![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 25, 2021, 11:42 AM IST
ವಿಟ್ಲ: ವಿಟ್ಲ- ಪುತ್ತೂರು ರಸ್ತೆಯಲ್ಲಿರುವ ಉರಿಮಜಲು ಎಸ್ಸಾರ್ ಪೆಟ್ರೋಲ್ ಬಂಕ್ ಗೆ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಕಳವುಗೈದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಬಂಕ್ ನ ಕಚೇರಿಯ ಬೀಗ ಒಡೆದು ನುಗ್ಗಿದ ದರೋಡೆಕೋರರು ಕಂಪ್ಯೂಟರ್ ಮತ್ತು ಸಿಸಿ ಕ್ಯಾಮೆರಾಕ್ಕೆ ಸಂಬಂಧಿಸಿದ ಸಲಕರಣೆಗಳನ್ನು ದೋಚಿದ್ದಾರೆ.
ಇದನ್ನೂ ಓದಿ:ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಕಚೇರಿಯ ಎಲ್ಲಾ ಲಾಕರ್ ಗಳನ್ನು ಒಡೆದು ಅಸ್ತವ್ಯಸ್ತ ಮಾಡಿದ್ದಾರೆ. ಸುಮಾರು 2 ಲಕ್ಷದ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಎಷ್ಟು ಮೊತ್ತದ ನಗದನ್ನು ಕಳ್ಳರು ದೋಚಿದ್ದಾರೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ. ಕೆಲ ಸಮಯದ ಹಿಂದೆ ಕುದ್ದುಪದವಿನಲ್ಲಿರುವ ಎಸ್ಸಾರ್ ಕಂಪನಿಯ ಬಂಕ್ ಗೆ ಕಳ್ಳರು ನುಗ್ಗಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.