ವಂಶಪಾರಂಪರ್ಯ ರಾಜಕಾರಣಕ್ಕಿಲ್ಲ ಅವಕಾಶ: ನಳೀನಕುಮಾರ ಕಟೀಲ್‌


Team Udayavani, Jan 24, 2021, 1:34 PM IST

Not Allowed for hereditary politics

ಬೆಳಗಾವಿ: ಬಿಜೆಪಿಯಲ್ಲಿ ವಂಶಪಾರಂಪರ್ಯ ರಾಜಕಾರಣಕ್ಕೆ ಅವಕಾಶ ಇಲ್ಲ. ಮುಂದಿನ ದಿನಗಳಲ್ಲಿ ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್‌ ಎಚ್ಚರಿಕೆ ನೀಡಿದರು. ನಗರದಲ್ಲಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದ ಅವಲೋಕನ ಸಭೆ ನಡೆಸಿದ ಬಳಿಕ ಜಿಲ್ಲೆಯ ಪ್ರಮುಖ ನಾಯಕರ ಜತೆ ಸಭೆ ನಡೆಸಿದ ಅವರು, ಎಲ್ಲರೂ ವಂಶ ಪಾರಂಪರ್ಯ ರಾಜಕಾರಣ ಮಾಡುವುದಾದರೆ ಬಿಜೆಪಿ ಏಕಿರಬೇಕು ಎಂದು ಖಾರವಾಗಿ ಹೇಳಿದರು.

ಬೆಳಗಾವಿ ಲೋಕಸಭಾ ಉಪಚುನಾವಣೆ ಸಂಬಂಧ ಮಾತನಾಡದಂತೆ ಎಲ್ಲ ನಾಯಕರಿಗೆ ಎಚ್ಚರಿಕೆ ನೀಡಿದ ಅವರು ಈ ಸಂಬಂಧ ಏನಿದ್ದರೂ ರಾಷ್ಟ್ರೀಯ ಅಧ್ಯಕ್ಷರು ನಿರ್ಣಯ ತೆಗೆದುಕೊಳ್ಳುತ್ತಾರೆ. ಹಾಗಾಗಿ ಯಾರೂ ಚರ್ಚಿಸದಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ನಡೆದ ಜನಸೇವಕ ಸಮಾವೇಶದ ಸಂದರ್ಭದಲ್ಲಿ ಅನೇಕ ಕಡೆಗಳಲ್ಲಿ ಕೆಲವರು ಸುರೇಶ ಅಂಗಡಿ ಅಭಿಮಾನಿ ಬಳಗ ಎಂದು ಫ್ಲೆಕ್ಸ್‌ ಹಾಕಿದ್ದರು. ಅದನ್ನು ಕರ್ನಾಟಕ ಉಸ್ತುವಾರಿ ಅರುಣ ಸಿಂಗ್‌ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸಾಹುಕಾರ ಪಡೆ ಎಂದು ಹಾಕಿಕೊಳ್ಳುತ್ತಿದ್ದಾರೆ. ಒಮ್ಮೆ ಬಿಜೆಪಿಗೆ ಬಂದ ನಂತರ ಎಲ್ಲರೂ ಬಿಜೆಪಿಯವರು. ಇಲ್ಲಿ ಯಾರದೇ ಗುಂಪು ಅಭಿಮಾನಿ ಬಳಗ ಇರುವಂತಿಲ್ಲ. ಇದು ಮುಂದುವರಿದರೆ ಪಕ್ಷ ಗಂಭೀರವಾಗಿ ಪರಿಗಣಿಸಲಿದೆ ಎಂದು ನಳಿನ್‌ ಕುಮಾರ ಕಟೀಲು ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ:ಲಸಿಕೆಯಿಂದ ಅಡ್ಡ ಪರಿಣಾಮವಿಲ್ಲ

ಬರುವ ದಿನಗಳಲ್ಲಿ ಸ್ವಾವಲಂಬಿ ಬೂತ್‌ಗಳನ್ನು ಮಾಡಬೇಕು. ಪಕ್ಷದಿಂದ ಹಣಕಾಸು ಸಹಾಯ ನಿರೀಕ್ಷೆ ಮಾಡದೆ ಸಂಘಟನೆ ಮಾಡಬೇಕು. ಗಟ್ಟಿಯಾದ ಸಂಘಟನೆಯ ಮೂಲಕ ಹಣ ಬಲ, ತೋಳ್ಬಲ ಹಾಗೂ ಕುಟುಂಬ ರಾಜಕಾರಣ ಹಿಮ್ಮೆಟ್ಟಿಸಬೇಕು ಎಂದು ಸೂಚನೆ ನೀಡಿದರು. ಪ್ರಧಾನಿ ಮೋದಿ ಅವರ ಹೆಸರು ಹೇಳಿಕೊಂಡು ಎಷ್ಟು ಚುನಾವಣೆ ಗೆಲ್ಲಲು ಸಾಧ್ಯ. ಎಲ್ಲದಕ್ಕೂ ಅವರೇ ಬರಬೇಕು ಎಂದರೆ ನಾವಿದ್ದು ಏನು ಪ್ರಯೋಜನ. ಇದನ್ನು ಅರ್ಥ ಮಾಡಿಕೊಂಡು ಪಕ್ಷ ಸಂಘಟಿಸಬೇಕು ಎಂದರು. ಸಚಿವರಾದ ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಶಾಸಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.