ಸಿದ್ಧ ಗಂಗಾ ಶ್ರೀಗಳ ತತ್ವಾದರ್ಶ ಮಾದರಿ

ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ  ಸೋಮಶೇಖರ್‌ ಅಭಿಮತ

Team Udayavani, Jan 22, 2021, 6:13 PM IST

Siddaganga Smarana

ಚಿಕ್ಕಮಗಳೂರು: ಅನ್ನ ದಾಸೋಹ ಮತ್ತು ಜ್ಞಾನ ದಾಸೋಹದ ಮೂಲಕ ತಮ್ಮನ್ನು ಬಸವತತ್ವ ಸಿದ್ಧಾಂತದಲ್ಲಿ ತೊಡಗಿಸಿಕೊಂಡ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ತತ್ವ, ಆದರ್ಶ, ಚಿಂತನೆ ನಮ್ಮೆಲ್ಲರಿಗೂ ಮಾದರಿ ಎಂದು ಜಿಪಂ ಉಪಾಧ್ಯಕ್ಷ ಬಿ.ಜಿ. ಸೋಮಶೇಖರ್‌ ಹೇಳಿದರು.

ಗುರುವಾರ ನಗರದ ಎ.ಐಟಿ ವೃತ್ತದ ತರಳುಬಾಳು ಭವನದ ಆವರಣದಲ್ಲಿ ಆಯೋಜಿಸಿದ್ದ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರ 2ನೇವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಾಡಿನಲ್ಲಿ ಲಕ್ಷಾಂತರ ಜನರಿಗೆ ಮಠದಲ್ಲಿ ನಿರಂತರವಾಗಿಅನ್ನದಾಸೋಹ, ಜ್ಞಾನ ದಾಸೋಹದ ಮೂಲಕ ನಾಡಿನ ಸಮೃದ್ಧಿಗಾಗಿ ಶ್ರಮಿಸಿದ ಶ್ರೀ ಶಿವಕುಮಾರ ಸ್ವಾಮೀಜಿಗಳ ಬದುಕು ನಮ್ಮೆಲ್ಲರಿಗೂಆದರ್ಶ. ಬಸವಣ್ಣನವರ ತತ್ವ, ಚಿಂತನೆಗಳನ್ನು ಪರಿಪಾಲಿಸುವ ಮೂಲಕ ಜಾತಿ, ಧರ್ಮ, ಬೇಧವಿಲ್ಲದೇ ಎಲ್ಲಾ ವರ್ಗದ ಮಕ್ಕಳಿಗೂ ಉಚಿತವಾಗಿ ಶಿಕ್ಷಣ ನೀಡುವ ಮೂಲಕ ನಾಡಿಗೆ ಮಾದರಿಯಾದವರು ಎಂದರು.

ಇದನ್ನೂ ಓದಿ : ಬಿಎಸ್‌ವೈ ಕೊಟ್ಟ ಮಾತು ಹುಸಿಯಾಗದಿರಲಿ

ನಿರಂತವಾಗಿ ಸಮಾಜ ಸೇವೆಯ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿರುವ ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಕೇಂದ್ರ ಸರ್ಕಾರವು ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು.

ಜೆಡಿಎಸ್‌ ರಾಜ್ಯ ಘಟಕದ ಉಪಾಧ್ಯಕ್ಷ ಎಚ್‌.ಎಚ್‌. ದೇವರಾಜ್‌ಮಾತನಾಡಿ, ಮಾನವೀಯತೆ ನೆಲೆಗಟ್ಟಿನಲ್ಲಿ ಶ್ರೀಮಠದಲ್ಲಿ ಎಲ್ಲಾ ವರ್ಗದವರನ್ನು ಸಮಾನತೆಯಿಂದ ಕಂಡ ಅಪರೂಪದ ಸ್ವಾಮೀಜಿಗಳಲ್ಲಿ ಸಿದ್ಧಗಂಗಾ ಶ್ರೀಗಳು ಕೂಡ ಒಬ್ಬರು ಎಂದರು.

ನಗರಸಭೆ ಮಾಜಿ ಅಧ್ಯಕ್ಷ ಎಚ್‌.ಡಿ. ತಮ್ಮಯ್ಯ ಮಾತನಾಡಿ, 12ನೇ ಶತಮಾನದ ಬಸವಣ್ಣನವರ ವಚನಗಳ ರೂಪವನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದ ಶ್ರೀಗಳು ಸದಾಕಾಲ ಅಜರಾಮರ ಎಂದ ಅವರು, ನಗರದ ಹಿರೇಮಗಳೂರಿನಿಂದ ಎ.ಐ.ಟಿ ವೃತ್ತದವರೆಗೆ ರೂ.28ಕೋಟಿ ವೆಚ್ಚದಲ್ಲಿ ನಾಲ್ಕುಪಥದ ರಸ್ತೆ ನಿರ್ಮಾಣವಾಗಲಿದ್ದು ಮುಂದಿನ ದಿನಗಳಲ್ಲಿ ಆ ರಸ್ತೆಗೆ ಸಿದ್ಧªಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಹೆಸರಿಸಡಲು ನಿರ್ಧರಿಸಲಾಗಿದ್ದು ಈ ಬಗ್ಗೆ ನಗರಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.

ಬೀಕನಹಳ್ಳಿ ಗ್ರಾಪಂ ಸದಸ್ಯ ಮಂಜೇಗೌಡ ಮಾತನಾಡಿ, ರಾಜ್ಯದ ಸಮೃದ್ಧಿಗಾಗಿ ನಿರಂತರ ಧ್ಯಾನ, ಆಧ್ಯಾತ್ಮದ ಮೂಲಕ ಪ್ರಾರ್ಥಿಸಿದ ಶ್ರೀಗಳು ಸದಾ ಕಾಲ ನಮ್ಮೆಲ್ಲರ ಮನದಲ್ಲಿ ನೆಲೆಸಿದ್ದಾರೆ ಎಂದರು. ಸಾಹಿತಿ ಹಾಗೂ ಉಪನ್ಯಾಸಕ ತಿಪ್ಪೇರುದ್ರಪ್ಪ ಮಾತನಾಡಿದರು. ತಾಪಂ ಮಾಜಿ ಅಧ್ಯಕ್ಷ ಬಸವರಾಜ್‌, ರಾಜಶೇಖರ್‌, ಡಾ| ಮುರಳೀಧರ್‌, ಮಂಜುನಾಥ್‌, ಚಂದ್ರಪ, ರಾಜಣ್ಣಇದ್ದರು. ಭಾರತಿ ಶಿವರುದ್ರಪ್ಪ ಸ್ವಾಗತಿಸಿದರು. ಭರತ್‌ ನಿರೂಪಿಸಿದರು.

ಇದನ್ನೂ ಓದಿ : ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಡಾ.ಕೆ.ಸುಧಾಕರ್

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.