ಧರ್ಮಸ್ಥಳ ಗ್ರಾಮಾಭಿವೃದ್ಧಿ ಜನಸೇವಾ ಯೋಜನೆ


Team Udayavani, Jan 23, 2021, 6:48 PM IST

Dharmasthala Rural Development Janaseva Project

ಕುಮಟಾ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನಸಾಮಾನ್ಯರಿಗೆ ಸೇವೆ ಒದಗಿಸುವ ಒಂದು ಸಂಸ್ಥೆಯಾಗಿದ್ದು, ಈ ಮೂಲಕ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬರೂ ನಿಷ್ಠೆ ತೋರಿ ಧನ್ಯತೆ ಅನುಭವಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ತಿಳಿಸಿದರು.

ನಾಮಧಾರಿ ಸಭಾಭವನದಲ್ಲಿ ನಡೆದ ಕರಾವಳಿ ಭಾಗದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಕರ್ತರ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಪ್ರತಿ ಯೊಂದೂ ಕುಟುಂಬ ಸ್ವಾವಲಂಬಿಯಾಗಿ ಬದುಕಲು ಪ್ರೋತ್ಸಾಹ ನೀಡುವುದು ನಮ್ಮ ಗುರಿಯಾಗಿದ್ದು, ಅಂತಹ ಭರವಸೆಯನ್ನು ನಾವಿಂದು ನಮ್ಮ ಸ್ವಸಹಾಯ ಸಂಘಗಳ ಸದಸ್ಯರಲ್ಲಿ ಕಾಣುತ್ತಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು.

ಧರ್ಮಸ್ಥಳ ಭಕ್ತಿ ಭಾವದ ತವರೂರಾಗಿದ್ದು, ಇಲ್ಲಿ ಬೇಡಿ ಬಂದವರಿಗೆ ಇಲ್ಲ ಎನ್ನುವ ಮಾತೇ ಇಲ್ಲ. ಇಲ್ಲಿ ಅನ್ನ, ವಿದ್ಯೆ, ಅಭಯ ದಾನಗಳನ್ನೊಳಗೊಂಡ ಚತುರ್ವಿದ ದಾನಗಳು ನಿರಂತರ ನಡೆಯುತ್ತಿದೆ. ಈ ಎಲ್ಲ ಕಾರ್ಯಕ್ಕೆ ಮಂಜುನಾಥ ಸ್ವಾಮಿ ಮತ್ತು ಧರ್ಮ ದೇವತೆಗಳ ಸಾನ್ನಿಧ್ಯದ ಜೊತೆಗೆ ಅಣ್ಣಪ್ಪ ಸ್ವಾಮಿಯ ಶಕ್ತಿ ಕಾರಣವಾಗಿದೆ ಎಂದರು. ಕಾರ್ಯಕರ್ತರು ಸಂಸ್ಥೆಯ ನಿಯಮಗಳನ್ನು ಮುಕ್ತ ಮನಸ್ಸಿನಿಂದ ತಿಳಿದುಕೊಂಡು, ನಮ್ಮಲ್ಲಿರುವ ಕೀಳರಿಮೆ ಬದಲಾಯಿಸಿಕೊಂಡು ಸಕಾರಾತ್ಮಕವಾಗಿ ಯೋಚಿಸಿ, ಕರ್ತವ್ಯ ನಿರ್ವಹಿಸಿ ಜನರಿಗೆ ಯೋಜನೆಯ ಸೌಲಭ್ಯ ತಲುಪಿಸಿ ಎಂದು ಕರೆ ನೀಡಿದರು.

ಇದನ್ನೂ ಓದಿ:ಗೋಲ್ಡನ್‌ ಟೆಂಪಲ್… ಇಂಥ “ಅಮೃತ’ವನ್ನು ಸವಿಯಲು ಹಿಂದೆಮುಂದೆ ನೋಡಬೇಕಿಲ್ಲ!

ಸ್ಥಳೀಯ ಶಾಸಕ ದಿನಕರ ಶೆಟ್ಟಿ, ಜೆಡಿಎಸ್‌ ಮುಖಂಡ ಸೂರಜ ನಾಯ್ಕ ಸೋನಿ, ವಕೀಲ ಆರ್‌.ಜಿ. ನಾಯ್ಕ, ಜನಜಾಗೃತಿ ವೇದಿಕೆ ಅಧ್ಯಕ್ಷ ಸತೀಶ ಶೇಟ್‌ ಹಾಗೂ ಸದಸ್ಯರಾದ ಎಚ್‌.ಆರ್‌. ನಾಯ್ಕ, ವಾಸುದೇವ ನಾಯಕ, ದಯಾನಂದ ದೇಶಭಂಡಾರಿ ಸೇರಿದಂತೆ ವಿವಿಧ ಮುಖಂಡರು ಆಗಮಿಸಿ, ಹೆಗ್ಗಡೆಯವರನ್ನು ಅಭಿನಂದಿಸಿದರು. ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ, ಉತ್ತರಕನ್ನಡ ಜಿಲ್ಲೆಯ ನಿರ್ದೇಶಕ ಶಂಕರ ಶೆಟ್ಟಿ ಉಪಸ್ಸಿತರಿದ್ದರು. ಯೋಜನಾಧಿಕಾರಿ ನಾಗರಾಜ ನಾಯ್ಕ ಸ್ವಾಗತಿಸಿದರು. ಹೊನ್ನಾವರ ಯೋಜನಾಧಿಕಾರಿ ಈಶ್ವರ ಎಂ. ವಂದಿಸಿದರು. ಕಾರವಾರ ಯೋಜನಾಧಿಕಾರಿ ಶೇಖರ ನಾಯ್ಕ ನಿರ್ವಹಿಸಿದರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.