ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಗೆ ಏರ್ ಲಿಫ್ಟ್!
Team Udayavani, Jan 24, 2021, 8:39 AM IST
ಹೊಸದಿಲ್ಲಿ: ಆರ್ ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ಏರ್ ಲಿಫ್ಟ್ ಮೂಲಕ ಕರೆದೊಯ್ಯಲಾಗಿದೆ.
ಲಾಲೂ ಪ್ರಸಾದ್ ಯಾದವ್ ಅವರನ್ನು ಶುಕ್ರವಾರ ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಏರ್‌ಲಿಫ್ಟ್ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಸಿಎಂ ತೇಜಶ್ವಿ ಯಾದವ್, ಮತ್ತು ಮಾಜಿ ಸಚಿವರಾದ ತೇಜ್ ಪ್ರತಾಪ್ ಯಾದವ್ ಸೇರಿ ಹಲವು ನಾಯಕರು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.
ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ.
ಇದನ್ನೂ ಓದಿ:ಮೂತ್ರಪಿಂಡದ ತೀವ್ರ ಹಠಾತ್ (AKI) – ಪೋಷಕಾಂಶಗಳ ನಿರ್ವಹಣೆ
ಲಾಲೂ ಪ್ರಸಾದ್ ಯಾದವ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿದೆ, ಮೂತ್ರಪಿಂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವರ ಶ್ವಾಸಕೋಶದಲ್ಲಿ ನೀರಿನ ಶೇಖರಣೆಯಾಗಿದೆ. ಅವರ ಮೂತ್ರಪಿಂಡವು ಕೇವಲ 25 ಪ್ರತಿಶತದಷ್ಟು ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ಕುಟುಂಬ ಸದಸ್ಯರು ಹೇಳಿದರು.
ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಜೈಲಿನಲ್ಲಿದ್ದ ಲಾಲು ಪ್ರಸಾದ್ ಕಳೆದ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಲಾಲೂ ಯಾದವ್ ಅವರ ಆರೋಗ್ಯ ಸುಧಾರಣೆಗಾಗಿ ಆರ್‌ಜೆಡಿ ಮುಖಂಡರು, ಕಾರ್ಯಕರ್ತರು ಪೂಜೆ- ಹೋಮ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.