ಅಕ್ರಮ ಸಕ್ರಮ ಸಮಯ
ಗಣಿಗಾರಿಕೆ ಸ್ಥಗಿತ ಅಸಾಧ್ಯ ಎಂದ ಮುಖ್ಯಮಂತ್ರಿ ಯಡಿಯೂರಪ್ಪ
Team Udayavani, Jan 24, 2021, 6:20 AM IST
ಬೆಂಗಳೂರು/ಮೈಸೂರು/ಶಿವಮೊಗ್ಗ: ರಾಜ್ಯದಲ್ಲಿ ಭಾರೀ ಕಾಮಗಾರಿಗಳು ನಡೆಯುತ್ತಿದ್ದು, ಗಣಿಗಾರಿಕೆ ಅನಿವಾರ್ಯ ಎಂದು ಸಿಎಂ ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ. ಅಕ್ರಮವಾಗಿ ನಡೆಯುತ್ತಿರುವ ಗಣಿ ಗಾರಿಕೆಗಳನ್ನು ಸಕ್ರಮ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿಎಂ ಹೇಳಿಕೆಯನ್ನು ತೀವ್ರ ವಾಗಿ ವಿರೋಧಿಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸಿಎಂ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆ ಅಪರಾಧ. ಅದಕ್ಕೆ ಏನು ಶಿಕ್ಷೆ? ಅರ್ಜಿ ಹಾಕಿ ಅಕ್ರಮವನ್ನು ಸಕ್ರಮ ಮಾಡಿಕೊಳ್ಳಿ ಎಂದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಳಬಹುದೇ ಎಂದು ಪ್ರಶ್ನಿಸಿದ್ದಾರೆ.
ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ. ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಇದಕ್ಕೆ ಪ್ರತಿಯಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇದು ಅಕ್ರಮ ಮನೆ, ಜಮೀನು ಸಕ್ರಮದಂತಲ್ಲ. ಗಣಿ ಇಲಾಖೆಯ ಕಾನೂನು ಇರುವುದೇಕೆ? ಸಿಎಂ ಹೇಳಿಕೆ ಬೇಜವಾಬ್ದಾರಿತನದ ಪರಮಾವಧಿ. ಹುಣಸೋಡು ದುರಂತಕ್ಕೆ ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಹೊಣೆ ಎಂದು ಆರೋಪಿಸಿದರು.
ಹುಣಸೋಡಿಗೆ ಬಿಎಸ್‌ವೈ ಭೇಟಿ :
ಹುಣಸೋಡು ಕಲ್ಲುಕೋರೆಗೆ ಸಿಎಂ ಯಡಿಯೂರಪ್ಪ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿ, ಘಟನೆ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದ್ದು, ಅನಂತರ ಸ್ಪಷ್ಟ ಚಿತ್ರಣ ಲಭಿಸಲಿದೆ. ನಿಷ್ಪಕ್ಷವಾದ ತನಿಖೆ ನಡೆಸಿ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು. ಈ ಪ್ರದೇಶದ ಎಲ್ಲ ಕ್ರಶರ್‌ಗಳು ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿವೆ. ಆದರೆ ಇಲ್ಲಿ ಗಣಿಗಾರಿಕೆಗೆ ಅನುಮತಿ ಇಲ್ಲ. ಇದು ಪರಿಸರ ಸೂಕ್ಷ್ಮ ಪ್ರದೇಶವಾಗಿದ್ದು, ಈ ಕುರಿತು ಸರಕಾರ ಮರುಪರಿಶೀಲನೆ ನಡೆಸಲಿದೆ ಎಂದರು.
ಸ್ಫೋಟ ಸ್ಥಳದಲ್ಲಿ 3 ವಾಹನ? :
ಹುಣಸೋಡು ಸ್ಫೋಟ ಸಂಭವಿಸಿದಾಗ ಒಟ್ಟು 3 ವಾಹನಗಳಿದ್ದವು. ಒಂದು ಲಾರಿಯಲ್ಲಿ ಸ್ಫೋಟಕಗಳಿದ್ದು, ಇನ್ನೆರಡು ಬೊಲೆರೋ ಇದ್ದವು ಎಂದು ಇಲ್ಲಿನ ನಿವಾಸಿಗಳು ಹೇಳುತ್ತಿದ್ದಾರೆ. ಈ ಸಂದರ್ಭ ಹಲವು ಜನರಿದ್ದರು. ಕೇವಲ ಐವರ ಮೃತ ದೇಹ ಸಿಕ್ಕಿವೆ. ಉಳಿದವರು ನಾಪತ್ತೆಯಾಗಿದ್ದಾರೆ. ಮುಖ್ಯವಾಗಿ ಶಶಿ ಕುಮಾರ್ ಎಂಬಾತ ಪತ್ತೆಯಾದರೆ ಹಲವು ರಹಸ್ಯಗಳು ಬಯ ಲಾಗಲಿವೆ ಎಂದು ಮೂಲಗಳು ತಿಳಿಸಿವೆ.
ಪರಿಹಾರ ಕೊಡುವವರು ಯಾರು? : ಸ್ಫೋಟದಿಂದ ಮನೆ, ಕಟ್ಟಡಗಳು ಹಾನಿಗೊಳಗಾಗಿದ್ದು, ಇದಕ್ಕೆ ಪರಿಹಾರ ನೀಡುವವರು ಯಾರು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಮೃತರಲ್ಲಿ ಇಬ್ಬರು ನವವಿವಾಹಿತರು. ಇನ್ನಿಬ್ಬರಲ್ಲಿ ಓರ್ವ 5; ಮತ್ತೂಬ್ಬ 14 ದಿನಗಳ ಮಗುವಿನ ತಂದೆ. ಸರಕಾರ ಪರಿಹಾರ ಒದಗಿಸಿದರೂ ಈ ಕುಟುಂಬಗಳ ಗೋಳು ಪರಿಹರಿಸಲಾಗುವುದೇ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.