ಜೆಲ್‌ ಮಾದರಿ ಸ್ಫೋಟಕ ಬಳಕೆ?

ಐವರು ಸ್ಥಳೀಯರ ಸಾವು ಖಚಿತ ಉನ್ನತ ಮಟ್ಟದ ತನಿಖೆಗೆ ಆದೇಶ

Team Udayavani, Jan 23, 2021, 6:50 AM IST

ಜೆಲ್‌ ಮಾದರಿ ಸ್ಫೋಟಕ ಬಳಕೆ?

ಶಿವಮೊಗ್ಗ/ಬೆಂಗಳೂರು: ದೇಶಾದ್ಯಂತ ಭಾರೀ ಆತಂಕಕ್ಕೆ ಕಾರಣವಾಗಿರುವ ಶಿವಮೊಗ್ಗದ ಭೀಕರ ಸ್ಫೋಟ ಪ್ರಕರಣ ನಾನಾ ಸಂದೇಹಗಳನ್ನು ಹುಟ್ಟುಹಾಕಿದ್ದು, ರಾಜ್ಯ ಸರ ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಸ್ಫೋಟದಲ್ಲಿ ಸುಧಾರಿತ ಜೆಲ್‌ ಮಾದರಿಯ ಬೂಸ್ಟರ್‌ ಬಳಕೆಯಾಗಿರುವ ಸಂದೇಹ ಇದೆ.

ಶಿವಮೊಗ್ಗ  ಬಳಿಯ ಹುಣಸೋಡು ಬಳಿಕಲ್ಲುಕೋರೆಯಲ್ಲಿ ನಿಲ್ಲಿಸಿದ್ದ ಸ್ಫೋಟಕ ತುಂಬಿದ ಬೊಲೆರೋ ಸ್ಫೋಟಗೊಂಡಿರುವುದು ಖಚಿತವಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಮೃತರನ್ನು ಭದ್ರಾವತಿಯ ಪ್ರವೀಣ್‌, ಮಂಜುನಾಥ್‌, ಪವನ್‌, ಜಾವಿದ್‌ ಎಂದು ಅಂದಾಜಿಸಲಾಗಿದೆ. ಘಟನೆ ವೇಳೆ 8 ಮಂದಿ ಇದ್ದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ.

ರಾಜಕೀಯ ನಂಟು? :

ಸ್ಫೋಟ ನಡೆದ ಕಲ್ಲುಕೋರೆಯ ಮಾಲ ಕರು ರಾಜಕೀಯವಾಗಿ ಗುರುತಿಸಿಕೊಂಡಿ ದ್ದಾರೆ. ಸಮೀಪದಲ್ಲಿ ರಾಜಕೀಯ ವ್ಯಕ್ತಿಗಳ ಬೇನಾಮಿ ಕೋರೆಗಳಿವೆ ಎನ್ನಲಾಗಿದೆ. ಹೀಗಾಗಿ ಪ್ರಕರಣ ರಾಜಕೀಯ ಸ್ವರೂಪ ಪಡೆದಿದೆ. ಪೊಲೀಸರಿಗೆ ಅಕ್ರಮದ ಮಾಹಿತಿ ಇತ್ತಾದರೂ ರಾಜಕೀಯ ಒತ್ತಡದಿಂದ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪವಿದೆ.

ಹಲವು ಅನುಮಾನಗಳು :

ಸ್ಫೋಟ ಪ್ರಕರಣ ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸ್ಫೋಟದ ಸ್ಥಳದಿಂದ 100 ಕಿ.ಮೀ. ದೂರದವರೆಗೂ ಕಂಪನ ದಾಖಲಾಗಿದ್ದು, ಜಿಲೆಟಿನ್‌ಗಿಂತಲೂ ಸುಧಾರಿತವಾದ, ಹೆಚ್ಚು ಶಕ್ತಿಯುಂಟು ಮಾಡುವ ಜೆಲ್‌ ಮಾದರಿಯ ಬೂಸ್ಟರ್‌ಗಳನ್ನು ಬಳಸಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಈವರೆಗೆ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಜಿಲೆಟಿನ್‌, ಡಿಟೋನೇಟರ್‌ಗಳಿಗಿಂತಲೂ ಸುಧಾರಿತ ಬೂಸ್ಟರ್‌ಗಳು ಹೆಚ್ಚು ಪರಿಣಾಮಕಾರಿ ಹಾಗೂ ಶಕ್ತಿಶಾಲಿಯಾಗಿದ್ದು ಕಡಿಮೆ ಶಕ್ತಿಯಿಂದಲೂ ಹೊತ್ತಿಕೊಳ್ಳುವ ಸಾಮರ್ಥ್ಯ ಹೊಂದಿವೆ. ಇದೇ ಈ ಭಾರೀ ಸ್ಫೋಟಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

5 ಲಕ್ಷ ರೂ. ಪರಿಹಾರ :

ಅನಾಹುತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಉನ್ನತ ಮಟ್ಟದ ತನಿಖೆಗೂ ಆದೇಶಿಸಲಾಗಿದೆ. ಸಿಎಂ ಯಡಿಯೂರಪ್ಪ ಅಧಿಕಾರಿ ಗಳೊಂದಿಗೆ ಸಂಪರ್ಕದಲ್ಲಿದ್ದು, ರಕ್ಷಣ ಕಾರ್ಯಾಚರಣೆಗೆ ಸೂಚಿಸಿದ್ದಾರೆ.

ಮೂವರು ವಶಕ್ಕೆ :

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಇಲಾಖೆ, ಕಲ್ಲು ಕೋರೆ ಮಾಲಕ ಸುಧಾಕರ್‌ ಸಹಿತ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ.

ಸ್ಫೋಟಗೊಂಡದ್ದು ಹೇಗೆ? :

ಈ ಭಾಗದ ಕೋರೆಗಳಲ್ಲಿ ಸ್ಫೋಟಕ್ಕಾಗಿ ಜಿಲೆಟಿನ್‌ ಕಡ್ಡಿಗಳನ್ನು ಪೂರೈಸಲು ತಮಿಳುನಾಡಿನಿಂದ ಈ ಜೀಪ್‌ ಬಂದಿತ್ತು. ಇದರಲ್ಲಿ 50ಕ್ಕೂ ಹೆಚ್ಚು ಬಾಕ್ಸ್‌ಗಳಷ್ಟು ಜಿಲೆಟಿನ್‌ ಕಡ್ಡಿಗಳಿದ್ದವು ಎನ್ನಲಾಗಿದೆ. ರಾತ್ರಿ ಕೋರೆಗಳಿಗೆ ಅಗತ್ಯವಿರುವ ಸ್ಫೋಟಕ ಒಯ್ಯಬೇಕಿತ್ತು. ಅದರ ನಡುವೆ ಸ್ಫೋಟ ಸಂಭವಿಸಿದೆ.

ಅಮೋನಿಯಂ ನೈಟ್ರೇಟ್‌? :

ಜೀಪಿನಲ್ಲಿ ಅಮೋನಿಯಂ ನೈಟ್ರೇಟ್‌ ಮತ್ತು ಇತರ ಸ್ಫೋಟಕ ವಸ್ತುಗಳೂ ಇದ್ದವು ಎಂದೂ ಹೇಳಲಾಗಿದೆ.

ಮೋದಿ, ರಾಹುಲ್‌ ಸಂತಾಪ :

ಸ್ಫೋಟದಿಂದ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.