ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳ ಸಮೀಕ್ಷೆ ಸರ್ವರ್ ಸಮಸ್ಯೆ: ಅರ್ಜಿ ಭರ್ತಿಗೆ ಒಂದು ಗಂಟೆ!
Team Udayavani, Jan 2, 2021, 6:40 AM IST
ಉಡುಪಿ: ರಾಜ್ಯ ಸರಕಾರ ಶಾಲೆಯಿಂದ ಹೊರ ಉಳಿದ ವಿದ್ಯಾರ್ಥಿಗಳ ಸಮೀಕ್ಷೆಯನ್ನು ಆರಂಭಿಸಿದ್ದು, ಅವಿಭಜಿತ ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ ಇತರ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸರ್ವೇ ಪ್ರಗತಿ ಕಾಣದೆ ಇರುವುದು ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ಮುನ್ನ ಮನೆ ಬಾಗಿಲಿಗೆ ತೆರಳಿ ಸಮೀಕ್ಷೆ ನಡೆಸ ಬೇಕೆಂದು ರಾಜ್ಯ ಹೈಕೋರ್ಟ್ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 2020ರಲ್ಲಿ ಸರ್ವೇಗೆ ಚಾಲನೆ ನೀಡಿದ್ದರು. ಈ ನಡುವೆ ಕೋವಿಡ್ ಹಿನ್ನೆಲೆ ಸಮೀಕ್ಷೆ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಸಮೀಕ್ಷೆ ಆರಂಭಿಸಲು ಜಿಲ್ಲಾಡಳಿತಕ್ಕೆ ಸರಕಾರದ ಸುತ್ತೋಲೆ ಬಂದಿದೆ.
ಸರ್ವೇಗೆ ನಕಾರ :
ಪ್ರಸ್ತುತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಶಿಕ್ಷಕರನ್ನು ಬಿದಿಗಿಟ್ಟು ಸರಕಾರ ಅಂಗನವಾಡಿ, ಆಶಾ ಕಾರ್ಯ ಕರ್ತರು ಹಾಗೂ ವಿವಿಧ ಸಂಘಗಳ ಮೂಲಕ ಸರ್ವೇ ಮಾಡಲು ಆದೇಶಿಸಿದೆ. ಆದರೆ ಅಂಗನವಾಡಿ ಕಾರ್ಯಕರ್ತರು ವಿವಿಧ ಕಾರಣ ನೀಡಿ ಸಮೀಕ್ಷೆ ನಡೆಸಲು ನಿರಾಕರಿಸುತ್ತಿದ್ದಾರೆ.
ಉಡುಪಿಯಲ್ಲಿ ಕಾರ್ಯಕರ್ತೆಯರು ಸಮೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಕೆಲ ಜಿಲ್ಲೆಯಲ್ಲಿ ಸರ್ವೇಗೆ ಆಸ್ತಕಿಯಿದ್ದರೂ, ಆ್ಯಪ್‌ನ ತಾಂತ್ರಿಕ ಮಾಹಿತಿ ಕೊರತೆಯಿಂದ ಸರ್ವೇಗೆ ಹಿಂದೇಟು ಹಾಕುತ್ತಿದ್ದಾರೆ.
ಸ್ಥಳೀಯಾಡಳಿತಕ್ಕೆ ಒತ್ತಡ! :
ಸರಕಾರ ಸಮೀಕ್ಷೆಯನ್ನು ಹೇಗಾ ದರೂ ಮಾಡಿ ಪೂರ್ಣಗೊಳಿಸಲು ಸ್ಥಳೀಯಾಡಳಿತಕ್ಕೆ ಜವಾಬ್ದಾರಿ ನೀಡಿದೆ. ಪೌರಾಡಳಿತ ಇಲಾಖೆ ತನ್ನ ವ್ಯಾಪ್ತಿ ಯಲ್ಲಿ ಬರುವ ನಗರಾಡಳಿತ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸಿಬಂದಿಗಳನ್ನು ಬಳಸಿಕೊಂಡು ಸರ್ವೇ ನಡೆಸಲು ಮುಂದಾಗಿದೆ. ಪ್ರಸ್ತುತ ಸಿಬಂದಿ ಕೊರತೆಯಿಂದ ನಲುಗು ತ್ತಿರುವ ನಗರಾಡಳಿತಕ್ಕೆ ಈ ಆದೇಶದ ನುಂಗಲಾರದ ತುತ್ತಾಗಿದೆ. ಗ್ರಾ.ಪಂ.ಗಳಲ್ಲಿ ಪಿಡಿಒಗಳಿಗೆ ಸರ್ವೇ ಜವಾಬ್ದಾರಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತರು ಸಹಕಾರ ನೀಡದ ಹಿನ್ನೆಲೆಯಲ್ಲಿ ಕೆಲ ಗ್ರಾ.ಪಂ.ಗಳಲ್ಲಿ ಸಮೀಕ್ಷೆ ಕಾರ್ಯ ಪ್ರಾರಂಭವಾಗಿಲ್ಲ.
