೌಸ್‌ ಬಳಿ ಇರುವ ಕುವೆಂಪು ವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಹಾಸನದ ರೈತ ಮುಖಂಡ ಅರಳಾಪುರ ಮಂಜೇಗೌಡ ನೇತೃತ್ವದಲ್ಲಿ ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಭಾಗದಿಂದ ಹೊರಟ ರೈತರಿಗೆ ಬೀಳ್ಕೊಡುಗೆ ನೀಡಲಾಯಿತು. ಮೈಸೂರಿನಿಂದ ಹೊರಟ ರೈತರು ಚಾಮರಾಜನಗರದ ಅಮೃತಭೂಮಿಯಲ್ಲಿರುವ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಸಮಾಧಿಗೆ ನಮಸ್ಕರಿಸಿ ದೆಹಲಿ ಕಡೆಗೆ ತೆರಳಿದರು. ರೈತರಿಗೆ ಊಟೋಪಚಾರದ ವ್ಯವಸ್ಥೆ ಮಾಡಿ, ಆತ್ಮಸ್ಥೆçರ್ಯ ತುಂಬಿ, ದಿನಸಿ, ಅವಶ್ಯಕ ವಸ್ತುಗಳನ್ನು ನೀಡಿ ಕಳುಹಿಸಿಕೊಡಲಾಯಿತು.

ಈ ವೇಳೆ ರೈತ ಮುಖಂಡ ಅರಳಾಪುರ ಮಂಜೇಗೌಡ ಮಾತನಾಡಿ, ಕೊರೆಯುವ ಚಳಿಯಲ್ಲೂ ಎರಡು ತಿಂಗಳಿಂದ ಪಂಜಾಬ್‌ ಮತ್ತು ಹರಿಯಾಣ ರೈತರು ಧರಣಿ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಸೂಕ್ತ ಸ್ಪಂದನೆ ದೊರೆಯದ ಕಾರಣ ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿದ್ದಾರೆ. ಈ ಹೋರಾಟದಲ್ಲಿ ಕರ್ನಾಟಕದಿಂದ ನೂರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳುತ್ತಿದ್ದಾರೆ. ಬುಧವಾರ ಚನ್ನರಾಯಪಟ್ಟಣಕ್ಕೆ ತೆರಳಿ, ಅಲ್ಲಿರುವ ರೈತರ ಜೊತೆಗೂಡಿ ಗುರುವಾರ ದೆಹಲಿಗೆ ಪ್ರಯಾಣ ಆರಂಭಿಸಲಾಗುವುದು ಎಂದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ಜನವರಿ ಬಳಿಕ ಚಳಿ ಕಡಿಮೆಯಾಗಲಿದ್ದು, ಆಗ ರಾಜ್ಯದಿಂದಲೂ ಇನ್ನಷ್ಟು ರೈತರು ದೆಹಲಿಗೆ ತೆರಳಿದ್ದಾರೆ. ಈಗಾಗಲೇ ತಮಿಳುನಾಡು ಮತ್ತು ಕೇರಳದಿಂದ ರೈತರು ಹೊರಡುತ್ತಿದ್ದಾರೆ. ಅದೇ ರೀತಿ ಫೆಬ್ರವರಿಯಲ್ಲಿ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ರೈತ ಮುಖಂಡ ಪ್ರಸನ್ನ ಗೌಡ, ಅತ್ತಹಳ್ಳಿ ದೇವರಾಜು, ಪಿ.ಮರಂಕಯ್ಯ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ:ಆಲೂಗಡ್ಡೆ ಅಂಗಾಂಶ ಕೃಷಿ ಕ್ಷೇತ್ರೋತ್ಸವ

ನಾಲ್ಕು ಟೆಂಪೋದಲ್ಲಿ 100 ಮಂದಿ ಪಯಣ

100 ಮಂದಿ ರೈತರು ನಾಲ್ಕು ಟೆಂಪೋಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದೇವೆ. ಟೆಂಪೋದಲ್ಲಿ ಮಲಗಲು ಹಾಸಿಗೆ, ಸೇರಿದಂತೆ ಅವಶ್ಯ ವಸ್ತುಗಳನ್ನು

ಶೇಖರಿಸಿಕೊಂಡಿದ್ದೇವೆ. ಐದು ದಿನಗಳ ಕಾಲ ಪ್ರಯಾಣಿಸಿ ಜ.25ಕ್ಕೆ ದೆಹಲಿ ತಲುಪಲಿದ್ದೇವೆ. ಇವೆರಡು ಟೆಂಪೋದೊಂದಿಗೆ ಮೂರು ಕಾರು ಸಹ ದೆಹಲಿಗೆ ತೆರಳಲಿದೆ. 2ನೇ ಹಂತದಲ್ಲಿ ರಾಜ್ಯದ ವಿವಿಧ ಭಾಗದ 300 ರೈತರು ಜ.23ಕ್ಕೆ ಹೊರಟು ರೈಲಿನ ಮೂಲಕ ದೆಹಲಿಗೆ ಆಗಮಿಸಲಿದ್ದಾರೆ. ಗಣರಾಜ್ಯೋತ್ಸವ ಪರೇಡ್‌ ಬೆಂಬಲಿಸಿ ಬೆಂಗಳೂರಿನಲ್ಲಿ ನಡೆಯಲಿರುವ ರ್ಯಾಲಿ ಪ್ರಯುಕ್ತ ಐಕ್ಯ ಹೋರಾಟದಿಂದ ಬೈಕ್‌ ರ್ಯಾಲಿ ಪರೇಡ್‌ ನಡೆಸಲಾಗುವುದು ಎಂದು ರೈತ ಮುಖಂಡ ಅರಳಾಪುರ ಮಂಜೇಗೌಡ ತಿಳಿಸಿದರು.

ಅಗತ್ಯ ವಸ್ತುಗಳ ವಿತರಣೆ

ಬೀಳ್ಕೊಡುಗೆ ವೇಳೆ ರೈತರಿಗೆ 50 ಲೀಟರ್‌ ಡೀಸೆಲ್‌, 50 ಕೆ.ಜಿ. ಅಕ್ಕಿ, ತೆಂಗಿನಕಾಯಿ ಮತ್ತು ತರಕಾರಿ 25 ಕೆ.ಜಿ.ಗೂ ಅಧಿಕ, 5 ಸಾವಿರ ರೂ. ನಗದು ಹಾಗೂ ಅಕ್ಷರ ದಾಸೋಹ ಸಂಸ್ಥೆಯ ರಾಜೇಂದ್ರ ಅವರಿಂದ ನೂರು ಮಂದಿಗೆ ಆಗುವಷ್ಟು ಸೋಪು, ಬ್ರಶ್‌ ಇತ್ಯಾದಿ ವಸ್ತುಗಳನ್ನು ನೀಡಲಾಯಿತು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.