ಪ್ರಮಾಣ ಪತ್ರ ವಿತರಿಸಲು ವಸೂಲಿ ಮಾಡಿದರೆ ಕ್ರಮ
Team Udayavani, Jan 22, 2021, 12:26 PM IST
ಕೊಳ್ಳೇಗಾಲ: ಸಾರ್ವಜನಿಕರಿಗೆ ಪ್ರಮಾಣ ಪತ್ರ ನೀಡಲು ನಿಗದಿಗಿಂತ ಹೆಚ್ಚು ಹಣ ಪಡೆದರೆ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವದು ಎಂದು ಶಾಸಕ ಎನ್.ಮಹೇಶ್ ಎಚ್ಚರಿಕೆ ನೀಡಿದರು.
ನಗರಸಭೆ ಅಧ್ಯಕ್ಷೆ ಗಂಗಮ್ಮ ಅಧ್ಯಕ್ಷತೆಯಲ್ಲಿ 2 ವರ್ಷಗಳ ಬಳಿಕ ಇದೇ ಮೊಟ್ಟ ಮೊದಲ ನಗರಸ ಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯರ ದೂರುಗಳಿಗೆ ಪ್ರತಿಕ್ರಿಯಿಸಿದ ಶಾಸಕರು, ಜನನ ಮತ್ತು ಮರಣ ಪ್ರಮಾಣ ಪತ್ರ ನೀಡಲು ಸರ್ಕಾರ ನಿಗದಿಗೊಳಿಸಿರುವ ದರ ಪಡೆಯಬೇಕು. ಹೆಚ್ಚು ಹಣ ವಸೂಲಿ ಮಾಡಿದರೆ ಅಂತಹ ಸಿಬ್ಬಂದಿ ಮೇಲೆ ಕಾನೂನು ಕ್ರಮ ಅನಿವಾರ್ಯ ಎಂದರು.
ನಗರಸಭೆ ಸಿಬ್ಬಂದಿಗಳು ಸದಸ್ಯರಿಗೆ ಗೌರವ ನೀಡದೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಸಮರ್ಪಕ ಮಾಹಿತಿ ನೀಡುವುದಿಲ್ಲ ಎಂದು ಸದಸ್ಯರು ದೂರಿದರು. ಚುನಾಯಿತ ಸದಸ್ಯರಿಗೆ ಗೌರವ ನೀಡಬೆಕು. ಈ ಬಗ್ಗೆ ನಗರಸಭೆ ಪೌರಾಯುಕ್ತರು ಸಿಬ್ಬಂದಿಗಳ ಸಭೆಯಲ್ಲಿ ಸೂಚಿಸಬೇಕು ಎಂದು ಶಾಸಕರು ತಾಕೀತು ಮಾಡಿದರು.
ಪಟ್ಟಣದಲ್ಲಿ ಪರವಾನಗಿ ಪಡೆಯದೆ ಅನಧಿಕೃತ ಫ್ಲೆಕ್ಸ್‌ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸದಸ್ಯರು ಮನವಿಗೆ ಸ್ಪಂದಿಸಿದರು. ಖಾಸಗಿಯವರಿಗೆ ಸೇರಿದ ಸೈಟ್‌ಗಳಲ್ಲಿ ಗಿಡಗಂಟಿಗಳು ಬೆಳೆದು ಅಶುಚಿತ್ವ ಉಂಟಾಗಿದೆ. ಈ ಬಗ್ಗೆ ಮಾಲೀಕರಿಗೆ ನೋಟಿಸ್ ನೀಡಲಾಗುವುದು. ಇದಕ್ಕೆ ಮನ್ನಣೆ ನೀಡದಿದ್ದರೆ ಆ ನಿವೇಶನಗಳನ್ನು ನಗರಸಭೆಯ ಆಸ್ತಿ ಎಂದು ನಾಮಫಲಕ ಅಳವಡಿಸಲಾಗುವುದು ಎಂದರು.
ಇದನ್ನೂ ಓದಿ:ವಯಸ್ಸಿನ ಅವಾಂತರ ಸಂಚಾರಿ ಅವಸ್ಥಾಂತರ
ಹಣ ದುರುಪಯೋಗ: ಪಟ್ಟಣದಲ್ಲಿ ಶುದ್ಧ ನೀರಿನ ಘಟಕಗಳಿಂದ ಸಾಕಷ್ಟು ಹಣ ಬರುತ್ತಿದ್ದರೂ ಘಟಕ ಗಳನ್ನು ಸರಿಯಾಗಿ ನಿರ್ವ ಹಿಸುತ್ತಿಲ್ಲ. ಈ ಹಣ ದುರುಪ ಯೋಗವಾಗುತ್ತಿದೆ ಎಂಬ ಸದಸ್ಯರ ದೂರಿಗೆ ಉತ್ತರಿಸಿದ ಶಾಸಕರು, ಕೂಡ ಲೇ ಘಟಕಗಳ ನಿರ್ವಹಣೆಗೆ ಟೆಂಡರ್ ಕರೆಯ ಲಾಗುವುದು ಎಂದರು.ಪಟ್ಟಣದಲ್ಲಿ ಸರ್ಕಟನ್ ನಾಲೆ ಕುಡಿಯುವ ನೀರಿನ ಯೋ ಜನೆ, ಬಸ್ ನಿಲ್ದಾಣ, ರಸ್ತೆ ಕಾಮಗಾರಿಗಳ ಪ್ರಗತಿಯ ಬಗ್ಗೆ ಮತ್ತೂಂದು ಸಭೆಯಲ್ಲಿ ಪ್ರತ್ಯೇಕ ಚರ್ಚಿಸ ಲಾಗುವುದು ಎಂದು ಶಾಸಕರು ತಿಳಿಸಿದರು.
ಪ್ರಮಾಣ ವಚನ: ನಗರಸಭೆಯ ಚೊಚ್ಚಲಸಾಮಾನ್ಯಸಭೆಯಲ್ಲಿ 31 ಸದಸ್ಯರಿಗೆ ಪೌರಾ ಯುಕ್ತ ವಿಜಯ್ ಪ್ರಮಾಣ ವಚನ ಬೋಧಿ ಸಿದರು. ಸಭೆಯಲ್ಲಿ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ಕವಿತಾ, ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.