ಅರ್ಜಿ ಭರ್ತಿಗೆ 45 ನಿಮಿಷ :
ಒಂದು ಅರ್ಜಿಯನ್ನು ಭರ್ತಿ ಮಾಡಲು ಕನಿಷ್ಠವೆಂದರೂ 45 ನಿಮಿಷ ತೆಗೆದುಕೊಳ್ಳುತ್ತದೆ. ನಗರಸಭೆ ವ್ಯಾಪ್ತಿಯಲ್ಲಿ ಸುಮಾರು 55 ಸಾವಿರ ಮನೆಗಳಿವೆ. ಪ್ರತಿಯೊಂದು ಮನೆಗೆ ತೆರಳಿ ಸರ್ವೇ ಮುಗಿಸುವ ವೇಳೆಗೆ ವರ್ಷ ಕಳೆಯಲಿದೆ ಎಂದು ಸಿಬಂದಿಯೊಬ್ಬರು ಉದಯವಾಣಿಗೆ ಮಾಹಿತಿ ನೀಡಿದರು.
ಜಿಪಿಎಸ್ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆ! :
ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಆ್ಯಪ್‌ನ್ನು ಅಭಿವೃದ್ಧಿಪಡಿಸಿದೆ. ಇದರಲ್ಲಿ ಪ್ರತಿಯೊಂದು ಮನೆಯ 0-18 ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಜಿಪಿಎಸ್ ಮೂಲಕ ಆಪ್‌ಲೋಡ್ ಮಾಡಬೇಕು. ಏಕಕಾಲ ರಾಜ್ಯಾದ್ಯಂತ ಈ ಆ್ಯಪ್ ಕಾರ್ಯಾಚರಿಸುತ್ತಿರುವುದರಿಂದ ಜಿಪಿಎಸ್ ಕಡಿತ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ. ಇದರಿಂದಾಗಿ ಒಂದು ಅರ್ಜಿ ಭರ್ತಿ ಮಾಡಲು 1 ಗಂಟೆ ಹಿಡಿಯುತ್ತಿದೆ. ಈ ತಾಂತ್ರಿಕ ಸಮಸ್ಯೆಯಿಂದ ಕೇವಲ 8 ಅರ್ಜಿಗಳನ್ನು ಭರ್ತಿ ಮಾಡಲು ಸಾಧ್ಯ ಎಂದು ಸಿಬಂದಿ ಕಳವಳ ವ್ಯಕ್ತಪಡಿಸಿದ್ದಾರೆ.
ಉಡುಪಿ ನಗರಾಡಳಿತ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುವ ಸಿಬಂದಿಗಳನ್ನು 60 ವಾರ್ಡ್‌ಗಳಿಗೆ ನೇಮಕ ಮಾಡಲಾಗಿದೆ. ಅವರಿಗೆ ತರಬೇತಿ ನೀಡಲಾಗಿದ್ದು ಸರ್ವೆ ಕೆಲಸ ಆರಂಭವಾಗಿದೆ. –ಸಂತೋಷ್, ಉಪ ಆಯುಕ್ತರು,ಜಿಲ್ಲಾ ನಗರಾಭಿವೃದ್ಧಿ ಕೋಶ, ಉಡುಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.