ಕಾಂಗ್ರೇಸ್ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ : ಬಿ.ಸಿ. ಪಾಟೀಲ್ ಆರೋಪ
Team Udayavani, Jan 25, 2021, 2:17 PM IST
ಬೆಂಗಳೂರು: ಕಾಂಗ್ರೆಸ್ ರೈತರ ವಿಚಾರದಲ್ಲಿ ದ್ವಂದ್ವ ನೀತಿಯ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ, ಅಲ್ಲದೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಇದೀಗ ಊಸರವಳ್ಳಿಯಂತೆ ನಾಟಕವಾಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೃಷಿ ಕಾಯ್ದೆ ತಿದ್ದುಪಡಿಗಳು ರೈತರ ಬಲವರ್ಧನೆಗೆ ಅವರ ಆದಾಯ ಹೆಚ್ಚಿಸಲು ತರಲಾಗಿದೆ, ಜೊತೆಗೆ ಕಾಯ್ದೆಗಳು ರೈತರ ಪರವಾಗಿದ್ದು, ಇದರಲ್ಲಿ ಯಾವುದೇ ಸಂಶಯಬೇಡ. ಈ ಬಗ್ಗೆ ಮನವರಿಕೆಯೂ ಮಾಡಿಕೊಡಲಾಗಿದೆ. ರೈತರು ಸರ್ಕಾರದ ಜೊತೆ ಸಹಕರಿಸಿ ಟ್ರ್ಯಾಕ್ಟರ್ ರ‍್ಯಾಲಿ ಕೈಬಿಡುವಂತೆ ಮನವಿ ಮಾಡಿದರು.
2019 ರಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೇ ಎಪಿಎಂಸಿ ರದ್ದುಪಡಿಸಿ ಬೆಂಬಲ ಬೆಲೆ ರದ್ದುಪಡಿಸಲಾಗುವುದು ಎಂದೇ ಹೇಳಿತ್ತು.ಆದರೆ ನಾವು ಎಪಿಎಂಸಿ ರದ್ದುಮಾಡುತ್ತಿಲ್ಲ, ರೈತ ತನ್ನ ಬೆಳೆಯನ್ನು ಎಲ್ಲಿಬೇಕಾದರೂ ಮಾರಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಿದೆ. ಲಾಭನಷ್ಟಕ್ಕೆ ವ್ಯಾಪರಸ್ಥರು ಹೊಣೆಯಾಗುತ್ತಾರೆಯೇ ಹೊರತು ರೈತರಲ್ಲ. ರೈತ ತನ್ನ ಬೆಳೆಯನ್ನು ತನಗೆ ಇಚ್ಛಿಸಿದ ಬೆಲೆಯಲ್ಲಿ ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರವನ್ನು ಸರ್ಕಾರ ಕಲ್ಪಿಸಿಕೊಟ್ಟಿದೆ ಎಂದು ಬಿ.ಸಿ.ಪಾಟೀಲ್ ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಮೆಡಿಕಲ್ ಸೀಟು ಕೊಡಿಸುವ ಆಮಿಷ: ವಿದ್ಯಾರ್ಥಿಗಳ ಪೋಷಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ
ನೂತನ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ. ಪೂರಕವಾಗಿಯೇ ಕಾಯ್ದೆಯನ್ನು ತಿದ್ದುಪಡಿ ಮಾಡಲಾಗಿದೆ. ಪ್ರತಿಭಟನೆಯನ್ನು ಕೈಬಿಟ್ಟು ಸರ್ಕಾರದ ಜೊತೆ ಸಹಕರಿಸುವಂತೆ ರೈತರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.