ಶಿರಹಟ್ಟಿ ಗ್ರಾಮ ದೇವತೆ ಆದಿಶಕ್ತಿ ಜಾತ್ರೆಗೆ ಸಕಲ ಸಿದ್ಧತೆ  

Team Udayavani, Jan 23, 2021, 5:05 PM IST

Preparing for the Adi Shakti Fair, the village goddess of Shirahatti

ಶಿರಹಟ್ಟಿ: ಪಟ್ಟಣದ ಆರಾಧ್ಯ ದೈವ, ಗ್ರಾಮ ದೇವತೆ ಆದಿಶಕ್ತಿ ದೇವಿ ಜಾತ್ರಾ ಮಹೋತ್ಸವ ಜ. 26, 27 ಮತ್ತು 28ರಂದು ಜರುಗಲಿದ್ದು, ಇಡೀ ಪಟ್ಟಣ ಸಕಲ ಸಿದ್ಧತೆಗೆ ಮುಂದಾಗಿದೆ. ಪಟ್ಟಣದಲ್ಲಿ ಈಗಾಗಲೇ ಸುಮಾರು ಐದು ವಾರಗಳನ್ನು ಮಾಡಿದ್ದು, ಜಾತ್ರಾ ಮಹೋತ್ಸವ ಅಂಗವಾಗಿ ದೇವಿ ಮೂರ್ತಿ ಪಟ್ಟಣದ ಪ್ರತಿ ಓಣಿಗೆ ಭೇಟಿ ನೀಡಲಿದೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಅಲ್ಲದೇ ಭಕ್ತರು ದೇವಿಯನ್ನು ಮನೆಗೆ ಬರಮಾಡಿಕೊಂಡು ಉಡಿ ತುಂಬಲು ಉತ್ಸುಕರಾಗಿದ್ದಾರೆ.

ಈ ಹಿಂದೆ 18 ವರ್ಷಗಳಿಗೊಮ್ಮೆ ನಡೆಯುತ್ತಿದ್ದ ಐತಿಹಾಸಿಕ ಪರಂಪರೆಯುಳ್ಳ ಗ್ರಾಮ ದೇವತೆ ಜಾತ್ರೆಯನ್ನು ಈಗ ಮೂರು ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ. ಜಾತ್ರೆ ಪ್ರಯುಕ್ತ ನಗರದ ಪ್ರಮುಖ ಬೀದಿಗಳು ಸಿಂಗಾರಗೊಳ್ಳುತ್ತಿವೆ. ಜ. 25 ರಂದು ಬೆಳಗ್ಗೆ 6.45ಕ್ಕೆ ಬಡಿಗೇರ ಓಣಿಯಲ್ಲಿ ಶ್ರೀ ದೇವಿಗೆ ನೆದರು ಬರಿಯುವುದು, ನಂತರ ಪಂಚ ಮುತ್ತೆ„ದೆಯರಿಗೆ ಉಡಿ ತುಂಬುವುದು ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ.

ಭಕ್ತರ ಮನೆಗೆ ದೇವಿ: ಸಂಪ್ರದಾಯದಂತೆ ಗ್ರಾಮದೇವತೆಯ ಜಾತ್ರಾ ಮಹೋತ್ಸವ ಅಂಗವಾಗಿ ಜ.26ರಂದು ಬೆಳಗ್ಗೆ 6.45ಕ್ಕೆ ಉಡಿ ತುಂಬುವ ಕಾರ್ಯ ಜರುಗಿದ ನಂತರ ಪಟ್ಟಣದ ಮೊದಲಿಗೆ ಶ್ರೀ ಜ.ಫಕ್ಕೀರೇಶ್ವರ ಮಠಕ್ಕೆ ಭೇಟಿ ನೀಡಿ, ಪಟ್ಟಣದ ಗೌಡರಾದ ಯಲ್ಲಪ್ಪಗೌಡ ಪಾಟೀಲ್‌ ಅವರ ಮನೆಗೆ ತೆರಳಿ ಉಡಿ ತುಂಬಿಸಿಕೊಂಡು, ನಂತರ ತನ್ನಿಷ್ಟದ ಭಕ್ತರ ಮನೆ ಮನೆ ದರ್ಶನ ಭಾಗ್ಯವನ್ನು ಕರುಣಿಸುತ್ತದೆ.

ಇದನ್ನೂ ಓದಿ:ಜಿಪಂ-ಗ್ರಾಪಂ ನಡುವೆ ಸಂಪರ್ಕ ಸೇತುವೆ ತಾಪಂ

ಅತ್ಯಂತ ವೈಭವದಿಂದ ಜರುಗುವ ಮೆರವಣಿಗೆಯುದ್ದಕ್ಕೂ ಉಧೋ ಉಧೋ ಎನ್ನುವ ಜೈಕಾರ ಹಾಕುತ್ತ ದೇವಿ ಸಾಗಿದತ್ತ ಭಕ್ತರ ಹಿಂಡು ಸಾಗುವುದು. ದೇವಿಯ ಸೇವೆಗೈದು ಪುನೀತ ಭಾವ ಮೆರೆಯುವರು. ಗ್ರಾಮ ದೇವತೆ ಜಾತ್ರಾ ಮಹೋತ್ಸವ ಅಧ್ಯಕ್ಷ ಯಲ್ಲಪ್ಪಗೌಡ್ರ ಎಸ್‌. ಪಾಟೀಲ್‌ ಪ್ರತಿಕ್ರಿಯಿಸಿ, ಜಿಲ್ಲಾ ಧಿಕಾರಿಗಳ ನಿರ್ದೇಶನದ ಮೇರೆಗೆ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡಿದ್ದು, ಕೋವಿಡ್ ದ ಭೀತಿಯ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೀತಿಯಲ್ಲಿ ಈ ವರ್ಷ ಆಚರಿಸಲು ನಿರ್ಧರಿಸಲಾಗಿದೆ. ಅತ್ಯಂತ ಸರಳವಾಗಿ ದೇವಿ ಸಂಚಾರ ಮತ್ತು ಉಡಿ ತುಂಬುವ ಕಾರ್ಯಗಳನ್ನು ಹೊರತುಪಡಿಸಿದರೆ, ಯಾವುದೇ ವಿಶೇಷ ಕಾರ್ಯಕ್ರಮವನ್ನು ಈ ವರ್ಷ ಹಮ್ಮಿಕೊಂಡಿಲ್ಲ ಎಂದು ಹೇಳಿದರು.

ಪ್ರಕಾಶ ಶಿ.ಮೇಟಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.