ಪ್ರತಿ ಮನೆಗೂ ನರೇಗಾ ಜಾಬ್‌ಕಾರ್ಡ್‌ ವಿತರಣೆ ಕಡ್ಡಾಯ

ನರೇಗಾ ಉದ್ಯೋಗ ಚೀಟಿ ಹೊಂದಿದ ಕುಟುಂಬ ಸರಕಾರದ ಪ್ರತಿ ಸೌಲಭ್ಯ ಪಡೆದುಕೊಳ್ಳಬಹುದು.

Team Udayavani, Jan 23, 2021, 5:25 PM IST

ಪ್ರತಿ ಮನೆಗೂ ನರೇಗಾ ಜಾಬ್‌ಕಾರ್ಡ್‌ ವಿತರಣೆ ಕಡ್ಡಾಯ

ವಿಜಯಪುರ: ಗ್ರಾಮೀಣ ದುಡಿಯುವ ಕೈಗಳಿಗೆ ಕೆಲಸ ಕೊಟ್ಟು, ಆರ್ಥಿಕ ಸಬಲೀಕರಣ ಮಾಡುವಲ್ಲಿ ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಕಾರಿ ಆಗಿದೆ. ಅದರಲ್ಲೂ ಮಹಿಳೆಯರ ಆರ್ಥಿಕ ಪ್ರಗತಿಯಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವುದೇ ನರೇಗಾ ಯೋಜನೆ ಎಂದು ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ ಹೇಳಿದರು.

ಬಸವನವಾಗೇವಾಡಿ ತಾಲೂಕಿನ ಡೋಣೂರು ಗ್ರಾಮದಲ್ಲಿ ಪಂಚಾಯತ್‌ ವ್ಯಾಪ್ತಿಯ 6 ಗ್ರಾಮಗಳಲ್ಲಿ ಮಹಿಳಾ ಕಾಯಕ ಶಕ್ತಿ ಅಭಿಯಾನಕ್ಕೆ ವಾದ್ಯಮೇಳದೊಂದಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ವಿಶೇಷ ಅಭಿಯಾನ ಮೂಲಕ ಮಹಿಳಾ ಪ್ರಧಾನ ಕುಟುಂಬಗಳನ್ನು ಗುರುತಿಸುವುದು, ಸ್ವ ಸಹಾಯ ಸಂಘಗಳ ಭಾಗವಹಿಸುವಿಕೆಗೆ ಉತ್ತೇಜನ ನೀಡುವುದಾಗಿದೆ. ಮಹಿಳೆಯರು ಈ ವಿಶೇಷ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ನರೇಗಾ ಉದ್ಯೋಗ ಚೀಟಿ ಹೊಂದಿದ ಕುಟುಂಬ ಸರಕಾರದ ಪ್ರತಿ ಸೌಲಭ್ಯ ಪಡೆದುಕೊಳ್ಳಬಹುದು. ಬಿಪಿಎಲ್‌ ಕಾರ್ಡ್‌ ಮಾದರಿಯಲ್ಲಿ ಪ್ರತಿ ಕುಟುಂಬ ಸದಸ್ಯರು ಗ್ರಾಪಂ ಮೂಲಕ ಉದ್ಯೋಗ ಕಾರ್ಡ್‌ ಪಡೆದುಕೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಾರ್ಷಿಕ 100 ದಿನದ ಕೂಲಿ ಕೆಲಸ ಮಾಡಿ, 28,500 ರೂ. ವೇತನ ಪಡೆಯಲು ಅವಕಾಶವಿದೆ. ಗ್ರಾಪಂನಲ್ಲಿ ಮಹಿಳೆಯ ಭಾಗವಹಿಸುವಿಕೆ ಕೇವಲ ಶೇ. 34 ರಷ್ಟಿದ್ದು, ಶೇ. 50ಕ್ಕೆ ಹೆಚ್ಚಿಸುವ ಪ್ರಯತ್ನ ಮಾಡಬೇಕಿದೆ ಎಂದರು.

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಐಇಸಿ ವೃತ್ತಿಪರರಾದ ಸುವರ್ಣಾ ಕಂಬಿ ಮಾತನಾಡಿ, ಮಹಿಳೆಯರು ಪ್ರಸ್ತುತ ಕಲೆ, ಸಾಹಿತ್ಯ, ರಾಜಕೀಯ, ಶಿಕ್ಷಣ ಸೇರಿದಂತೆ ಎಲ್ಲ ರಂಗದಲ್ಲೂ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕಿದೆ. ನೀವು ನಿಮ್ಮ ಗ್ರಾಮದ ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವ ಜೊತೆಗೆ ಬೇಸಿಗೆ ದಿನಗಳಲ್ಲಿ ನರೇಗಾ ಕೆಲಸವನ್ನು ಮಾಡಬಹುದು ಎಂದರು.

ಪಿಡಿಒ ಮುತ್ತಣ್ಣ ಇವಣಗಿ, ಕಾರ್ಯದರ್ಶಿ ಸುರೇಶ, ಶ್ರೀಶೈಲ ಉಮನಾಬಾದಿ, ಸಾಧು ಮಹಾರಾಜ, ಮೆಹಬೂಬ್‌ ಹಿಪ್ಪರಗಿ ಸೇರಿದಂತೆ ಡೋಣೂರು, ಎಂಭತನಾಳ, ನಿಗಿನಾಳ, ಬೊಮ್ಮನಹಳ್ಳಿ, ಮಸಬಿನಾಳ ಗ್ರಾಪಂ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.