ಚೀನ ಗ್ರಾಮ ನಿರ್ಮಾಣದ ವಿರುದ್ಧ ಪ್ರತಿಭಟನೆ
Team Udayavani, Jan 22, 2021, 12:57 AM IST
ಬೀಜಿಂಗ್/ಇಟಾನಗರ: ಅರುಣಾಚಲ ಪ್ರದೇಶಕ್ಕೆ ಹೊಂದಿ ಕೊಂಡು ಇರುವ ಪ್ರದೇಶದಲ್ಲಿ ಚೀನ ಗ್ರಾಮ ನಿರ್ಮಿಸಿದ್ದನ್ನು ಖಂಡಿಸಿ ಸುಧಾನ್ಸಿರಿ ಜಿಲ್ಲೆಯಲ್ಲಿ ಸ್ಥಳೀಯರು ಭಾರೀ ಪ್ರತಿಭಟನೆ ನಡೆಸಿದ್ದಾರೆ.
ಚೀನ ಅಧ್ಯಕ್ಷ ಕ್ಸಿ ಜಿನ್ ಪಿಂಗ್, ಅಲ್ಲಿನ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದ್ದಾರೆ. ಭಾರತ ಪರ ಘೋಷಣೆಗಳನ್ನು ಕೂಗಿದ್ದಾರೆ. ಜತೆಗೆ ಚೀನ ಭಾರತದ ನೆಲದಲ್ಲಿ ನಡೆಸುತ್ತಿರುವ ನಿರ್ಮಾಣ ಚಟುವಟಿಕೆಗಳನ್ನು ಉಗ್ರ ವಾಗಿ ಖಂಡಿಸಿದರಲ್ಲದೆ ಚೀನ ಅಧ್ಯಕ್ಷರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಲ್ ತಾಗಿನ್ ಯೂತ್ ಆರ್ಗನೈಸೇಶನ್, ಆಲ್ ಗಿಬಾ ಸರ್ಕಲ್ ವಿಜಿಲೆನ್ಸ್ ಫೋರಂ, ನ್ಯೂ ಮಾರ್ಕೆಟ್ ವೆಲ್ಫೆàರ್ ಅಸೋಸಿ ಯೇಶನ್ ಸೇರಿದಂತೆ ಹಲವಾರು ಸಂಘಟನೆಗಳ ಸದಸ್ಯರು ಮತ್ತು ಸ್ಥಳೀಯರು “ಭಾರತ್ ಮಾತಾ ಕಿ ಜೈ’, “ವಿ ಆರ್ ಇಂಡಿಯನ್ಸ್’, “ಚೀನ ಗೋ ಬ್ಯಾಕ್’ ಎಂಬ ಘೋಷಣೆಗಳನ್ನು ಕೂಗಿದರು. ಕೇಂದ್ರ ಸರಕಾರ ಚೀನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ನಮ್ಮ ಪ್ರದೇಶ: ಹೊಸ ಗ್ರಾಮದ ನಿರ್ಮಾಣದ ಬಗ್ಗೆ ಚೀನ ಸರಕಾರ ಸ್ಪಷ್ಟನೆ ನೀಡಿದ್ದು, “ನಮ್ಮ ವ್ಯಾಪ್ತಿಯ ಪ್ರದೇಶದಲ್ಲಿಯೇ ಗ್ರಾಮ ನಿರ್ಮಾಣ ಮಾಡಿದ್ದೇವೆ. ಇದರಲ್ಲಿ ಯಾವುದೇ ಸಂಶಯ ಬೇಡ’ ಎಂದು ಪ್ರತಿಕ್ರಿಯೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.