ಉದ್ಧವ್‌ ಠಾಕ್ರೆ ಹೇಳಿಕೆ ಖಂಡಿಸಿ ಪ್ರತಿಭಟನೆ

Team Udayavani, Jan 24, 2021, 1:59 PM IST

protest against Uddhav Thackeray

ಗಜೇಂದ್ರಗಡ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆ ಖಂಡಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಠಾಕ್ರೆ ಪ್ರತಿಕೃತಿ ದಹಿಸಿ ಶನಿವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕದಲ್ಲಿರುವ ಮರಾಠಿ ಭಾಷೆ ಹಾಗೂ ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ. ರಾಜ್ಯ ವಿಭಜನೆಗೆ ಸಂಬಂಧಿಸಿದಂತೆ ಮಹಾಜನ್‌ ವರದಿಯೇ ಅಂತಿಮ. ರಾಜ್ಯದಲ್ಲಿರುವ ಮರಾಠಿಗರು ಕನ್ನಡಿಗರೊಂದಿಗೆ ಅನ್ಯೋನ್ಯತೆಯಿಂದ ಬೆರೆತು ಜೀವನ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಧವ್‌ ಠಾಕ್ರೆ ಶಾಂತಿ ಕದಡುವ ನಿಟ್ಟಿನಲ್ಲಿ ಇಂತಹ ಹೇಳಿಕೆ ನೀಡಿರುವುದು ಖಂಡನೀಯ. ಪದೇ ಪದೆ ಕನ್ನಡಿಗರ ಸಹನೆಯನ್ನು ಪರೀಕ್ಷಿಸಿದರೆ ತಕ್ಕ ಬೆಲೆ ತೆರಬೇಕಾದೀತು. ಮುಖ್ಯಮಂತ್ರಿಸ್ಥಾನದಲ್ಲಿರುವ ಠಾಕ್ರೆ ತನ್ನ ಸ್ಥಾನಕ್ಕಾದರೂ ಗೌರವ ನೀಡುವ ನಿಟ್ಟಿನಲ್ಲಿ ನಡೆದುಕೊಂಡರೆ ಒಳಿತು ಎಂದು ಕಿಡಿಕಾರಿದರು.

ರಾಜ್ಯದಲ್ಲಿರುವ ಯಾರಾದರೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ಹೇಳಿದರೆ ಅಂತಹವರನ್ನು ನಾವೇ ಮಹಾರಾಷ್ಟ್ರಕ್ಕೆ ಕಳುಹಿಸಿಕೊಡುತ್ತೇವೆ. ರಾಜ್ಯದ ಎಲ್ಲ ಪಕ್ಷಗಳ ಸಂಸದರು, ಶಾಸಕರು, ಮುಖಂಡರು ಠಾಕ್ರೆ ಹೇಳಿಕೆ ಖಂಡಿಸಬೇಕು. ಅವರು ಕ್ಷಮೆ ಕೇಳುವಂತೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ:ಕನ್ನಡ ಭಾಷೆಯಲ್ಲಿದೆ ಉಜ್ವಲ ಶಕ್ತಿ

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಎ.ಬಿ. ಕಲಘಟಗಿ ಅವರಿಗೆ ಮನವಿ ಸಲ್ಲಿಸಿದರು. ನಂತರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಪ್ರತಿಕೃತಿ ಧಹಿಸಿ, ಆಕ್ರೋಶ ವ್ಯಕ್ತಪಡಿಸಿದರು. ಭೀಮಣ್ಣ ಇಂಗಳೆ, ಕಳಕಪ್ಪ ಪೋತಾ, ಶರಣಪ್ಪ ಚವ್ಹಾಣ, ಜಗದೀಶ ಮಡಿವಾಳರ, ಷಣ್ಮುಖ ಕಾತರಕಿ, ವೀರೇಶ ಶಿವಶಿಂಪಗೇರ, ಸಂಗಪ್ಪ ಪತಂಗರಾಯ್‌, ಮುತ್ತಯ್ಯ ಬಿನ್ನಾಳಮಠ, ಈರಣ್ಣ ಪುಲಗಟ್ಟಿ, ಶಿವು ರಾಠೊಡ, ಮಂಜುನಾಥ ಚಂದೂಕರ, ಮಂಗಳೇಶ ಹಾಳಕೇರಿ, ಕಳಕಪ್ಪ ಹಾಳಕೇರಿ, ಪೀರು ರಾಠೊಡ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.