![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 24, 2021, 1:36 PM IST
ನವದೆಹಲಿ : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮತ್ತೆ ಟೀಕೆ ಮಾಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಬಗ್ಗೆ ಸಾರ್ವಜನಿಕರು ಹಣದುಬ್ಬರದಿಂದ ಬಳಲುತ್ತಿರುವಾಗ ಸರ್ಕಾರ ತೆರಿಗೆ ಸಂಗ್ರಹ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
“ಮೋದಿ ಜಿ ಅವರು ‘ಜಿಡಿಪಿ’ಯಲ್ಲಿ ಭಾರಿ ಬೆಳವಣಿಗೆಯನ್ನು ತೋರಿಸಿದ್ದಾರೆ, ಅಂದರೆ ಗ್ಯಾಸ್-ಡೀಸೆಲ್-ಪೆಟ್ರೋಲ್ ಬೆಲೆಗಳು! ಸಾರ್ವಜನಿಕರು ಹಣದುಬ್ಬರದಿಂದ ಕಷ್ಟ ಅನುಭವಿಸುತ್ತಿದ್ದಾರೆ, ಮೋದಿ ಸರ್ಕಾರ ತೆರಿಗೆ ಸಂಗ್ರಹದಲ್ಲಿ ನಿರತವಾಗಿದೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ದೆಹಲಿಯ ಖಾನ್ ಮಾರ್ಕೆಟ್ ಬಳಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು
ಒಂದು ವಾರದಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸುವುದರ ಮೂಲಕ ದೇಶದಲ್ಲಿ ಶನಿವಾರ(ಜ. 23) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ.
ದೆಹಲಿಯಲ್ಲಿ ಇವತ್ತಿನ ದರ ಗಮನಿಸುವುದಾದರೇ, ಪೆಟ್ರೋಲ್ ಪ್ರತಿ ಲೀಟರ್ ಗೆ 85.70 ರೂ ಇದ್ದರೇ, ಮುಂಬೈನಲ್ಲಿ 92.28 ರೂ ಗೆ ಏರಿಕೆಯಾಗಿದೆ. ಇನ್ನು, ರಾಷ್ಟ್ರ ರಾಜಧಾನಿಯಲ್ಲಿ ಡೀಸೆಲ್ ಪ್ರತಿ ಲೀಟರ್ ಗೆ 75.88 ರೂ ದರದಲ್ಲಿ ಮಾರಾಟವಾಗುತ್ತಿದ್ದರೇ, ವಾಣಿಜ್ಯ ನಗರಿ ಮುಂಬೈಯಲ್ಲಿ 82.66 ರೂ ಗೆ ಮಾರಾಟವಾಗುತ್ತಿದೆ.
ಇದನ್ನೂ ಓದಿ : ಸುಭಾಶ್ಚಂದ್ರ ಬೋಸ್ ರನ್ನು ಕೊಂದಿದ್ದು ಕಾಂಗ್ರೆಸ್ ನವರು! ಸಂಸದ ಸಾಕ್ಷಿ ಮಹಾರಾಜ್
ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ಸೌದಿ ತೈಲ ಉತ್ಪಾದನೆ ಕಡಿತವು ತೈಲ ಬೆಲೆಗಳ ಏರಿಕೆಗೆ ಕಾರಣವಾಗಿದೆ. ಆದರೆ ತೆರಿಗೆ ಕಡಿತದ ಬಗ್ಗೆ ಬದ್ಧರಾಗಿರಲಿಲ್ಲ ಎಂದು ಈ ಹಿಂದೆ ಆರೋಪಿಸಿದ್ದರು.
ಉನ್ನತ ತೈಲ ಪರಿಶೋಧಕ ಸೌದಿ ಅರೇಬಿಯಾ, ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ದಿನಕ್ಕೆ 1 ಮಿಲಿಯನ್ ಬ್ಯಾರೆಲ್‌ಗಳಷ್ಟು ಹೆಚ್ಚುವರಿ ಉತ್ಪಾದನಾ ಕಡಿತವನ್ನು ವಾಗ್ದಾನ ಮಾಡಿದ್ದು, ಕೋವಿಡ್ ಹರಡಲಾರಂಭಿಸಿದಾಗಲಿಂದ ಹೆಚ್ಚಿನ ಬೆಲೆಗೆ ಏರಲು ಕಾರಣವಾಗಿದೆ.
ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳು – ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) – ಜನವರಿ 6 ರಂದು ಸುಮಾರು ಒಂದು ತಿಂಗಳ ನಂತರ ದೈನಂದಿನ ಬೆಲೆ ಪರಿಷ್ಕರಣೆಯನ್ನು ಪುನರಾರಂಭಿಸಿವೆ.
ಅಂದಿನಿಂದ, ದರಗಳು ಪೆಟ್ರೋಲ್‌ಗೆ ಲೀಟರ್‌ಗೆ 1.99 ರೂ ಮತ್ತು ಡೀಸೆಲ್ 2.01 ರೂ ರಷ್ಟು ಏರಿಕೆಯಾಗಿದೆ.
ಇದನ್ನೂ ಓದಿ : ಲಸಿಕೆಯಿಂದ ಅಡ್ಡ ಪರಿಣಾಮವಿಲ್ಲ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.